Oscar Fernandes: ಆಸ್ಕರ್ ಫರ್ನಾಂಡಿಸ್ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲು ನಾಳೆ ಬೆಂಗಳೂರಿಗೆ ಬರುತ್ತಿದ್ದಾರೆ ರಾಹುಲ್ ಗಾಂಧಿ

ಸೆಪ್ಟೆಂಬರ್ 16) ಬೆಂಗಳೂರಿನ ಚರ್ಚ್ನಲ್ಲಿ ಆಸ್ಕರ್ ಫರ್ನಾಂಡಿಸ್ ಅಂತ್ಯ ಸಂಸ್ಕಾರ ನೆರವೇರಿಸಲು ಸಿದ್ಧತೆ ಕೈಗೊಳ್ಳಲಾಗಿದೆ. ಕೇಂದ್ರದ ಹಿರಿಯ ನಾಯಕರು ಆಸ್ಕರ್ ಅಂತಿಮ ದರ್ಶನ ಪಡೆಯಲಿದ್ದು, ರಾಹುಲ್ ಗಾಂಧಿ ಕೂಡ ಬೆಂಗಳೂರಿಗೆ ಆಗಮಿಸಲಿದ್ದಾರೆ. ಆಸ್ಕರ್ ಫರ್ನಾಂಡಿಸ್ ಅಂತ್ಯಸಂಸ್ಕಾರದಲ್ಲಿ ಭಾಗಿಯಾಗಲು ರಾಹುಲ್ ಗಾಂಧಿ ನಾಳೆ ಮಧ್ಯಾಹ್ನ 3 ಗಂಟೆಗೆ ಆಗಮಿಸುವ ನಿರೀಕ್ಷೆ ಇದೆ.

Oscar Fernandes: ಆಸ್ಕರ್ ಫರ್ನಾಂಡಿಸ್ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲು ನಾಳೆ ಬೆಂಗಳೂರಿಗೆ ಬರುತ್ತಿದ್ದಾರೆ ರಾಹುಲ್ ಗಾಂಧಿ
ರಾಹುಲ್ ಗಾಂಧಿ

ಬೆಂಗಳೂರು: ರಾಜ್ಯ ಕಂಡ ಸರಳ ಸಜ್ಜನಿಕೆಯ ರಾಜಕಾರಣಿ, ಕಾಂಗ್ರೆಸ್‌ನ ಹಿರಿಯ ನಾಯಕ, ಕರಾವಳಿಯ ಪುತ್ರ, ಕೇಂದ್ರದ ಮಾಜಿ ಸಚಿವ ಆಸ್ಕರ್ ಫರ್ನಾಂಡಿಸ್ ಇಹಲೋಕ ತ್ಯಜಿಸಿದ್ದಾರೆ. ಆಸ್ಕರ್ ಫರ್ನಾಂಡಿಸ್ರ ಅಂತಿಮ ದರ್ಶನಕ್ಕಾಗಿ ನಾಳೆ ಬೆಂಗಳೂರಿಗೆ ಹಿರಿಯ ನಾಯಕರು ಬರುವ ಸಾಧ್ಯತೆ ಇದೆ.

ನಾಳೆ ಬೆಂಗಳೂರಿಗೆ ರಾಹುಲ್ ಗಾಂಧಿ ಆಗಮನ
ಉಡುಪಿಯ ಮದರ್ ಆಫ್ ಸಾರೋಸ್ ಚರ್ಚ್ನಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಅಂತಿಮ ದರ್ಶನದ ಬಳಿಕ ಇಂದು (ಸೆಪ್ಟೆಂಬರ್15) ಬೆಂಗಳೂರಿಗೆ ಫರ್ನಾಂಡಿಸ್ ಮೃತದೇಹ ರವಾನಿಸಲಾಗಿದೆ. ಸೆಪ್ಟೆಂಬರ್ 15 ರಂದು ಪಾರ್ಥಿವ ಶರೀರವನ್ನು ಬೆಂಗಳೂರಿನಲ್ಲೇ ಇರಿಸಿ ಬಳಿಕ ನಾಳೆ (ಸೆಪ್ಟೆಂಬರ್ 16) ಬೆಂಗಳೂರಿನ ಚರ್ಚ್ನಲ್ಲಿ ಅಂತ್ಯ ಸಂಸ್ಕಾರ ನೆರವೇರಿಸಲು ಸಿದ್ಧತೆ ಕೈಗೊಳ್ಳಲಾಗಿದೆ. ಕೇಂದ್ರದ ಹಿರಿಯ ನಾಯಕರು ಆಸ್ಕರ್ ಅಂತಿಮ ದರ್ಶನ ಪಡೆಯಲಿದ್ದು, ರಾಹುಲ್ ಗಾಂಧಿ ಕೂಡ ಬೆಂಗಳೂರಿಗೆ ಆಗಮಿಸಲಿದ್ದಾರೆ. ಆಸ್ಕರ್ ಫರ್ನಾಂಡಿಸ್ ಅಂತ್ಯಸಂಸ್ಕಾರದಲ್ಲಿ ಭಾಗಿಯಾಗಲು ರಾಹುಲ್ ಗಾಂಧಿ ನಾಳೆ ಮಧ್ಯಾಹ್ನ 3 ಗಂಟೆಗೆ ಆಗಮಿಸುವ ನಿರೀಕ್ಷೆ ಇದೆ.

