Rahul Gandhi Birthday: 56ನೇ ವರ್ಷಕ್ಕೆ ಕಾಲಿಟ್ಟ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ಪ್ರಧಾನಿ ಮೋದಿ ಶುಭಾಶಯ

ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ 56ನೇ ವರ್ಷಕ್ಕೆ ಕಾಲಿಟ್ಟಿದ್ದು, ಪ್ರಧಾನಿ ಮೋದಿ ಶುಭಾಶಯ ಕೋರಿದ್ದಾರೆ. ರಾಜೀವ್ ಮತ್ತು ಸೋನಿಯಾ ಗಾಂಧಿ ಪುತ್ರರಾಗಿ ಜನಿಸಿದ ರಾಹುಲ್, 2004ರಲ್ಲಿ ಸಂಸತ್ ಪ್ರವೇಶಿಸಿ, ಇತ್ತೀಚೆಗೆ ಅಧಿಕೃತವಾಗಿ ಲೋಕಸಭೆಯ ವಿರೋಧ ಪಕ್ಷದ ನಾಯಕರಾಗಿದ್ದಾರೆ. ಭಾರತ್ ಜೋಡೋ ಯಾತ್ರೆಯು ಅವರ ರಾಜಕೀಯ ಜೀವನಕ್ಕೆ ತಿರುವು ನೀಡಿತು. ಯುವಕರಿಗೆ ಉದ್ಯೋಗ ಮೇಳ ಸಹ ಆಯೋಜಿಸಲಾಗಿದೆ.

Rahul Gandhi Birthday: 56ನೇ ವರ್ಷಕ್ಕೆ ಕಾಲಿಟ್ಟ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ಪ್ರಧಾನಿ ಮೋದಿ ಶುಭಾಶಯ
ಮೋದಿ, ರಾಹುಲ್ ಗಾಂಧಿ
Image Credit source: IB Times India

Updated on: Jun 19, 2026 | 10:25 AM

ನವದೆಹಲಿ, ಜೂನ್ 19: ಲೋಕಸಭೆ  ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ(Rahul Gandhi) ಇಂದು 56ನೇ ವರ್ಷಕ್ಕೆ ಕಾಲಿಟ್ಟಿದ್ದು, ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ತಿಳಿಸಿದ್ದಾರೆ. ಪ್ರಧಾನಿ ಮೋದಿ ಅವರು ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್ನಲ್ಲಿ ಸಂದೇಶ ಪೋಸ್ಟ್ ಮಾಡಿ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ಅವರಿಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯ ಸಿಗಲಿ ಎಂದು ಹಾರೈಸುತ್ತೇನೆ ಎಂದು ಬರೆದಿದ್ದಾರೆ.

ರಾಹುಲ್ ಗಾಂಧಿ ಜೂನ್ 19, 1970 ರಂದು ಮಾಜಿ ಪ್ರಧಾನಿ ರಾಜೀವ್ ಗಾಂಧಿ ಮತ್ತು ಮಾಜಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಪುತ್ರನಾಗಿ ಜನಿಸಿದರು. ಇವರು ಅಮೆರಿಕದ ಫ್ಲೋರಿಡಾದ ರೋಲಿನ್ಸ್ ಕಾಲೇಜಿನಿಂದ ಪದವಿ ಪಡೆದಿದ್ದಾರೆ. ನಂತರ ಯುಕೆಯ ವಿಶ್ವಪ್ರಸಿದ್ಧ ಕೇಂಬ್ರಿಡ್ಜ್ ವಿಶ್ವವಿದ್ಯಾಲಯದ ಟ್ರಿನಿಟಿ ಕಾಲೇಜಿನಿಂದ ಎಂ.ಫಿಲ್. (M.Phil) ಪದವಿ ಪಡೆದಿದ್ದಾರೆ.

