Wayanad Landslide: ಪ್ರವಾಹ, ಭೂಕುಸಿತದಿಂದ ಕೇರಳ ತತ್ತರ; ವಯನಾಡಿಗೆ ಇಂದು ರಾಹುಲ್ ಗಾಂಧಿ ಭೇಟಿ

Kerala Floods: ಕೇರಳದ ವಯನಾಡಿನಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿ 2ನೇ ಬಾರಿ ಆಯ್ಕೆಯಾಗಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇತ್ತೀಚೆಗಷ್ಟೆ ರಾಜೀನಾಮೆ ನೀಡಿ ರಾಯ್​ಬರೇಲಿ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡಿದ್ದರು. ಆದರೆ, ವಯನಾಡಿನ ಜನರ ಎಲ್ಲ ಕಷ್ಟಗಳಿಗೆ ಸ್ಪಂದಿಸುವುದಾಗಿ ಭರವಸೆ ನೀಡಿದ್ದರು. ಇಂದು ಅವರು ವಯನಾಡಿನ ಭೂಕುಸಿತವಾದ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ.

Wayanad Landslide: ಪ್ರವಾಹ, ಭೂಕುಸಿತದಿಂದ ಕೇರಳ ತತ್ತರ; ವಯನಾಡಿಗೆ ಇಂದು ರಾಹುಲ್ ಗಾಂಧಿ ಭೇಟಿ
ಭೂಕುಸಿತ
Follow us
ಸುಷ್ಮಾ ಚಕ್ರೆ
|

Updated on: Jul 31, 2024 | 7:52 AM

ವಯನಾಡು: ಲೋಕಸಭೆಯ ವಿರೋಧ ಪಕ್ಷದ ನಾಯಕ ಹಾಗೂ ವಯನಾಡಿನ ಮಾಜಿ ಸಂಸದ ರಾಹುಲ್ ಗಾಂಧಿ ಇಂದು ಕೇರಳದ ವಯನಾಡು ಭೂಕುಸಿತ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಇಂದು ಬೆಳಗ್ಗೆ ದೆಹಲಿಯಿಂದ ವಿಶೇಷ ವಿಮಾನದಲ್ಲಿ ಮೈಸೂರಿಗೆ ತೆರಳಲಿದ್ದಾರೆ. ನಂತರ ರಸ್ತೆ ಮಾರ್ಗವಾಗಿ ಕೇರಳದ ಪ್ರವಾಹಪೀಡಿತ ಪ್ರದೇಶವಾದ ಮೆಪ್ಪಾಡಿ ತಲುಪಲಿದ್ದಾರೆ. ನಂತರ ವಯನಾಡು, ಮೆಪ್ಪಾಡಿಯಲ್ಲಿ ಕಾರ್ಯಾಚರಿಸುತ್ತಿರುವ ವಿವಿಧ ಪರಿಹಾರ ಶಿಬಿರಗಳಿಗೆ ಭೇಟಿ ನೀಡಲಿದ್ದಾರೆ. ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿರುವ ವಿಮ್ಸ್ ಆಸ್ಪತ್ರೆಗೆ ಕೂಡ ರಾಹುಲ್ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 2.30ಕ್ಕೆ ಮೆಪ್ಪಾಡಿಯಿಂದ ಮೈಸೂರಿಗೆ ಹಿಂತಿರುಗುವ ರಾಹುಲ್ ಗಾಂಧಿ ಸಂಜೆ ದೆಹಲಿಗೆ ವಾಪಸಾಗಲಿದ್ದಾರೆ.

ಭೂಕುಸಿತದ ಬಗ್ಗೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ವಯನಾಡ್ ಜಿಲ್ಲಾಧಿಕಾರಿ ಅವರೊಂದಿಗೆ ರಾಹುಲ್ ಗಾಂಧಿ ಮಂಗಳವಾರ ದೂರವಾಣಿ ಮೂಲಕ ಮಾತನಾಡಿದ್ದಾರೆ. ರಕ್ಷಣಾ ಕಾರ್ಯಾಚರಣೆಗೆ ಅಗತ್ಯವಿರುವ ಎಲ್ಲ ತುರ್ತು ನೆರವು ನೀಡಲಾಗುವುದು ಎಂದು ತಿಳಿಸಿದ್ದಾರೆ. ವಯನಾಡಿನಲ್ಲಿ ಸಂಭವಿಸಿದ ಅನಾಹುತಕ್ಕೆ ಸಂತಾಪ ವ್ಯಕ್ತಪಡಿಸಿದ ಅವರು, ವಯನಾಡಿನಲ್ಲಿ ತಕ್ಷಣದ ಮಧ್ಯಸ್ಥಿಕೆಗೆ ಕೇಂದ್ರ ಸಚಿವರೊಂದಿಗೆ ಮಾತನಾಡುವುದಾಗಿ ಮತ್ತು ಯುಡಿಎಫ್ ಕಾರ್ಯಕರ್ತರು ನೇರವಾಗಿ ರಕ್ಷಣಾ ಕಾರ್ಯಾಚರಣೆಗೆ ಬರಬೇಕು ಎಂದು ಹೇಳಿದ್ದಾರೆ.