ಇನ್ನು ಆಸ್ಕರ್ ಫರ್ನಾಂಡಿಸ್ ಅವರ ನಿಧನಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಂತಾಪ ಸೂಚಿಸಿದ್ದರು, ಫರ್ನಾಂಡಿಸ್ ಅವರ ಸಾವು “ವೈಯಕ್ತಿಕ ನಷ್ಟ” ಎಂದು ಟ್ವೀಟ್ ಮಾಡಿದ್ದರು.

ಅಗಲಿದ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಶ್ರೀ ಆಸ್ಕರ್ ಫರ್ನಾಂಡೀಸ್ ಅವರ ಪಾರ್ಥಿವ ಶರೀರವನ್ನು ಇಂದು ಸಂಜೆ 5.00 ಗಂಟೆಗೆ ದೇವನಹಳ್ಳಿಯ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತರಲಾಗುತ್ತಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಾಗೂ ಪಕ್ಷದ ಹಲವು ನಾಯಕರು, ಕಾರ್ಯಕರ್ತರು, ಅಭಿಮಾನಿಗಳು ಬರಮಾಡಿಕೊಳ್ಳಲಿದ್ದಾರೆ. ಇಂದು ರಾತ್ರಿ ಪಾರ್ಥಿವ ಶರೀರವನ್ನು ಶೈತ್ಯಾಗಾರದಲ್ಲಿ ಇಡಲಾಗುತ್ತದೆ. ನಾಳೆ ಬೆಳಿಗ್ಗೆ 10.00 ಗಂಟೆಯಿಂದ 12 ಗಂಟೆಯವರೆಗೂ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಪಕ್ಷದ ಕಾರ್ಯಕರ್ತರು, ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಉಡುಪಿಯ ಮುನಿಸಿಪಾಲಿಟಿಯಿಂದ ರಾಜಕೀಯ ಜೀವನ ಆರಂಭಿಸಿ, ದೆಹಲಿಯ ಸಂಸತ್ ಭವನದ ತನಕ ಛಾಪು ಮೂಡಿಸಿದ್ದ ಆಸ್ಕರ್ ಅಗಲಿಕೆ ರಾಜಕೀಯ ವಲಯಕ್ಕೆ ತುಂಬಲಾಗದ ನಷ್ಟವಾಗಿದೆ. ಗಾಂಧಿ ಕುಟುಂಬಕ್ಕೆ ಆಪ್ತರಾಗಿದ್ದ ಆಸ್ಕರ್ ಸಾಮಾನ್ಯ ಕಾರ್ಯಕರ್ತನಿಗೂ ಸಿಗುತ್ತಿದ್ದರು. ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಆಸ್ಕರ್, ಜುಲೈ 19ರಂದು ಮನೆಯಲ್ಲಿ ಯೋಗ ಮಾಡುತ್ತಿದ್ದಾಗ ಕುಸಿದು ಬಿದ್ದು ತಲೆಗೆ ಏಟು ಮಾಡಿಕೊಂಡಿದ್ದರು. ಆಗ ಮೆದುಳಿನಲ್ಲಿ ರಕ್ತಸ್ರಾವವಾಗಿ ಕೋಮಾಗೆ ಜಾರಿದ್ದರು. ಹೀಗೆ ಕೋಮಾಗೆ ಹೋದವರು ಮತ್ತೆ ಮರಳಿ ಮನೆಗೆ ಬರಲೇ ಇಲ್ಲ. ಚಿಕಿತ್ಸೆ ಪಡೆಯುತ್ತಲೇ ಬಾರದ ಲೋಕಕ್ಕೆ ತೆರಳಿರುವ ಆಸ್ಕರ್ ಫರ್ನಾಂಡಿಸ್ರನ್ನ ನೆನೆದು ಗಣ್ಯರು ಕಂಬನಿ ಮಿಡಿದಿದ್ದಾರೆ.

ಇದನ್ನೂ ಓದಿ: Oscar Fernandes Death: ಆಸ್ಕರ್ ಫರ್ನಾಂಡಿಸ್ ಪಾರ್ಥಿವ ಶರೀರ ಉಡುಪಿಗೆ ಶಿಫ್ಟ್, ಸೆಪ್ಟೆಂಬರ್ 16 ರಂದು ಬೆಂಗಳೂರಲ್ಲಿ ಅಂತ್ಯ ಸಂಸ್ಕಾರ

Click on your DTH Provider to Add TV9 Kannada