AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rahul Gandhi Video: ನೇಪಾಳದ ಪಬ್​ನಲ್ಲಿ ರಾಹುಲ್ ಗಾಂಧಿ ಪಾರ್ಟಿ ಮಾಡುತ್ತಿರುವ ವಿಡಿಯೋ ವೈರಲ್

ಅಮೇಥಿಯ ಸಂಸದೆ ಸ್ಮೃತಿ ಇರಾನಿ ಅವರು ರಾಹುಲ್ ಗಾಂಧಿ ಅವರ ಕ್ಷೇತ್ರವಾದ ವಯನಾಡ್‌ಗೆ ಭೇಟಿ ನೀಡುತ್ತಿರುವ ಸಮಯದಲ್ಲೇ ರಾಹುಲ್ ಗಾಂಧಿ ಪಬ್​ನಲ್ಲಿ ಪಾರ್ಟಿ ಮಾಡುತ್ತಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ.

Rahul Gandhi Video: ನೇಪಾಳದ ಪಬ್​ನಲ್ಲಿ ರಾಹುಲ್ ಗಾಂಧಿ ಪಾರ್ಟಿ ಮಾಡುತ್ತಿರುವ ವಿಡಿಯೋ ವೈರಲ್
ಪಬ್​ನಲ್ಲಿ ರಾಹುಲ್ ಗಾಂಧಿ
TV9 Web
| Updated By: Digi Tech Desk|

Updated on:May 03, 2022 | 1:00 PM

Share

ರಾಹುಲ್ ಗಾಂಧಿ ಎಲ್ಲಿದ್ದಾರೆ? ಎಂಬ ಚರ್ಚೆಗಳು ಕೆಲವು ದಿನಗಳಿಂದ ನಡೆಯುತ್ತಿವೆ. ರಾಹುಲ್ ಗಾಂಧಿ (Rahul Gandhi) ವಿದೇಶಿ ಪ್ರವಾಸದಲ್ಲಿದ್ದಾರೆ ಎಂದು ವರದಿಯಾದ ಬೆನ್ನಲ್ಲೇ, ನೆರೆಯ ರಾಷ್ಟ್ರವಾದ ನೇಪಾಳದಲ್ಲಿ (Nepal) ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪಾರ್ಟಿ ಮಾಡುತ್ತಿರುವುದು ಕಂಡುಬಂದಿದೆ. ಅಮೇಥಿಯ ಸಂಸದೆ ಸ್ಮೃತಿ ಇರಾನಿ (Smriti Irani) ಅವರು ರಾಹುಲ್ ಗಾಂಧಿ ಅವರ ಕ್ಷೇತ್ರವಾದ ವಯನಾಡ್‌ಗೆ ಭೇಟಿ ನೀಡುತ್ತಿರುವ ಸಮಯದಲ್ಲಿ ಈ ವಿಡಿಯೋ (Video Viral) ಎಲ್ಲೆಡೆ ವೈರಲ್ ಆಗಿದೆ. ರಾಹುಲ್ ಗಾಂಧಿ 2019ರ ಚುನಾವಣೆಯಲ್ಲಿ ಗಾಂಧಿ ಕುಟುಂಬದ ಭದ್ರಕೋಟೆಯಾದ ಅಮೇಥಿಯಲ್ಲಿ ಸ್ಮೃತಿ ಇರಾನಿ ವಿರುದ್ಧ ಸೋತಿದ್ದರು.

ಫೇಸ್‌ಬುಕ್ ಪೋಸ್ಟ್‌ನಲ್ಲಿ, ಭೂಪೇನ್ ಕುನ್ವರ್ ಎಂಬ ನೇಪಾಳಿ ಪ್ರಜೆ ಭಾರತೀಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇನ್ ಎಲ್‌ಒಡಿ (ಲಾರ್ಡ್ ಆಫ್ ದಿ ಡ್ರಿಂಕ್ಸ್) ಎಂದು ಬರೆದಿದ್ದಾರೆ. ನೇಪಾಳದ ಕಠ್ಮಂಡು ನಗರದಲ್ಲಿರುವ ಪಬ್‌ನಲ್ಲಿ ರಾಹುಲ್ ಗಾಂಧಿ ಪಾರ್ಟಿ ಮಾಡುತ್ತಿರುವ ಎರಡು ವೀಡಿಯೊಗಳನ್ನು ಅವರು ಅಪ್‌ಲೋಡ್ ಮಾಡಿದ್ದಾರೆ. ಒಂದು ವೀಡಿಯೋದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತನ್ನ ಫೋನ್ ಬಳಸುತ್ತಿರುವುದನ್ನು ನೋಡಬಹುದು. ವಿಡಿಯೋದಲ್ಲಿ ಮಹಿಳೆಯೊಂದಿಗೆ ಮಾತನಾಡುತ್ತಿರುವುದನ್ನು ನೋಡಬಹುದು.

