ರಾಹುಲ್ ಗಾಂಧಿ ಜನರ ದಾರಿ ತಪ್ಪಿಸುತ್ತಿದ್ದಾರೆ; ಅಗ್ನಿವೀರ್ ಯೋಜನೆ ಕುರಿತು ಕೇಂದ್ರ ಸಚಿವ ರಾಜನಾಥ್ ಸಿಂಗ್ ಸ್ಪಷ್ಟನೆ

|

Updated on: Oct 02, 2024 | 5:27 PM

ಅಗ್ನಿವೀರ್ ಯೋಜನೆ ಕುರಿತು ಕಾಂಗ್ರೆಸ್ ಮತ್ತು ರಾಹುಲ್ ಗಾಂಧಿ ಸುಳ್ಳು ಮಾಹಿತಿ ಹರಡುತ್ತಿದ್ದಾರೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಟೀಕಿಸಿದ್ದಾರೆ. ಪರಿಹಾರ ಪ್ಯಾಕೇಜ್‌ಗಳು, ಉದ್ಯೋಗ ಮೀಸಲಾತಿಗಳು ಮತ್ತು ವಿಮಾ ನಿಬಂಧನೆಗಳು ಸೇರಿದಂತೆ ಅಗ್ನಿವೀರ್ ಪ್ರಯೋಜನಗಳ ಬಗ್ಗೆ ರಾಜನಾಥ್ ಸಿಂಗ್ ಸ್ಪಷ್ಟಪಡಿಸಿದ್ದಾರೆ. ಮುಂಬರುವ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ಖಚಿತ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ರಾಹುಲ್ ಗಾಂಧಿ ಜನರ ದಾರಿ ತಪ್ಪಿಸುತ್ತಿದ್ದಾರೆ; ಅಗ್ನಿವೀರ್ ಯೋಜನೆ ಕುರಿತು ಕೇಂದ್ರ ಸಚಿವ ರಾಜನಾಥ್ ಸಿಂಗ್ ಸ್ಪಷ್ಟನೆ
ರಾಜನಾಥ್ ಸಿಂಗ್
Follow us on

ನವದೆಹಲಿ: ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಬುಧವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ರಾಹುಲ್ ಗಾಂಧಿ ಮತ್ತು ಅವರ ಪಕ್ಷವು ಸಾರ್ವಜನಿಕರನ್ನು ತಪ್ಪುದಾರಿಗೆ ಎಳೆಯುತ್ತಿದೆ. ಅಗ್ನಿವೀರ್ ಯೋಜನೆ ಬಗ್ಗೆ ಸುಳ್ಳು ಮಾಹಿತಿಯನ್ನು ಹರಡುತ್ತಿದೆ ಎಂದು ಆರೋಪಿಸಿದ್ದಾರೆ.

ಎಎನ್‌ಐ ಜೊತೆ ಈ ಬಗ್ಗೆ ಮಾತನಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್, “ರಾಹುಲ್ ಗಾಂಧಿ ಅವರು ಸಾರ್ವಜನಿಕರನ್ನು ದಾರಿ ತಪ್ಪಿಸಲು ಪ್ರಯತ್ನಿಸುತ್ತಿದ್ದಾರೆ. ಸಶಸ್ತ್ರ ಪಡೆಗಳಲ್ಲಿ ಯುವ ರಕ್ತದ ಅವಶ್ಯಕತೆ ಬಹಳ ಹಿಂದಿನಿಂದಲೂ ಇದೆ. ಬ್ರಿಟನ್, ಯುಎಸ್, ಇಸ್ರೇಲ್, ರಷ್ಯಾ ಮತ್ತು ಚೀನಾದಂತಹ ದೇಶಗಳಲ್ಲಿ ಯುವಜನರೇ ಸಶಸ್ತ್ರ ಪಡೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಇದನ್ನು ಗಮನದಲ್ಲಿಟ್ಟುಕೊಂಡು, ಸಾಕಷ್ಟು ಚರ್ಚೆಗಳ ನಂತರ ಅಗ್ನಿವೀರ್ ಯೋಜನೆಯನ್ನು ಪರಿಚಯಿಸಲಾಯಿತು ಎಂದಿದ್ದಾರೆ.

ಇದನ್ನೂ ಓದಿ: ಕಸ ಹರಡುವುದಲ್ಲ, ಸ್ವಚ್ಛತೆಯು ನಿತ್ಯದ ಕಾಯಕವಾಗಬೇಕು: ನರೇಂದ್ರ ಮೋದಿ

ಅಗ್ನಿವೀರ್ ಸೈನಿಕರು ತಮ್ಮ ಸೇವೆಗೆ ಯಾವುದೇ ವೇತನವನ್ನು ಪಡೆಯುವುದಿಲ್ಲ ಎಂದು ಕಾಂಗ್ರೆಸ್ ಸುಳ್ಳು ಮಾಹಿತಿಯನ್ನು ಹರಡುತ್ತಿದೆ ಎಂದು ಆರೋಪಿಸಿದ ಅವರು, ಅಗ್ನಿವೀರರು ಒಂದು ಬಾರಿ ಸೇವಾ ನಿಧಿ ಪ್ಯಾಕೇಜ್ ಅಡಿಯಲ್ಲಿ 12 ಲಕ್ಷ ರೂಪಾಯಿಗಳನ್ನು ಪಡೆಯುತ್ತಾರೆ ಮತ್ತು 44 ಲಕ್ಷ ರೂಪಾಯಿಗಳ ಎಕ್ಸ್ ಗ್ರೇಷಿಯಾ ಮೊತ್ತವನ್ನು ಪಡೆಯುತ್ತಾರೆ ಎಂದು ಸ್ಪಷ್ಟಪಡಿಸಿದರು.


