AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನೀವೆಂದೂ ಪ್ರಧಾನಿಯಾಗಲ್ಲ’; ಹೈದರಾಬಾದ್‌ನಲ್ಲಿ ರಾಹುಲ್ ಗಾಂಧಿಗೆ ಅಮಿತ್ ಶಾ ತಿರುಗೇಟು

ದೇಶಾದ್ಯಂತ ನಡೆಯುತ್ತಿರುವ ಎಸ್​ಐಆರ್ ಪ್ರಕ್ರಿಯೆಯನ್ನು ವಿರೋಧಿಸುತ್ತಿರುವ ಕಾಂಗ್ರೆಸ್ ಪಕ್ಷದ ವಿರುದ್ಧ ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ತೀವ್ರ ವಾಗ್ದಾಳಿ ನಡೆಸಿದ್ದಾರೆ. "ಕಾಂಗ್ರೆಸ್ ಪಕ್ಷವು ಅಕ್ರಮ ಬಾಂಗ್ಲಾದೇಶಿ ನುಸುಳುಕೋರರನ್ನು ರಕ್ಷಿಸಲು ಯತ್ನಿಸುತ್ತಿದೆ. ಆದರೆ, ಬಿಜೆಪಿ ಮತದಾರರ ಪಟ್ಟಿಯಿಂದ ಪ್ರತಿಯೊಬ್ಬ ನುಸುಳುಕೋರನ ಹೆಸರನ್ನು ತೆಗೆದುಹಾಕುವುದು ಖಚಿತ" ಎಂದು ಅವರು ಘೋಷಿಸಿದ್ದಾರೆ. ಹೈದರಾಬಾದ್‌ನಲ್ಲಿ ನಡೆದ ಬಿಜೆಪಿಯ ಪ್ರಜಾಪ್ರಭುತ್ವ ಉಳಿಸಿ' ಬೃಹತ್ ಪಾದಯಾತ್ರೆಯ ಮುಕ್ತಾಯದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅಮಿತ್ ಶಾ, "ಭಾರತದ ಪ್ರಜೆಗಳಿಗೆ ಮಾತ್ರ ದೇಶದ ಚುನಾವಣೆಗಳಲ್ಲಿ ಮತ ಚಲಾಯಿಸುವ ಹಕ್ಕಿರುತ್ತದೆ" ಎಂದು ಸ್ಪಷ್ಟಪಡಿಸಿದರು.

'ನೀವೆಂದೂ ಪ್ರಧಾನಿಯಾಗಲ್ಲ'; ಹೈದರಾಬಾದ್‌ನಲ್ಲಿ ರಾಹುಲ್ ಗಾಂಧಿಗೆ ಅಮಿತ್ ಶಾ ತಿರುಗೇಟು
ಹೈದರಾಬಾದ್‌ನಲ್ಲಿ ಅಮಿತ್ ಶಾImage Credit source: PTI
ಸುಷ್ಮಾ ಚಕ್ರೆ
|

Updated on: Nov 02, 2026 | 6:21 PM

Share

ಹೈದರಾಬಾದ್, ನವೆಂಬರ್ 2: ತೆಲಂಗಾಣದ ರಾಜಧಾನಿ ಹೈದರಾಬಾದ್‌ನಲ್ಲಿ ಇಂದು (ನವೆಂಬರ್ 2) ಬಿಜೆಪಿ ಹಮ್ಮಿಕೊಂಡಿದ್ದ ಪ್ರಜಾಪ್ರಭುತ್ವ ಉಳಿಸಿ, ಅರಾಜಕತೆ ತೊಲಗಿಸಿ ಬೃಹತ್ ಪಾದಯಾತ್ರೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 2 ದಿನಗಳ ಹಿಂದೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಂಘಟಿಸಿದ್ದ ಅಣಕು ಸಂಸತ್ ಕುರಿತು ಲೇವಡಿ ಮಾಡಿದ ಗೃಹ ಸಚಿವ ಅಮಿತ್ ಶಾ, “ಆ ಮಾಕ್ ಪಾರ್ಲಿಮೆಂಟ್ ಕಾರ್ಯಾಚರಣೆಯಲ್ಲಾದರೂ ರಾಹುಲ್ ಗಾಂಧಿ ಪ್ರಧಾನಿ ಹುದ್ದೆಯನ್ನು ವಹಿಸಿಕೊಳ್ಳಬಹುದಿತ್ತು. ಏಕೆಂದರೆ ನೈಜ ಸಂಸತ್ತಿನಲ್ಲಿ ಅವರಿಗೆ ಪ್ರಧಾನಿ ಹುದ್ದೆಗೇರುವ ಅವಕಾಶ ಎಂದಿಗೂ ಸಿಗುವುದಿಲ್ಲ! ಕನಿಷ್ಠ ಮಾಕ್ ಪಾರ್ಲಿಮೆಂಟ್‌ನಲ್ಲಾದರೂ ಅವರು ಪ್ರಧಾನಿಯಾದರೆ ಸೋನಿಯಾ ಗಾಂಧಿ ಅವರಿಗೆ ಕೊಂಚ ಸಂತೋಷವಾಗುತ್ತಿತ್ತು” ಎಂದು ವ್ಯಂಗ್ಯವಾಡಿದ್ದಾರೆ.

