ಮದ್ಯನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್(Arvind Kejriwal)ಅವರ ಕುಟುಂಬದವರನ್ನು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ(Rahul Gandhi) ಭೇಟಿಯಾಗಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಬಂಧನದ ಕುರಿತು ಪ್ರತಿಕ್ರಿಯಿಸಿದ ದೆಹಲಿ ಸಚಿವ ಮತ್ತು ಆಮ್ ಆದ್ಮಿ ಪಕ್ಷದ ನಾಯಕ ಅತಿಶಿ, ಜಾರಿ ನಿರ್ದೇಶನಾಲಯದ ಹಿಂದೆ ರಾಜಕೀಯ ಮಾಡುವುದನ್ನು ಬಿಜೆಪಿ ನಿಲ್ಲಿಸುವಂತೆ ಕೇಳಿಕೊಂಡರು.
ಬಿಜೆಪಿ ಪ್ರಜಾಪ್ರಭುತ್ವವನ್ನು ಕೊಲೆ ಮಾಡುತ್ತಿದೆ, ಅವರು ಇಬ್ಬರು ವಿರೋಧ ಪಕ್ಷದ ಮುಖ್ಯಮಂತ್ರಿಗಳನ್ನು ( ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್ ಅವರನ್ನು ಜೈಲಿಗೆ ಹಾಕಿದ್ದಾರೆ ಮತ್ತು ಈಗ ಇನ್ನೊಬ್ಬರು ಕೇಜ್ರಿವಾಲ್) ಅವರನ್ನು ಬಂಧಿಸಿದ್ದಾರೆ ಮತ್ತು ಪಕ್ಷದ ಬ್ಯಾಂಕ್ ಖಾತೆಯನ್ನು ಸ್ಥಗಿತಗೊಳಿಸಿದ್ದಾರೆ. ಇವೆಲ್ಲಾ ಮಾಡಿ ಚುನಾವಣೆ ಗೆಲ್ಲಬಹುದು ಎಂದು ಬಿಜೆಪಿ ಅಂದುಕೊಂಡಿರಬೇಕು ಎಂದು ಅತಿಶಿ ಹೇಳಿದ್ದಾರೆ.
ಕೇಜ್ರಿವಾಲ್ ಅವರ ಬಂಧನವನ್ನು ರದ್ದುಗೊಳಿಸಲು ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದ್ದೇವೆ ಮತ್ತು ತುರ್ತು ವಿಚಾರಣೆಯನ್ನು ಕೋರಿದ್ದೇವೆ ಎಂದು ಅತಿಶಿ ಹೇಳಿದರು. ಇದೇ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕೇಜ್ರಿವಾಲ್ ಕುಟುಂಬದೊಂದಿಗೆ ದೂರವಾಣಿಯಲ್ಲಿ ಮಾತನಾಡಿದರು. ಇಡೀ ಕಾಂಗ್ರೆಸ್ ಪಕ್ಷ ನಿಮ್ಮೊಂದಿಗಿದೆ ಎಂದು ಕುಟುಂಬಕ್ಕೆ ಭರವಸೆ ನೀಡಿದರು. ಕಾನೂನು ನೆರವು ನೀಡಬಹುದು ಎಂದು ಅಂದಾಜಿಸಲಾಗಿದೆ.
ಮತ್ತಷ್ಟು ಓದಿ: ಇಡಿ ಅಧಿಕಾರಿಗಳಿಂದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಬಂಧನ
ಸಾಮಾಜಿಕ ಜಾಲತಾಣದಲ್ಲಿ ಪ್ರಿಯಾಂಕಾ ಗಾಂಧಿ ಪ್ರತಿಕ್ರಿಯೆ ನೀಡಿದ್ದು, ಚುನಾವಣೆಯ ಕಾರಣದಿಂದ ಒಬ್ಬರನ್ನು ಗುರಿಯಾಗಿಸುವುದು ತಪ್ಪು ಅದು ಅಸಾಂವಿಧಾನಿಕ ಎಂದಿದ್ದಾರೆ. ಗುರುವಾರ ಸಂಜೆ 7 ಗಂಟೆ ಸುಮಾರಿಗೆ ಇಡಿ ಅಧಿಕಾರಿಗಳು ಕೇಜ್ರಿವಾಲ್ ಮನೆಗೆ ಬಂದು ಬಳಿಕ ವಾರಂಟ್ ತೋರಿಸಿ ಅವರ ಮನೆಯ ಪರಿಶೀಲನೆಯನ್ನೂ ನಡೆಸಿತ್ತು.
ಈಗಾಗಲೇ ಮದ್ಯ ನೀತಿ ಹಗರಣದಲ್ಲಿ ದೆಹಲಿಯ ಮಾಜಿ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ, ಸಂಸದ ಸಂಜಯ್ ಸಿಂಗ್ ಈಗಾಗಲೇ ಜೈಲಿನಲ್ಲಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