ಅಗ್ನಿವೀರ್ ಸೈನಿಕರು ತಮ್ಮ ಸೇವೆಗೆ ಯಾವುದೇ ವೇತನವನ್ನು ಪಡೆಯುವುದಿಲ್ಲ ಎಂದು ಕಾಂಗ್ರೆಸ್ ಪಕ್ಷವು ಸುಳ್ಳು ಮಾಹಿತಿಯನ್ನು ಹರಡುತ್ತಿದೆ. ಆದರೆ, ಸತ್ಯವೇನೆಂದರೆ ಅಗ್ನಿವೀರರು ಒಂದು ಬಾರಿ ಸೇವಾ ನಿಧಿ ಪ್ಯಾಕೇಜ್ ಅಡಿಯಲ್ಲಿ 12 ಲಕ್ಷ ರೂಪಾಯಿಗಳನ್ನು ಪಡೆಯುತ್ತಾರೆ. ಕಡ್ಡಾಯ ಸೇವಾ ಅವಧಿಯನ್ನು ಪೂರ್ಣಗೊಳಿಸಿದ ನಂತರ ಸೇವೆಯಲ್ಲಿ ಉಳಿಯದ ಅಗ್ನಿವೀರರಿಗೆ ಸರ್ಕಾರಿ ಉದ್ಯೋಗಗಳಲ್ಲಿ ಮೀಸಲಾತಿ ನೀಡಲಾಗಿದೆ ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ.

ಇದನ್ನೂ ಓದಿ: ಜಾರ್ಖಂಡ್‌ನಲ್ಲಿ 83 ಸಾವಿರ ಕೋಟಿಗೂ ಹೆಚ್ಚು ಮೌಲ್ಯದ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ

ಮೃತ ಅಗ್ನಿವೀರರ ಕುಟುಂಬಕ್ಕೆ ಪ್ರತಿಯಾಗಿ ಏನೂ ಸಿಗುವುದಿಲ್ಲ ಎಂದು ಕಾಂಗ್ರೆಸ್ ಪಕ್ಷ ಮತ್ತೊಂದು ಸುಳ್ಳನ್ನು ಹರಡಿದೆ. ಆದರೆ, ಅಗ್ನಿವೀರರನ್ನು ಸೇವೆಯ ಸಮಯದಲ್ಲಿ ಸಾವನ್ನಪ್ಪಿದರೆ ಅವರ ಕುಟುಂಬಗಳಿಗೆ 1.5 ಕೋಟಿ ರೂಪಾಯಿಗಳನ್ನು ನೀಡಲಾಗುತ್ತದೆ. ವಿವಿಧ ಬ್ಯಾಂಕ್‌ಗಳೊಂದಿಗಿನ ತಿಳಿವಳಿಕೆ ಒಪ್ಪಂದಕ್ಕೆ ಅಗ್ನಿವೀರ್‌ಗಳಿಗೆ 50 ಲಕ್ಷದಿಂದ 1 ಕೋಟಿಯವರೆಗಿನ ವಿಮೆಯನ್ನು ನೀಡಲಾಗುತ್ತದೆ. ಇದಕ್ಕಾಗಿ ಅವರು ಯಾವುದೇ ಪ್ರೀಮಿಯಂ ಪಾವತಿಸಬೇಕಾಗಿಲ್ಲ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

ಹರಿಯಾಣದಲ್ಲಿ ಸತತ ಮೂರನೇ ಅವಧಿಗೆ ಸರ್ಕಾರ ರಚಿಸುವ ಬಿಜೆಪಿಯ ಸಾಮರ್ಥ್ಯದ ಬಗ್ಗೆ ರಾಜನಾಥ್ ಸಿಂಗ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅದರಲ್ಲಿ ಯಾವುದೇ ಸಂದೇಹವಿಲ್ಲ ಮತ್ತು ಬಿಜೆಪಿ ಹಿಂದೆಂದಿಗಿಂತಲೂ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತದೆ ಎಂದು ಹೇಳಿದ್ದಾರೆ. ಹರಿಯಾಣದಲ್ಲಿ 90 ಸದಸ್ಯರ ರಾಜ್ಯ ವಿಧಾನಸಭೆಯನ್ನು ಆಯ್ಕೆ ಮಾಡಲು ಅಕ್ಟೋಬರ್ 5ರಂದು ಚುನಾವಣೆ ನಡೆಯಲಿದೆ. ಅಕ್ಟೋಬರ್ 8ರಂದು ಮತ ಎಣಿಕೆ ನಡೆಯಲಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