“ವರ್ಷಕ್ಕೆ ಮೂರ್ನಾಲ್ಕು ತಿಂಗಳು ಮಾತ್ರ ಭಾರತದಲ್ಲಿದ್ದು, ಉಳಿದ ಸಮಯ ವಿದೇಶ ಪ್ರವಾಸ ಮಾಡುವ ಮೂಲಕ ಚುನಾವಣೆಗಳನ್ನು ಗೆಲ್ಲಲು ಸಾಧ್ಯವಿಲ್ಲ. ರಾಹುಲ್ ಗಾಂಧಿ ದೇಶದಲ್ಲಿ ಹೆಚ್ಚು ಸಮಯ ಕಳೆದು, ಜನರೊಂದಿಗೆ ಬೆರೆತು ಅವರ ಸಮಸ್ಯೆಗಳನ್ನು ಬಗೆಹರಿಸಲು ಶ್ರಮಿಸಬೇಕು” ಎಂದು ಅಮಿತ್ ಶಾ ಸಲಹೆ ನೀಡಿದ್ದಾರೆ.

ದೆಹಲಿಯ ರಾಮಲೀಲಾ ಮೈದಾನದಲ್ಲಿ ‘ಇಂಡಿಯಾ’ ಮೈತ್ರಿಕೂಟ ನಡೆಸಿದ ಮತ ಕಳವು ವಿರೋಧಿ ಸಮಾವೇಶವನ್ನು ತೀವ್ರವಾಗಿ ಖಂಡಿಸಿದ ಅಮಿತ್ ಶಾ, “ಅದು ವೋಟ್ ಬಚಾವೋ ಸಮಾವೇಶವಾಗಿರಲಿಲ್ಲ, ಬದಲಿಗೆ ನುಸುಳುಕೋರರ ರಕ್ಷಣೆ ಸಮಾವೇಶವಾಗಿತ್ತು. ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ತಮ್ಮ ಅಕ್ರಮ ಮತಬ್ಯಾಂಕ್ ಆಗಿರುವ ಬಾಂಗ್ಲಾದೇಶಿ ನುಸುಳುಕೋರರನ್ನು ಮತದಾರರ ಪಟ್ಟಿಯಲ್ಲಿ ಉಳಿಸಿಕೊಳ್ಳುವ ದುರುದ್ದೇಶದಿಂದ ಚುನಾವಣಾ ಆಯೋಗದ ಎಸ್​ಐಆರ್ ಪ್ರಕ್ರಿಯೆಯನ್ನು ವಿರೋಧಿಸುತ್ತಿವೆ” ಎಂದಿದ್ದಾರೆ.

ಇದನ್ನೂ ಓದಿ: ಹೈದರಾಬಾದ್‌ನ ಪ್ರಸಿದ್ಧ ಭಾಗ್ಯಲಕ್ಷ್ಮಿ ದೇವಾಲಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ, ವಿಶೇಷ ಪೂಜೆ ಸಲ್ಲಿಕೆ

