Rahul Gandhi: ಪ್ರಜಾಪ್ರಭುತ್ವವನ್ನು ಉಳಿಸಲು ಮಿತ್ರಕಾಲದ ವಿರುದ್ಧ ಹೋರಾಟ ಇದು: ರಾಹುಲ್ ಗಾಂಧಿ

ಸೋಮವಾರದ ವಿಚಾರಣೆಯ ಕೆಲವೇ ನಿಮಿಷಗಳ ನಂತರ ಹಿಂದಿಯಲ್ಲಿ ಟ್ವೀಟ್ ಮಾಡಿದ ರಾಹುಲ್ "ಇದು ಪ್ರಜಾಪ್ರಭುತ್ವವನ್ನು ಉಳಿಸಲು 'ಮಿತ್ರಕಾಲ' ವಿರುದ್ಧದ ಹೋರಾಟ. ಈ ಹೋರಾಟದಲ್ಲಿ ಸತ್ಯವೇ ನನ್ನ ಅಸ್ತ್ರ, ಮತ್ತು ಸತ್ಯವೇ ನನ್ನ ಬೆಂಬಲ! ಎಂದಿದ್ದಾರೆ.

Rahul Gandhi: ಪ್ರಜಾಪ್ರಭುತ್ವವನ್ನು ಉಳಿಸಲು ಮಿತ್ರಕಾಲದ ವಿರುದ್ಧ ಹೋರಾಟ ಇದು: ರಾಹುಲ್ ಗಾಂಧಿ
ರಾಹುಲ್ ಗಾಂಧಿ
Follow us
ರಶ್ಮಿ ಕಲ್ಲಕಟ್ಟ
|

Updated on: Apr 03, 2023 | 5:43 PM

2019ರ ಮಾನನಷ್ಟ ಮೊಕದ್ದಮೆಯಲ್ಲಿ (2019 defamation case) ಸೂರತ್ ನ್ಯಾಯಾಲಯವು ಜಾಮೀನು ನೀಡಿದ ಕೂಡಲೇ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಇದು ಪ್ರಜಾಪ್ರಭುತ್ವವನ್ನು ಉಳಿಸಲು “ಮಿತ್ರಕಾಲ” ವಿರುದ್ಧದ ಹೋರಾಟ ಇದು. ಈ ಹೋರಾಟದಲ್ಲಿ ಸತ್ಯವೇ ನನ್ನ ಅಸ್ತ್ರ ಎಂದಿದ್ದಾರೆ. ಎಲ್ಲ ಕಳ್ಳರ ಸರ್​​ನೇಮ್ ಮೋದಿ (Modi Surname)ಎಂದೇ ಯಾಕಿದೆ ಎಂದು ಭಾಷಣದಲ್ಲಿ ಕೇಳಿದ್ದ ರಾಹುಲ್ ಗಾಂಧಿ ವಿರುದ್ದ ಮಾನನಷ್ಟ ಮೊಕದ್ದಮೆ ದಾಖಲಿಸಲಾಗಿತ್ತು. ಈ ಪ್ರಕರಣದಲ್ಲಿ ಸೂರತ್ ನ್ಯಾಯಾಲಯವು ರಾಹುಲ್ ಗಾಂಧಿಯನ್ನು ದೋಷಿ ಎಂದು ಘೋಷಿಸಿದ್ದು, ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು.

ಸೋಮವಾರದ ವಿಚಾರಣೆಯ ಕೆಲವೇ ನಿಮಿಷಗಳ ನಂತರ ಹಿಂದಿಯಲ್ಲಿ ಟ್ವೀಟ್ ಮಾಡಿದ ರಾಹುಲ್ “ಇದು ಪ್ರಜಾಪ್ರಭುತ್ವವನ್ನು ಉಳಿಸಲು ‘ಮಿತ್ರಕಾಲ’ ವಿರುದ್ಧದ ಹೋರಾಟ. ಈ ಹೋರಾಟದಲ್ಲಿ ಸತ್ಯವೇ ನನ್ನ ಅಸ್ತ್ರ, ಮತ್ತು ಸತ್ಯವೇ ನನ್ನ ಬೆಂಬಲ! ಎಂದಿದ್ದಾರೆ.

ಕೇಂದ್ರ ಸರ್ಕಾರವು ತನ್ನ ಸ್ನೇಹಿ ಲಾಭಕೋರ ವ್ಯವಸ್ಥೆಗೆ ಅನುಕೂಲವಾಗುವಂತೆ ಕೆಲಸ ಮಾಡುತ್ತಿದೆ ಎಂದು ಆರೋಪಿಸಿ ಗಾಂಧಿಯವರು ‘ಮಿತ್ರಕಾಲ’ವನ್ನು ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ.

ಮಾನಹಾನಿ ಪ್ರಕರಣದಲ್ಲಿ ಸೋಮವಾರ ಸೆಷನ್ಸ್ ನ್ಯಾಯಾಲಯವು ಗಾಂಧಿಗೆ ಜಾಮೀನು ಮಂಜೂರು ಮಾಡಿದ್ದು, ಏಪ್ರಿಲ್ 13 ರಂದು ವಿಚಾರಣೆ ನಡೆಸಲಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 52 ವರ್ಷದ ಕಾಂಗ್ರೆಸ್ ನಾಯಕ ಸಹೋದರಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರೊಂದಿಗೆ ವಿಮಾನದ ಮೂಲಕ ಇಂದು ಮಧ್ಯಾಹ್ನ ಸೂರತ್ ತಲುಪಿದ್ದು ಕೆಳ ನ್ಯಾಯಾಲಯದ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು ಸೆಷನ್ಸ್ ನ್ಯಾಯಾಲಯಕ್ಕೆ ತೆರಳಿದರು.

ಇದನ್ನೂ ಓದಿ: ಹೊಸ ಸಂಸತ್ ಭವನದ ಮಹಾದ್ವಾರದಲ್ಲಿ ಪ್ರಧಾನಿ ಮೋದಿಯವರ ಡಿಗ್ರಿ ಪ್ರದರ್ಶಿಸಿ: ಸಂಜಯ್ ರಾವುತ್

ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು ಕೆಳ ನ್ಯಾಯಾಲಯವು 30 ದಿನಗಳ ಕಾಲ ಜಾಮೀನು ನೀಡಿತ್ತು. ಒಂದು ದಿನದ ನಂತರ, ಅವರನ್ನು ಲೋಕಸಭೆಯ ಸದಸ್ಯತ್ವದಿಂದ ಅನರ್ಹಗೊಳಿಸಲಾಯಿತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