ರಾಹುಲ್ ಗಾಂಧಿ ಪಬ್​ನಲ್ಲಿ ಪಾರ್ಟಿ ಮಾಡುತ್ತಾ, ಮಹಿಳೆಯೊಂದಿಗೆ ಮಾತನಾಡುತ್ತಿರುವ ವಿಡಿಯೋ ಟ್ವಿಟರ್‌ನಲ್ಲಿ ವೈರಲ್ ಆಗಿದೆ. ಈ ಕುರಿತು opindia ವರದಿ ಮಾಡಿದೆ. ಇಂತಹ ಬಿಕ್ಕಟ್ಟಿನ ಸ್ಥಿತಿಯಲ್ಲಿ ಕಾಂಗ್ರೆಸ್ ಪಕ್ಷದ ಕೈ ಬಿಟ್ಟು ವಿದೇಶದಲ್ಲಿ ಪಾರ್ಟಿ ಮಾಡಿದ್ದಕ್ಕಾಗಿ ನೆಟಿಜನ್‌ಗಳು ರಾಹುಲ್ ಗಾಂಧಿಯ ವಿರುದ್ಧ ಕಿಡಿಕಾರಿದ್ದಾರೆ. ಇನ್ನಾದ್ರೂ ಕಾಂಗ್ರೆಸ್ ಪಕ್ಷದ ಮೇಲೆ ಗಮನಹರಿಸಿ ಎಂದು ನೆಟ್ಟಿಗರು ರಾಹುಲ್ ಗಾಂಧಿಗೆ ಉಪದೇಶ ನೀಡುತ್ತಿದ್ದಾರೆ. ಹಾಗೇ, ನೈಟ್‌ಕ್ಲಬ್‌ನಲ್ಲಿ ಪಾರ್ಟಿ ಮಾಡುತ್ತಿರುವುದಕ್ಕೆ ರಾಹುಲ್ ಗಾಂಧಿಯನ್ನು ಗೇಲಿ ಮಾಡುತ್ತಿದ್ದಾರೆ.

ರಾಹುಲ್ ಗಾಂಧಿ ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬಲಪಡಿಸುತ್ತಿದ್ದಾರೆ. ಅವರೇ ನಿಜವಾದ ನಾಯಕ”ಎಂದು ಇನ್ನೊಬ್ಬ ಟ್ವೀಟ್ ಬಳಕೆದಾರರು ಲೇವಡಿ ಮಾಡಿದ್ದಾರೆ. ರಾಹುಲ್ ಗಾಂಧಿ ಪಾರ್ಟಿ ಮಾಡುತ್ತಿದ್ದ ಮಹಿಳೆ ನೇಪಾಳದ ಚೀನಾ ರಾಯಭಾರಿ ಹೌ ಯಾಂಕಿ ಎಂದು ಕೆಲವರು ಟ್ವೀಟ್ ಮಾಡಿದ್ದಾರೆ. ಆದರೆ, ಇದು ಇನ್ನೂ ಖಚಿತವಾಗಿಲ್ಲ.

ಕಠ್ಮಂಡು ಪೋಸ್ಟ್‌ ವರದಿಯ ಪ್ರಕಾರ, ರಾಹುಲ್ ಗಾಂಧಿ ನೇಪಾಳಕ್ಕೆ ಸುಮ್ನಿಮಾ ಉದಾಸ್ ಎಂಬ ತಮ್ಮ ಸ್ನೇಹಿತನ ವಿವಾಹದಲ್ಲಿ ಭಾಗವಹಿಸಲು ತೆರಳಿದ್ದರು. ರಾಹುಲ್ ಗಾಂಧಿ ತಮ್ಮ ಸ್ನೇಹಿತರೊಂದಿಗೆ ಕಠ್ಮಂಡುವಿನ ಮ್ಯಾರಿಯೆಟ್ ಹೋಟೆಲ್‌ನಲ್ಲಿ ತಂಗಿದ್ದಾರೆ. ಮೇ 3ರಂದು ಉದಾಸ್ ಅವರ ಮದುವೆ ನಡೆಯಲಿದ್ದು, ಮೇ 5ರಂದು ಹಯಾತ್ ರೀಜೆನ್ಸಿ ಹೋಟೆಲ್‌ನಲ್ಲಿ ಆರತಕ್ಷತೆ ನಡೆಯಲಿದೆ.

ರಾಹುಲ್ ಪರ ರಣದೀಪ್ ಸುರ್ಜೇವಾಲ ಬ್ಯಾಟಿಂಗ್:

ರಾಹುಲ್ ಗಾಂಧಿ ಪ್ರಧಾನಮಂತ್ರಿ ನರೇಂದ್ರ ಮೋದಿ ತರಹ ಅಲ್ಲ. ಮೋದಿ ಕರೆಯದೆ ನವಾಜ್ ಷರೀಫ್ ಹುಟ್ಟುಹಬ್ಬಕ್ಕೆ ಹೋಗಿದ್ದರು. ಪಾಕಿಸ್ತಾನಕ್ಕೆ ಹೋಗಿ ಕೇಕ್ ಕಟ್ ಮಾಡಿ ಬಂದಿದ್ದರು. ನೇಪಾಳ ಭಾರತದ ಸ್ನೇಹಿತ ರಾಷ್ಟ್ರ. ರಾಹುಲ್ ಗಾಂಧಿ ಮದುವೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ರಾಹುಲ್ ಗಾಂಧಿ ತಮ್ಮ ಪತ್ರಕರ್ತ ಸ್ನೇಹಿತರ ಮದುವೆ ಸಮಾರಂಭದಲ್ಲಿ ಭಾಗಿಯಾಗಿದ್ದಾರೆ. ಮದುವೆ ಸಮಾರಂಭದಲ್ಲಿ ಭಾಗಿಯಾವುದು ತಪ್ಪೇ..? ಅದೊಂದು ಅಪರಾಧವೇ..? ಎನ್ನುವ ಮೂಲಕ ರಾಹುಲ್ ಗಾಂಧಿ ಪಾರ್ಟಿ ಮಾಡಿದ್ದನ್ನು ಪ್ರಶ್ನೆ ಮಾಡಿದ ಬಿಜೆಪಿ ವಿರುದ್ದ ಸುರ್ಜೆವಾಲ ವಾಗ್ದಾಳಿ ನಡೆಸಿದ್ದಾರೆ.

ಇತರೆ ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:27 pm, Tue, 3 May 22