ರಾಜಕೀಯಕ್ಕೆ ಬರುವ ಮುನ್ನ ಲಂಡನ್‌ನ ಮಾನಿಟರ್ ಗ್ರೂಪ್‌ನಲ್ಲಿ ಸಲಹೆಗಾರರಾಗಿ ಕೆಲಸ ಮಾಡಿದ್ದ ಅವರು, ಮುಂಬೈನಲ್ಲಿ ‘ಬ್ಯಾಕಾಪ್ಸ್ ಸರ್ವೀಸಸ್’ ಎಂಬ ತಂತ್ರಜ್ಞಾನ ಕಂಪನಿಯನ್ನೂ ನಡೆಸಿದ್ದರು.

ಮತ್ತಷ್ಟು ಓದಿ: ಎಐಸಿಸಿ ಕಾರ್ಯದರ್ಶಿ ಸೂರಜ್ ಹೆಗ್ಡೆ ಅಂತಿಮ ದರ್ಶನ ಪಡೆದ ರಾಹುಲ್​​ ಗಾಂಧಿ

2004ರಲ್ಲಿ ಉತ್ತರ ಪ್ರದೇಶದ ಅಮೇಥಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಮೊದಲ ಬಾರಿಗೆ ಸಂಸತ್ ಪ್ರವೇಶಿಸಿದರು. ಡಿಸೆಂಬರ್ 16, 2017 ರಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಸ್ಥಾನವನ್ನು ವಹಿಸಿಕೊಂಡರು. ದೇಶಾದ್ಯಂತ ಸಾರ್ವಜನಿಕ ಸಂಪರ್ಕ ಬೆಳೆಸಲು ಅವರು ನಡೆಸಿದ “ಭಾರತ್ ಜೋಡೋ ಯಾತ್ರೆ” ಮತ್ತು “ಭಾರತ್ ಜೋಡೋ ನ್ಯಾಯ ಯಾತ್ರೆ” ಅವರ ರಾಜಕೀಯ ಜೀವನಕ್ಕೆ ದೊಡ್ಡ ತಿರುವು ನೀಡಿದವು.

ಮೋದಿ ಪೋಸ್ಟ್​

ಜೂನ್ 9, 2024 ರಂದು ಅಧಿಕೃತವಾಗಿ ಲೋಕಸಭೆಯ ವಿರೋಧ ಪಕ್ಷದ ನಾಯಕರಾಗಿ ನೇಮಕಗೊಂಡರು. ಇದು ಅವರ ರಾಜಕೀಯ ಜೀವನದ ಮೊದಲ ಸಾಂವಿಧಾನಿಕ ಹುದ್ದೆಯಾಗಿದೆ. ಪ್ರಸ್ತುತ ಅವರು ಉತ್ತರ ಪ್ರದೇಶದ ರಾಯ್ ಬರೇಲಿ ಕ್ಷೇತ್ರದ ಸಂಸದರಾಗಿದ್ದಾರೆ. ರಾಹುಲ್ ಗಾಂಧಿ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರು ಅವರನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ.ದ್ವೇಷದ ರಾಜಕೀಯದ ಮಧ್ಯೆ ಅವರು ಪ್ರೀತಿ ಮತ್ತು ಸಹೋದರತ್ವದ ಸಂದೇಶ ಸಾರಿದ್ದಾರೆ ಎಂದು ಕೇರಳದ ನಾಯಕರು ಶುಭ ಹಾರೈಸಿದ್ದಾರೆ.

ರಾಹುಲ್ ಗಾಂಧಿ ಅವರ ಜನ್ಮದಿನದ ಅಂಗವಾಗಿ ಇಂದು ದೆಹಲಿಯ ಟಾಲ್ಕಟೋರಾದಲ್ಲಿ ವಿಶೇಷ ಉದ್ಯೋಗ ಮೇಳವನ್ನು ಆಯೋಜಿಸಲಾಗಿದ್ದು, ಯುವಕರಿಗೆ ಸ್ಥಳದಲ್ಲೇ ನೇಮಕ ಪತ್ರಗಳನ್ನು ವಿತರಿಸಲಾಗುತ್ತಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us