ರಾಹುಲ್ ಗಾಂಧಿ ಇಂದು ಗುಜರಾತ್​ಗೆ ಪ್ರವಾಸ; ರಾಜ್‌ಕೋಟ್, ಮೋರ್ಬಿ ದುರಂತ ಸಂತ್ರಸ್ತರ ಭೇಟಿ

ಹಿರಿಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಇಂದು ಗುಜರಾತ್​ನಲ್ಲಿ ಮಾತನಾಡಲಿದ್ದಾರೆ. ಹಾಗೇ, ರಾಜ್‌ಕೋಟ್ ಗೇಮ್ ಝೋನ್ ಬೆಂಕಿ, ವಡೋದರ ದೋಣಿ ಮುಳುಗುವಿಕೆ ಮತ್ತು ಮೋರ್ಬಿ ಸೇತುವೆ ಕುಸಿತ ಸೇರಿದಂತೆ ಇತ್ತೀಚಿನ ದುರಂತಗಳ ಸಂತ್ರಸ್ತ ಕುಟುಂಬಗಳನ್ನು ಭೇಟಿ ಮಾಡಲು ಅಹಮದಾಬಾದ್‌ಗೆ ಭೇಟಿ ನೀಡಲಿದ್ದಾರೆ.

ರಾಹುಲ್ ಗಾಂಧಿ ಇಂದು ಗುಜರಾತ್​ಗೆ ಪ್ರವಾಸ; ರಾಜ್‌ಕೋಟ್, ಮೋರ್ಬಿ ದುರಂತ ಸಂತ್ರಸ್ತರ ಭೇಟಿ
ರಾಹುಲ್ ಗಾಂಧಿ
Follow us
|

Updated on: Jul 06, 2024 | 7:40 AM

ನವದೆಹಲಿ: ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಸಂಸದ ರಾಹುಲ್ ಗಾಂಧಿ ಇಂದು (ಶನಿವಾರ) ಗುಜರಾತ್​ನ ಅಹಮದಾಬಾದ್‌ಗೆ ಭೇಟಿ ನೀಡಲಿದ್ದಾರೆ. ಅಲ್ಲಿ ಅವರು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದು, ಗುಜರಾತ್‌ನಲ್ಲಿ ಇತ್ತೀಚಿನ ದುರಂತಗಳಿಂದ ಸಂತ್ರಸ್ತರ ಕುಟುಂಬಗಳನ್ನು ಭೇಟಿ ಮಾಡಲಿದ್ದಾರೆ.

ಗುಜರಾತ್​​ ಪ್ರವಾಸದ ಸಮಯದಲ್ಲಿ ರಾಹುಲ್ ಗಾಂಧಿ ರಾಜ್‌ಕೋಟ್ ಗೇಮ್ ಝೋನ್ ಬೆಂಕಿ ದುರಂತ, ವಡೋದರಾದ ದೋಣಿ ಮುಳುಗುವಿಕೆ ಮತ್ತು ಮೋರ್ಬಿ ಸೇತುವೆ ಕುಸಿತ ಸೇರಿದಂತೆ ವಿವಿಧ ಘಟನೆಗಳಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ಸಂತಾಪ ಸೂಚಿಸಲಿದ್ದಾರೆ.

ಗುಜರಾತ್ ಕಾಂಗ್ರೆಸ್ ಅಧ್ಯಕ್ಷ ಶಕ್ತಿಸಿನ್ಹ್ ಗೋಹಿಲ್ ಅವರು ರಾಹುಲ್ ಗಾಂಧಿಯ ಪ್ರವಾಸವನ್ನು ದೃಢಪಡಿಸಿದ್ದಾರೆ. “ರಾಹುಲ್ ಗಾಂಧಿಯವರು ಶನಿವಾರ ಮಧ್ಯಾಹ್ನ 12.30ರ ಸುಮಾರಿಗೆ ಜಿಪಿಸಿಸಿ ಕಚೇರಿಗೆ ಆಗಮಿಸುತ್ತಾರೆ. ಅವರು ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮತ್ತು ರಾಜ್​ಕೋಟ್ ಗೇಮ್ ಝೋನ್ ಬೆಂಕಿ ಮತ್ತು ಇತರ ದುರಂತಗಳಲ್ಲಿ ಸಾವನ್ನಪ್ಪಿದ ಸಂತ್ರಸ್ತರ ಸಂಬಂಧಿಕರನ್ನು ಭೇಟಿ ಮಾಡುತ್ತಾರೆ” ಎಂದಿದ್ದಾರೆ.