ಇದನ್ನೂ ಓದಿ: Wayanad Landslide: ವಯನಾಡು ಭೂಕುಸಿತದಲ್ಲಿ 98 ಜನ ಸಾವು; ಒಗ್ಗಟ್ಟಾಗಿ ರಕ್ಷಣಾ ಕಾರ್ಯಾಚರಣೆಗೆ ಕೇರಳ ಸಿಎಂ ಕರೆ

ಈ ಬಾರಿ ವಯನಾಡು ಲೋಕಸಭಾ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಪ್ರಿಯಾಂಕಾ ಗಾಂಧಿ ಕೂಡ ರಾಹುಲ್ ಗಾಂಧಿಯ ಜೊತೆಗೆ ವಯನಾಡಿಗೆ ಭೇಟಿ ನೀಡಲಿದ್ದಾರೆ.

ಮಂಗಳವಾರ ಈ ಬಗ್ಗೆ ಎಕ್ಸ್​ನಲ್ಲಿ ಪೋಸ್ಟ್ ಮಾಡಿದ್ದ ರಾಹುಲ್ ಗಾಂಧಿ, “ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡಿರುವ ಕುಟುಂಬಗಳಿಗೆ ನನ್ನ ಹೃತ್ಪೂರ್ವಕ ಸಂತಾಪಗಳು ಹೊರಡುತ್ತವೆ. ಇನ್ನೂ ಸಿಕ್ಕಿಬಿದ್ದಿರುವವರನ್ನು ಶೀಘ್ರದಲ್ಲೇ ಸುರಕ್ಷಿತವಾಗಿ ಕರೆತರಲಾಗುವುದು. ನಾನು ಕೇರಳ ಮುಖ್ಯಮಂತ್ರಿ ಮತ್ತು ವಯನಾಡ್ ಜಿಲ್ಲಾಧಿಕಾರಿಯೊಂದಿಗೆ ಮಾತನಾಡಿದ್ದೇನೆ. ರಕ್ಷಣಾ ಕಾರ್ಯಾಚರಣೆಗೆ ಬೇಕಾದ ಸೌಲಭ್ಯ ಒದಗಿಸುವುದಾಗಿ ಸೂಚಿಸಿದ್ದೇನೆ” ಎಂದು ಹೇಳಿದ್ದರು.

ಇದನ್ನೂ ಓದಿ: ವಯನಾಡಿನಲ್ಲಿ ಗುಡ್ಡ ಕುಸಿತ; ಮಾಧವ್ ಗಾಡ್ಗೀಳ್ ಸಮಿತಿಯ ವರದಿ ನಿರ್ಲಕ್ಷ್ಯವೇ ಈ ದುರಂತಕ್ಕೆ ಕಾರಣ?

“ಪ್ರೀತಿಪಾತ್ರರನ್ನು ಕಳೆದುಕೊಂಡಿರುವ ಎಲ್ಲರೊಂದಿಗೂ ನನ್ನ ಹೃತ್ಪೂರ್ವಕ ಸಂತಾಪಗಳು. ಎಲ್ಲರನ್ನೂ ಆದಷ್ಟು ಬೇಗ ಸುರಕ್ಷಿತವಾಗಿ ಕರೆತರಲೆಂದು ನಾನು ಭಾವಿಸುತ್ತೇನೆ ಮತ್ತು ಪ್ರಾರ್ಥಿಸುತ್ತೇನೆ” ಎಂದು ಪ್ರಿಯಾಂಕಾ ಗಾಂಧಿ ಕೂಡ ಪೋಸ್ಟ್ ಮಾಡಿದ್ದರು. ಕೇರಳದ ವಯನಾಡಿನಲ್ಲಿ ಈಗಾಗಲೇ ಸಾವಿನ ಸಂಖ್ಯೆ 110ರ ಗಡಿ ದಾಟಿದೆ.

