ಡೊನಾಲ್ಡ್​ ಟ್ರಂಪ್​, ಕಮಲಾ ಹ್ಯಾರಿಸ್​ಗೆ ಪತ್ರ ಬರೆದ ರಾಹುಲ್ ಗಾಂಧಿ

ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಡೊನಾಲ್ಡ್ ಟ್ರಂಪ್ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಟ್ರಂಪ್ ಅವರಿಗೆ ಪತ್ರ ಬರೆದು ಅವರ ಗೆಲುವಿಗೆ ಅಭಿನಂದನೆ ಸಲ್ಲಿಸಿದ್ದಾರೆ. ನಿರ್ಗಮಿತ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್‌ಗೂ ಪತ್ರ ಬರೆದಿದ್ದಾರೆ. ಅವರ ಪತ್ರದಲ್ಲಿ, ಕಾಂಗ್ರೆಸ್ ನಾಯಕ ಅವರ ಉತ್ಸಾಹಭರಿತ ಅಧ್ಯಕ್ಷೀಯ ಚುನಾವಣಾ ಪ್ರಚಾರವನ್ನು ಶ್ಲಾಘಿಸಿದ್ದಾರೆ.

ಡೊನಾಲ್ಡ್​ ಟ್ರಂಪ್​, ಕಮಲಾ ಹ್ಯಾರಿಸ್​ಗೆ ಪತ್ರ ಬರೆದ ರಾಹುಲ್ ಗಾಂಧಿ
ರಾಹುಲ್ ಗಾಂಧಿ
Image Credit source: PTI

Updated on: Nov 08, 2024 | 11:39 AM

ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ರಿಪಬ್ಲಿಕನ್ ಪಕ್ಷದ ಡೊನಾಲ್ಡ್ ಟ್ರಂಪ್ ಭರ್ಜರಿ ಗೆಲುವು ಸಾಧಿಸಿದ್ದಾರೆ. ಅವರ ಗೆಲುವಿಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ವಿಶ್ವದಾದ್ಯಂತದ ನಾಯಕರು ಅಭಿನಂದನೆ ಸಲ್ಲಿಸಿದ್ದಾರೆ. ಇದೀಗ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ರಂಪ್ ಗೆಲುವಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಇದರೊಂದಿಗೆ ಅಧ್ಯಕ್ಷೀಯ ಚುನಾವಣೆಯಲ್ಲಿ ಸೋಲು ಕಂಡಿರುವ ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿ ಕಮಲಾ ಹ್ಯಾರಿಸ್ ಅವರಿಗೆ ಪತ್ರ ಬರೆದಿದ್ದಾರೆ.

ಅಧ್ಯಕ್ಷೀಯ ಚುನಾವಣಾ ಪ್ರಚಾರಕ್ಕಾಗಿ ಕಮಲಾ ಹ್ಯಾರಿಸ್ ಅವರನ್ನು ಅಭಿನಂದಿಸಲು ಬಯಸುವುದಾಗಿ ರಾಹುಲ್ ಹೇಳಿದ್ದಾರೆ.

ರಾಹುಲ್ ಪತ್ರದಲ್ಲಿ ಏನಿದೆ?
ಅಮೆರಿಕದ 47ನೇ ಅಧ್ಯಕ್ಷರಾಗಿರುವ ಟ್ರಂಪ್ ಅವರನ್ನು ನಾನು ಅಭಿನಂದಿಸುತ್ತೇನೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಅಮೆರಿಕಾದ ಜನರು ನಿಮ್ಮ ಭವಿಷ್ಯವನ್ನು ನಂಬುತ್ತಾರೆ.
ನಿಮ್ಮ ನಾಯಕತ್ವದಲ್ಲಿ ಎರಡೂ ದೇಶಗಳು ಪರಸ್ಪರ ಆಸಕ್ತಿಯ ಕ್ಷೇತ್ರಗಳಲ್ಲಿ ಸಹಕಾರವನ್ನು ಗಾಢವಾಗಿಸುತ್ತವೆ ಎಂದು ನಮಗೆ ವಿಶ್ವಾಸವಿದೆ. ಭಾರತೀಯರು ಮತ್ತು ಅಮೆರಿಕನ್ನರಿಗೆ ಅವಕಾಶಗಳನ್ನು ವಿಸ್ತರಿಸಲು ಒಟ್ಟಾಗಿ ಕೆಲಸ ಮಾಡಬೇಕಿದೆ ಎಂದಿದ್ದಾರೆ.

ಮತ್ತಷ್ಟು ಓದಿ: ಅಮೆರಿಕ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಡೊನಾಲ್ಡ್​ ಟ್ರಂಪ್ ವಿರುದ್ಧದ ಪ್ರಕರಣಗಳು ಏನಾಗುತ್ತೆ?

ಕಮಲಾ ಹ್ಯಾರಿಸ್​ಗೆ ಹೇಳಿದ್ದೇನು?
ಅಧ್ಯಕ್ಷೀಯ ಪ್ರಚಾರಕ್ಕಾಗಿ ನಾನು ನಿಮ್ಮನ್ನು ಅಭಿನಂದಿಸುತ್ತೇನೆ. ನಿಮ್ಮ ಒಗ್ಗೂಡಿಸುವ ಭರವಸೆಯ ಸಂದೇಶವು ಅನೇಕರನ್ನು ಪ್ರೇರೇಪಿಸುತ್ತದೆ. ಮ್ಮ ಮುಂದಿನ ಪ್ರಯತ್ನಗಳಿಗೆ ನಾನು ನಿಮಗೆ ಶುಭ ಹಾರೈಸುತ್ತೇನೆ ಎಂದು ಬರೆದಿದ್ದಾರೆ.

ಪ್ರಧಾನಿ ಮೋದಿ ಕರೆ ಮಾಡಿ ಟ್ರಂಪ್ ಅವರನ್ನು ಅಭಿನಂದಿಸಿದ್ದಾರೆ
ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಬಳಿಕ ಪ್ರಧಾನಿ ನರೇಂದ್ರ ಮೋದಿ ಡೊನಾಲ್ಡ್ ಟ್ರಂಪ್ ಅವರಿಗೆ ಕರೆ ಮಾಡಿ ಅಭಿನಂದಿಸಿದ್ದಾರೆ. ಭಾರತ-ಅಮೆರಿಕ ಸಂಬಂಧಗಳನ್ನು ಬಲಪಡಿಸಲು ಒಟ್ಟಾಗಿ ಕೆಲಸ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಟ್ರಂಪ್‌ಗೆ ಒತ್ತಿ ಹೇಳಿದರು.

ತಂತ್ರಜ್ಞಾನ, ರಕ್ಷಣೆ, ಇಂಧನ, ಬಾಹ್ಯಾಕಾಶ ಮತ್ತು ಇತರ ಹಲವು ಕ್ಷೇತ್ರಗಳಲ್ಲಿ ಭಾರತ-ಯುಎಸ್ ಸಂಬಂಧಗಳನ್ನು ಮತ್ತಷ್ಟು ಬಲಪಡಿಸಲು ಮತ್ತೊಮ್ಮೆ ಒಟ್ಟಿಗೆ ಕೆಲಸ ಮಾಡಲು ನಾನು ಎದುರು ನೋಡುತ್ತಿದ್ದೇನೆ ಎಂದಿದ್ದಾರೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