“ಕಾಂಗ್ರೆಸ್ ಪಕ್ಷವು ನಕಲಿ ಮತದಾನದ ಮೂಲಕ ಚುನಾವಣೆಗಳನ್ನು ಗೆಲ್ಲಲು ಯತ್ನಿಸುತ್ತಿದೆ. ಒಬ್ಬ ವ್ಯಕ್ತಿಗೆ ಎರಡು ಮತಗಳಿದ್ದರೆ, ಅದರಲ್ಲಿ ಒಂದನ್ನು ರದ್ದುಗೊಳಿಸಬೇಕೋ ಬೇಡವೋ?” ಎಂದು ಪ್ರಶ್ನಿಸಿದ ಅಮಿತ್ ಶಾ, “ಈಗ ‘ರಾಹುಲ್ ಬಾಬಾ’ ಅವರ ಹೊಟ್ಟೆನೋವಿನ ಅಸಲಿ ಮೂಲ ನಮಗೆ ಅರ್ಥವಾಗಿದೆ. ದೇಶದಲ್ಲಿ ಸುಮಾರು 3 ಕೋಟಿಯಷ್ಟು ನಕಲಿ ಮತಗಳಿವೆ. ಆ ಹೆಸರಿನಲ್ಲಿರುವ ವ್ಯಕ್ತಿಗಳು ನೈಜವಾಗಿ ಅಸ್ತಿತ್ವದಲ್ಲೇ ಇಲ್ಲ. ಅವರೆಲ್ಲರೂ ಬಾಂಗ್ಲಾದೇಶಿ ನುಸುಳುಕೋರರು” ಎಂದು ಗಂಭೀರ ಆರೋಪ ಮಾಡಿದ್ದಾರೆ.

ಕಾಂಗ್ರೆಸ್ ವೆಂಟಿಲೇಟರ್‌ನಲ್ಲಿರುವ ಪಕ್ಷ:

ಕಾಂಗ್ರೆಸ್ ಪಕ್ಷವನ್ನು “ವೆಂಟಿಲೇಟರ್‌ನಲ್ಲಿರುವ ಪಕ್ಷ” ಎಂದು ಕರೆದ ಅಮಿತ್ ಶಾ, “ವೆಂಟಿಲೇಟರ್​​ನಲ್ಲಿರುವ ಆ ಪಕ್ಷ ಪ್ರಧಾನಿ ಮೋದಿ ಜೊತೆ ಮ್ಯಾರಥಾನ್ ಓಡಲು ಸಾಧ್ಯವೇ? ರಾಹುಲ್ ಗಾಂಧಿ ಅವರನ್ನು ನಮ್ಮ ಬಿಜೆಪಿಯ ತೆಲಂಗಾಣ ಯುವ ಮೋರ್ಚಾ ಅಧ್ಯಕ್ಷರೂ ಸಹ ಚರ್ಚೆಯಲ್ಲಿ ಸೋಲಿಸಬಲ್ಲರು” ಎಂದು ವ್ಯಂಗ್ಯವಾಡಿದ್ದಾರೆ.

ಇವಿಎಂ ಟೀಕೆಗೆ ತಿರುಗೇಟು:

“ರಾಹುಲ್ ಗಾಂಧಿಯವರೇ, ಇವಿಎಂಗಳಲ್ಲಿ ದೋಷವಿದ್ದರೆ ನಿಮ್ಮ ಪಕ್ಷದ ರೇವಂತ್ ರೆಡ್ಡಿ ತೆಲಂಗಾಣದಲ್ಲಿ ಮುಖ್ಯಮಂತ್ರಿಯಾಗಿದ್ದು ಹೇಗೆ? ಕೇರಳ, ತಮಿಳುನಾಡು ಮತ್ತು ಹಿಮಾಚಲ ಪ್ರದೇಶಗಳಲ್ಲಿ ನಿಮ್ಮ ಮೈತ್ರಿಕೂಟದ ಸರ್ಕಾರ ಅಧಿಕಾರಕ್ಕೆ ಬಂದಿದ್ದು ಹೇಗೆ? ಇವಿಎಂಗಳು ಅಷ್ಟೊಂದು ಕೆಟ್ಟದಾಗಿದ್ದರೆ ನೀವು ಶಾಸಕ/ ಸಂಸದರಾಗಿ ಪ್ರಮಾಣವಚನ ಸ್ವೀಕರಿಸಬಾರದಿತ್ತು. ನೀವು ಗೆದ್ದಾಗ ಶ್ರೇಯಸ್ಸು ಜನರಿಗೆ ನೀಡುತ್ತೀರಿ, ಸೋತಾಗ ಇವಿಎಂ ಮೇಲೆ ಗೂಬೆ ಕೂರಿಸುತ್ತೀರಿ. ನೀವು 10 ವರ್ಷ ದೇಶವನ್ನು ಆಡಳಿತ ನಡೆಸಿ 12 ಲಕ್ಷ ಕೋಟಿ ರೂ.ಗಳ ಹಗರಣ, ಭ್ರಷ್ಟಾಚಾರದಲ್ಲಿ ಮುಳುಗಿದ್ದಿರಿ” ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: ಹೈದರಾಬಾದ್​ನಲ್ಲಿ ಅಮಿತ್ ಶಾ ಅವರನ್ನು ಭೇಟಿಯಾದ ಮೈ ಹೋಮ್ ಗ್ರೂಪ್ಸ್ ಅಧ್ಯಕ್ಷ ಜೂಪಲ್ಲಿ ರಾಮೇಶ್ವರ ರಾವ್