ಭಾರತೀಯ ವಾಯುಪಡೆಯ ಎರಡು ಹೆಲಿಕಾಪ್ಟರ್‌ಗಳನ್ನು ಕೂಡ ಸಜ್ಜುಗೊಳಿಸಲಾಗಿದೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಕಚೇರಿಯ ಹೇಳಿಕೆ ತಿಳಿಸಿದೆ. ಈ ಪ್ರದೇಶದಲ್ಲಿ ಇಂಟರ್ನೆಟ್ ಸಂಪರ್ಕವಿಲ್ಲದ ಕಾರಣ ರಕ್ಷಣಾ ಪ್ರಯತ್ನಗಳು ಸವಾಲಾಗಿಯೇ ಉಳಿದಿವೆ ಎಂದು ರಕ್ಷಣಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್
ನಾನು ನಿಷ್ಠಾವಂತ ಕಾರ್ಯಕರ್ತ, ಸತೀಶ್ ಜಾರಕಿಹೊಳಿ ಹಿಂಬಾಲಕನಲ್ಲ: ಕಾರ್ಯಕರ್ತ
ನಾನು ನಿಷ್ಠಾವಂತ ಕಾರ್ಯಕರ್ತ, ಸತೀಶ್ ಜಾರಕಿಹೊಳಿ ಹಿಂಬಾಲಕನಲ್ಲ: ಕಾರ್ಯಕರ್ತ
ಸುಮ್ಮನಿರುವಂತೆ ಸತೀಶ್ ಹೇಳಿದರೂ ಕೂಗಾಟ ನಿಲ್ಲಿಸದ ಕಾರ್ಯಕರ್ತರು!
ಸುಮ್ಮನಿರುವಂತೆ ಸತೀಶ್ ಹೇಳಿದರೂ ಕೂಗಾಟ ನಿಲ್ಲಿಸದ ಕಾರ್ಯಕರ್ತರು!
ಈ ಸೀಸನ್​ನ ಕೊನೆಯ ನಾಮಿನೇಷನ್​ನಲ್ಲಿ ಮಂಜಣ್ಣ ಟಾರ್ಗೆಟ್
ಈ ಸೀಸನ್​ನ ಕೊನೆಯ ನಾಮಿನೇಷನ್​ನಲ್ಲಿ ಮಂಜಣ್ಣ ಟಾರ್ಗೆಟ್
ಬಿಎಂಟಿಸಿ ಟಿಕೆಟ್ ದರ ಹೆಚ್ಚಿರುವ ಬೆನ್ನಲ್ಲೇ ಮೆಟ್ರೋ ಪ್ರಯಾಣ ದರ ಏರಿಕೆ!
ಬಿಎಂಟಿಸಿ ಟಿಕೆಟ್ ದರ ಹೆಚ್ಚಿರುವ ಬೆನ್ನಲ್ಲೇ ಮೆಟ್ರೋ ಪ್ರಯಾಣ ದರ ಏರಿಕೆ!
ಜನಪ್ರತಿನಿಧಿಗಳು ಎಲೆಕ್ಟ್ರಾನಿಕ್ ಮಾಧ್ಯಮಗಳ ನ್ಯೂಸ್ ವೀಕ್ಷಿಸುವುದಿಲ್ಲವೇ?
ಜನಪ್ರತಿನಿಧಿಗಳು ಎಲೆಕ್ಟ್ರಾನಿಕ್ ಮಾಧ್ಯಮಗಳ ನ್ಯೂಸ್ ವೀಕ್ಷಿಸುವುದಿಲ್ಲವೇ?
ಡಿಕೆ ಸುರೇಶ್​ಗೆ ಕೆಪಿಸಿಸಿ ಅಧ್ಯಕ್ಷನಾಗುವ ಹಂಬಲವಿದೆಯೇ?
ಡಿಕೆ ಸುರೇಶ್​ಗೆ ಕೆಪಿಸಿಸಿ ಅಧ್ಯಕ್ಷನಾಗುವ ಹಂಬಲವಿದೆಯೇ?
ಸಚಿವೆಯನ್ನು ಮಾತಾಡಿಸಲು ಆಸ್ಪತ್ರೆಗೆ ಭೇಟಿ ನೀಡದಂತೆ ಜನರಿಗೆ ವೈದ್ಯರ ಮನವಿ
ಸಚಿವೆಯನ್ನು ಮಾತಾಡಿಸಲು ಆಸ್ಪತ್ರೆಗೆ ಭೇಟಿ ನೀಡದಂತೆ ಜನರಿಗೆ ವೈದ್ಯರ ಮನವಿ