ಇದನ್ನೂ ಓದಿ: ಆಗಸ್ಟ್​​ನಲ್ಲಿ ಮೋದಿ ಸರ್ಕಾರದ ಪತನ; ಲಾಲು ಪ್ರಸಾದ್ ಯಾದವ್ ಸ್ಫೋಟಕ ಹೇಳಿಕೆ

ಗಮನಾರ್ಹ ಸಂಗತಿಯೆಂದರೆ, ರಾಹುಲ್ ಗಾಂಧಿಯವರು ತಮ್ಮ ಗುಜರಾತ್ ಭೇಟಿಯ ಸಂದರ್ಭದಲ್ಲಿ ಗುಜರಾತ್ ಪ್ರದೇಶ ಕಾಂಗ್ರೆಸ್ ಸಮಿತಿ (ಜಿಪಿಸಿಸಿ) ಕಚೇರಿಯ ಹೊರಗೆ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಘರ್ಷಣೆ ಸಂಭವಿಸಿದ ನಂತರ ಬಂಧಿತರಾಗಿರುವ ಐವರು ಕಾಂಗ್ರೆಸ್ ಕಾರ್ಯಕರ್ತರ ಕುಟುಂಬಗಳನ್ನು ಭೇಟಿಯಾಗಲಿರುವುದು ವಿಶೇಷ. ಲೋಕಸಭೆಯಲ್ಲಿ ರಾಹುಲ್ ಗಾಂಧಿಯವರು ಮಾಡಿದ್ದ ಹಿಂದೂ ವಿರೋಧಿ ಹೇಳಿಕೆಗಳಿಂದ ಉಂಟಾದ ಘರ್ಷಣೆಯು ಕಲ್ಲು ತೂರಾಟಕ್ಕೆ ಕಾರಣವಾಗಿತ್ತು. ಈ ಘಟನೆಯಲ್ಲಿ ಸಹಾಯಕ ಪೊಲೀಸ್ ಕಮಿಷನರ್ ಸೇರಿದಂತೆ ಐವರು ಪೊಲೀಸರಿಗೆ ಗಾಯವಾಗಿತ್ತು.

ಇದನ್ನೂ ಓದಿ: PM Modi Speech Highlights: 99 ಅಂಕ ಪಡೆದ ಮಗು ರಾಹುಲ್ ಗಾಂಧಿ; ಸದನದಲ್ಲಿ ಪ್ರಧಾನಿ ಮೋದಿ ಲೇವಡಿ

ಇದಲ್ಲದೆ, ಈ ಘಟನಾ ಸ್ಥಳದ ದೃಶ್ಯಗಳು ವೈರಲ್ ಆಗಿದ್ದು, ಕಾಂಗ್ರೆಸ್‌ನ ಗುಜರಾತ್ ಪ್ರಧಾನ ಕಛೇರಿ ರಾಜೀವ್ ಗಾಂಧಿ ಭವನದ ಹೊರಗೆ ಎರಡೂ ಕಡೆಯ ಪಕ್ಷದ ಕಾರ್ಯಕರ್ತರು ಪರಸ್ಪರ ಹೊಡೆದಾಡಿಕೊಳ್ಳುವುದನ್ನು ನೋಡಬಹುದು. ಪೊಲೀಸರು ಮಧ್ಯಪ್ರವೇಶಿಸಲು ಯತ್ನಿಸಿದಾಗಲೂ ಕೆಲವು ವ್ಯಕ್ತಿಗಳು ಪರಸ್ಪರ ಕಲ್ಲು ತೂರಾಟ ನಡೆಸುತ್ತಿರುವುದು ಕಂಡುಬಂದಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