“ರಾಹುಲ್ ಗಾಂಧಿ ನೀಡಿದ್ದ 6 ಗ್ಯಾರಂಟಿಗಳಲ್ಲಿ ಒಂದೇ ಒಂದು ಗ್ಯಾರಂಟಿಯೂ ಈಡೇರಿಲ್ಲ. ಆದರೆ ಮೋದಿ ಭಯೋತ್ಪಾದನೆಯನ್ನು ನಿರ್ಮೂಲನೆ ಮಾಡುವುದಾಗಿ ಹೇಳಿದ್ದರು. ಸರ್ಜಿಕಲ್ ಸ್ಟ್ರೈಕ್, ವೈಮಾನಿಕ ದಾಳಿ (ಏರ್‌ಸ್ಟ್ರೈಕ್) ಹಾಗೂ ‘ಆಪರೇಷನ್ ಸಿಂಧೂರ್’ ಮೂಲಕ ನಾವು ಭಯೋತ್ಪಾದನೆ ವಿರುದ್ಧ ಕಠಿಣ ಕ್ರಮ ಕೈಗೊಂಡಿದ್ದೇವೋ ಇಲ್ಲವೋ?” ಎಂದು ಪ್ರಶ್ನಿಸಿದ ಗೃಹ ಸಚಿವ ಅಮಿತ್ ಶಾ, “ನಾವು ಮತ್ತೊಮ್ಮೆ ಭರವಸೆ ನೀಡುತ್ತಿದ್ದೇವೆ; ಡಿಸೆಂಬರ್ 31, 2029ರ ಒಳಗಾಗಿ ಭಾರತವನ್ನು ಮಾದಕವಸ್ತು (ಡ್ರಗ್ಸ್) ಮುಕ್ತ ದೇಶವನ್ನಾಗಿ ಮಾಡಲಿದ್ದೇವೆ” ಎಂದು ಘೋಷಿಸಿದರು.

“ರಾಹುಲ್ ಗಾಂಧಿ ಹಾಗೂ ತೆಲಂಗಾಣದ ಸಿಎಂ ರೇವಂತ್ ರೆಡ್ಡಿ ಎಷ್ಟೇ ವಿರೋಧಿಸಿದರೂ ಸರಿ, ಬಿಜೆಪಿ ಎಸ್​ಐಆರ್​ ಪರವಾಗಿ ದೃಢವಾಗಿ ನಿಲ್ಲಲಿದೆ. ಭಾರತದ ಪ್ರಜೆಗಳಿಗೆ ಮಾತ್ರ ಮತದಾನದ ಹಕ್ಕಿರಬೇಕು. ಪ್ರತಿಯೊಬ್ಬ ನುಸುಳುಕೋರನನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಿ ದೇಶದಿಂದ ಗಡಿಪಾರು ಮಾಡುವುದು ಖಚಿತ” ಎಂದು ಅಮಿತ್ ಶಾ ಗುಡುಗಿದ್ದಾರೆ.

