ಚೀನಾ-ಭಾರತ ಕದನ ಕುತೂಹಲದ ಮಧ್ಯೆ ರಾಜನಾಥ್ ವಿರುದ್ಧ ರಾಹುಲ್ ಟ್ವೀಟ್ ಸಮರ!

ಭಾರತ ಮತ್ತು ಚೀನಾ ನಡುವೆ ಗಡಿಯಲ್ಲಿ ಗರಿಗೆದರಿರುವ ಸೇನಾ ಚಟುವಟಿಕೆಗಳು ದೇಶದ ರಾಜಕೀಯ ರಂಗದಲ್ಲೂ ಪ್ರತಿಧ್ವನಿಸಿದೆ. ಭಾನುವಾರ ನಡೆದ ಬಿಜೆಪಿ ವರ್ಚುವಲ್ ಱಲಿಯಲ್ಲಿ ಭಾರತದ ರಕ್ಷಣಾ ನೀತಿಗೆ ವಿಶ್ವದಲ್ಲೇ ಮಾನ್ಯತೆ ದೊರತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದರು. ಈ ಹೇಳಿಕೆಯೇ ಈಗ ಮಾಜಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ನಡುವೆ ಟ್ವಿಟರ್ ಸಮರಕ್ಕೆ ನಾಂದಿ ಹಾಡಿದೆ. ಈ ಸಮರದಲ್ಲಿ ರಾಹುಲ್ ಗಾಂಧಿ ಕೆಲವು ನೆಟ್ಟಿಗರ ಕೆಂಗಣ್ಣಿಗೂ ಗುರಿಯಾಗಿದ್ದಾರೆ. […]

ಚೀನಾ-ಭಾರತ ಕದನ ಕುತೂಹಲದ ಮಧ್ಯೆ ರಾಜನಾಥ್ ವಿರುದ್ಧ ರಾಹುಲ್ ಟ್ವೀಟ್ ಸಮರ!
Follow us
ಸಾಧು ಶ್ರೀನಾಥ್​
|

Updated on:Jun 09, 2020 | 5:04 PM

ಭಾರತ ಮತ್ತು ಚೀನಾ ನಡುವೆ ಗಡಿಯಲ್ಲಿ ಗರಿಗೆದರಿರುವ ಸೇನಾ ಚಟುವಟಿಕೆಗಳು ದೇಶದ ರಾಜಕೀಯ ರಂಗದಲ್ಲೂ ಪ್ರತಿಧ್ವನಿಸಿದೆ. ಭಾನುವಾರ ನಡೆದ ಬಿಜೆಪಿ ವರ್ಚುವಲ್ ಱಲಿಯಲ್ಲಿ ಭಾರತದ ರಕ್ಷಣಾ ನೀತಿಗೆ ವಿಶ್ವದಲ್ಲೇ ಮಾನ್ಯತೆ ದೊರತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದರು. ಈ ಹೇಳಿಕೆಯೇ ಈಗ ಮಾಜಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ನಡುವೆ ಟ್ವಿಟರ್ ಸಮರಕ್ಕೆ ನಾಂದಿ ಹಾಡಿದೆ. ಈ ಸಮರದಲ್ಲಿ ರಾಹುಲ್ ಗಾಂಧಿ ಕೆಲವು ನೆಟ್ಟಿಗರ ಕೆಂಗಣ್ಣಿಗೂ ಗುರಿಯಾಗಿದ್ದಾರೆ.

ಅಮಿತ್ ಶಾ ಹೇಳಿಕೆಗೆ ಟಾಂಗ್ ನೀಡಿದ್ದ ರಾಹುಲ್ ಗಾಂಧಿ ಸೋಮವಾರದಂದು ಖ್ಯಾತ ಉರ್ದು ಕವಿ ಮಿರ್ಜಾ ಘಾಲಿಬ್ ರವರ ಕವಿತೆಯ ಸಾಲುಗಳನ್ನು ಕೊಂಚ ತಿರುಚಿ ಶಾ ಅವರನ್ನು ಪರೋಕ್ಷವಾಗಿ ಟೀಕಿಸಿದ್ದರು. ಇದಕ್ಕೆ ಪ್ರತ್ಯುತ್ತರವಾಗಿ ರಾಜನಾಥ್ ಸಿಂಗ್​ ಅವರು ಸಹ ಕಣಕ್ಕಿಳಿದು ಅದೇ ಕವಿಯ ಮತ್ತೊಂದು ಕವಿತೆಯ ಸಾಲುಗಳನ್ನು ತಿರುಚಿ ಕಾಂಗ್ರೆಸ್ ಪಕ್ಷದ ಚಿಹ್ನೆಯಾದ ಹಸ್ತದ ಬಗ್ಗೆ ಪರೋಕ್ಷವಾಗಿ ಕುಟುಕಿದ್ದರು. ಇದಕ್ಕೆ ನೇರವಾಗಿ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ ‘ನಮ್ಮ ಪಕ್ಷದ ಚಿಹ್ನೆಯ ಬಗ್ಗೆ ಹೇಳಿಕೆ ನೀಡುವುದು ಮುಗಿದಿದ್ದರೆ, ಲಡಾಖ್​ನಲ್ಲಿ ಭಾರತದ ನೆಲವನ್ನು ಚೀನಾ ಆಕ್ರಮಿಸಿಕೊಂಡಿದ್ಯಾ? ಎಂಬುದಕ್ಕೆ ಉತ್ತರಿಸಿ’ ಎಂದು ನೇರವಾಗಿ ಪ್ರಶ್ನಿಸಿದ್ದಾರೆ.

Published On - 5:00 pm, Tue, 9 June 20

ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಳ್ಳಾರಿಯ ಕಂಪ್ಲಿಯಿಂದ ವಕ್ಫ್ ವಿರುದ್ಧ ಹೋರಾಟ ಪುನರಾರಂಭಿಸಿದ ಯತ್ನಾಳ್ ತಂಡ
ಬಳ್ಳಾರಿಯ ಕಂಪ್ಲಿಯಿಂದ ವಕ್ಫ್ ವಿರುದ್ಧ ಹೋರಾಟ ಪುನರಾರಂಭಿಸಿದ ಯತ್ನಾಳ್ ತಂಡ
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