ತಮ್ಮ ಭಾಷಣದ ಆರಂಭದಲ್ಲಿ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಅವರು, “ಅಂದು ಸರ್ದಾರ್ ಪಟೇಲರು ಹೈದರಾಬಾದ್ ನಿಜಾಮನನ್ನು ಶರಣಾಗುವಂತೆ ಮಾಡದೇ ಹೋಗಿದ್ದರೆ, ಹೈದರಾಬಾದ್ ಭಾರತದ ಭಾಗವಾಗುತ್ತಿರಲಿಲ್ಲ” ಎಂದು ಸ್ಮರಿಸಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More
ಹಾಸನಾಂಬೆ ದರ್ಶನ 4ನೇ ದಿನ: ಭಕ್ತರ ದರ್ಶನ, ಆದಾಯದಲ್ಲೂ ದಾಖಲೆ!
ಹಾಸನಾಂಬೆ ದರ್ಶನ 4ನೇ ದಿನ: ಭಕ್ತರ ದರ್ಶನ, ಆದಾಯದಲ್ಲೂ ದಾಖಲೆ!
ಹಾಲು, ಮೊಸರು ದರ ಏರಿಕೆ ಖಂಡಿಸಿ ಬಿಜೆಪಿ ಮಹಿಳಾ ಮೋರ್ಚಾದಿಂದ ಪ್ರತಿಭಟನೆ
ಹಾಲು, ಮೊಸರು ದರ ಏರಿಕೆ ಖಂಡಿಸಿ ಬಿಜೆಪಿ ಮಹಿಳಾ ಮೋರ್ಚಾದಿಂದ ಪ್ರತಿಭಟನೆ
ತೀವ್ರಗೊಂಡ ಕಬ್ಬು ಬೆಳೆಗಾರರ ಹೋರಾಟ: ಹಿಂಡಲಗಾ ಜೈಲ್ ಭರೋ ಚಳವಳಿ ಆರಂಭ
ತೀವ್ರಗೊಂಡ ಕಬ್ಬು ಬೆಳೆಗಾರರ ಹೋರಾಟ: ಹಿಂಡಲಗಾ ಜೈಲ್ ಭರೋ ಚಳವಳಿ ಆರಂಭ
ಮುರಸು ಚಂಡಮಾರುತದ ಎಫೆಕ್ಟ್​​: ಕರ್ನಾಟಕದಲ್ಲಿ 5 ದಿನಗಳ ಕಾಲ ಮಳೆ
ಮುರಸು ಚಂಡಮಾರುತದ ಎಫೆಕ್ಟ್​​: ಕರ್ನಾಟಕದಲ್ಲಿ 5 ದಿನಗಳ ಕಾಲ ಮಳೆ
ದರ ಏರಿಕೆ ಎಫೆಕ್ಟ್​: ನವ ದಂಪತಿಗೆ ಹಾಲು ಮೊಸರು ಗಿಫ್ಟ್
ದರ ಏರಿಕೆ ಎಫೆಕ್ಟ್​: ನವ ದಂಪತಿಗೆ ಹಾಲು ಮೊಸರು ಗಿಫ್ಟ್
ಬಿಗ್ ಬಾಸ್ ಮನೆಯಲ್ಲಿ ಕೋಲಾಹಲಕ್ಕೆ ಕಾರಣವಾದ ಕ್ಯಾಪ್ಟನ್ ಜಗದೀಶ್ ನಿರ್ಧಾರ
ಬಿಗ್ ಬಾಸ್ ಮನೆಯಲ್ಲಿ ಕೋಲಾಹಲಕ್ಕೆ ಕಾರಣವಾದ ಕ್ಯಾಪ್ಟನ್ ಜಗದೀಶ್ ನಿರ್ಧಾರ
ವಿಎ ಪರೀಕ್ಷೆಯಲ್ಲಿ ಅಕ್ರಮ: ಶಂಕರ್ ಬನ್ನೂರು ವಿರುದ್ಧ ಎಫ್​ಐಆರ್​​
ವಿಎ ಪರೀಕ್ಷೆಯಲ್ಲಿ ಅಕ್ರಮ: ಶಂಕರ್ ಬನ್ನೂರು ವಿರುದ್ಧ ಎಫ್​ಐಆರ್​​
ಸಿಎಂ ಡಿಕೆ ಶಿವಕುಮಾರ್ ಭೇಟಿಗೆ ಆಗಮಿಸಿದ ಸಂಸದ ಬಸವರಾಜ ಬೊಮ್ಮಾಯಿ!
ಸಿಎಂ ಡಿಕೆ ಶಿವಕುಮಾರ್ ಭೇಟಿಗೆ ಆಗಮಿಸಿದ ಸಂಸದ ಬಸವರಾಜ ಬೊಮ್ಮಾಯಿ!
ಅರುಣ್ ಸಾಳುಂಕೆ ಮೃತದೇಹದ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಮಗಳು
ಅರುಣ್ ಸಾಳುಂಕೆ ಮೃತದೇಹದ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಮಗಳು
ಕಾಫಿ, ಟೀ ಬೆಲೆ ಹೆಚ್ಚಳ: ಸರ್ಕಾರದ ವಿರುದ್ಧ ಆಕ್ರೋಶ, ಜನ ಏನಂತಾರೆ ನೋಡಿ
ಕಾಫಿ, ಟೀ ಬೆಲೆ ಹೆಚ್ಚಳ: ಸರ್ಕಾರದ ವಿರುದ್ಧ ಆಕ್ರೋಶ, ಜನ ಏನಂತಾರೆ ನೋಡಿ