ಶ್ರೀರಾಮನ ಪಾದಯಾತ್ರೆಗಿಂತಲೂ ದೊಡ್ಡದು ರಾಹುಲ್ ಗಾಂಧಿಯ ಭಾರತ್ ಜೋಡೋ ಯಾತ್ರೆ: ರಾಜಸ್ಥಾನದ ಸಚಿವ

| Updated By: ರಶ್ಮಿ ಕಲ್ಲಕಟ್ಟ

Updated on: Oct 18, 2022 | 1:46 PM

ಬಿಜೆಪಿ ದೇಶದ ವಾತಾವರಣವನ್ನು ಹಾಳು ಮಾಡಿದೆ ಎಂದ ಅವರು, ದೇಶದಲ್ಲಿನ ವಾತಾವರಣವನ್ನು ಸರಿಪಡಿಸಲು, ಶಾಂತಿ ಮತ್ತು ಸೌಹಾರ್ದತೆಯನ್ನು ಮರುಸ್ಥಾಪಿಸಲು ರಾಹುಲ್ ಗಾಂಧಿ ಯಾತ್ರೆಯನ್ನು ಕೈಗೊಳ್ಳುತ್ತಿದ್ದಾರೆ

ಶ್ರೀರಾಮನ ಪಾದಯಾತ್ರೆಗಿಂತಲೂ ದೊಡ್ಡದು ರಾಹುಲ್ ಗಾಂಧಿಯ ಭಾರತ್ ಜೋಡೋ ಯಾತ್ರೆ: ರಾಜಸ್ಥಾನದ ಸಚಿವ
ಭಾರತ್ ಜೋಡೋ ಯಾತ್ರೆ
Follow us on

ಜೈಪುರ: ರಾಹುಲ್ ಗಾಂಧಿಯವರ (Rahul Gandhi) ಭಾರತ್ ಜೋಡೋ ಯಾತ್ರೆಯನ್ನು (Bharat Jodo Yatra) “ವಿಶಿಷ್ಟ ಮತ್ತು ಐತಿಹಾಸಿಕ” ಚಳವಳಿ ಎಂದು ಕರೆದ ರಾಜಸ್ಥಾನದ ಆರೋಗ್ಯ ಸಚಿವ ಪರ್ಸಾದಿ ಲಾಲ್ ಮೀನಾ, ಅಯೋಧ್ಯೆಯಿಂದ ಶ್ರೀಲಂಕಾದವರೆಗೆ ಭಗವಾನ್ ರಾಮನ ಪಾದಯಾತ್ರೆಗಿಂತ ಕಾಂಗ್ರೆಸ್ ಯಾತ್ರೆ ತುಂಬಾ ದೊಡ್ಡದಾಗಿದೆ ಎಂದು ಹೇಳಿದ್ದಾರೆ. ಮೀನಾ ಅವರ ಹೇಳಿಕೆಗೆ ವ್ಯಂಗ್ಯವಾಡಿದ ಬಿಜೆಪಿ (BJP), ಕಾಂಗ್ರೆಸ್ ನಾಯಕರು ತಮ್ಮ ಅಸ್ತಿತ್ವವನ್ನು ಉಳಿಸಿಕೊಳ್ಳಲು ಮುಖಸ್ತುತಿ ಮಾಡುತ್ತಿದ್ದಾರೆ ಎಂದಿದ್ದಾರೆ.”ಭಗವಾನ್ ರಾಮನು ಅಯೋಧ್ಯೆಯಿಂದ ಶ್ರೀಲಂಕಾದವರೆಗೆ  ಕಾಲ್ನಡಿಗೆಯಲ್ಲಿ ಪ್ರಯಾಣಿಸಿದ್ದಾನೆ, ಆದರೆ ಈಗ ರಾಹುಲ್ ಗಾಂಧಿ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ನಡೆಯಲಿದ್ದಾರೆ ಎಂದು ಮೀನಾ ಸೋಮವಾರ ದೌಸಾದಲ್ಲಿ ಹೇಳಿದ್ದಾರೆ.ಕಾಂಗ್ರೆಸ್ ತನ್ನ 3,500 ಕಿಮೀ ಕ್ರಮಿಸುವ 150 ದಿನಗಳ ಭಾರತ್ ಜೋಡೋ ಯಾತ್ರೆಯನ್ನು ಸೆಪ್ಟೆಂಬರ್ 7 ರಂದು ತಮಿಳುನಾಡಿನ ಕನ್ಯಾಕುಮಾರಿಯಿಂದ ಪ್ರಾರಂಭಿಸಿದೆ. ಈ ಯಾತ್ರೆಯು ಸುಮಾರು ಐದು ತಿಂಗಳಲ್ಲಿ 12 ರಾಜ್ಯಗಳು ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳನ್ನು ಒಳಗೊಂಡಿದೆ.

ಬಿಜೆಪಿ ದೇಶದ ವಾತಾವರಣವನ್ನು ಹಾಳು ಮಾಡಿದೆ ಎಂದ ಅವರು, ದೇಶದಲ್ಲಿನ ವಾತಾವರಣವನ್ನು ಸರಿಪಡಿಸಲು, ಶಾಂತಿ ಮತ್ತು ಸೌಹಾರ್ದತೆಯನ್ನು ಮರುಸ್ಥಾಪಿಸಲು ರಾಹುಲ್ ಗಾಂಧಿ ಯಾತ್ರೆಯನ್ನು ಕೈಗೊಳ್ಳುತ್ತಿದ್ದಾರೆ ಎಂದಿದ್ದಾರೆ.

ಇಂತಹ ಪಾದಯಾತ್ರೆಯನ್ನು ಯಾರೂ ನೋಡಿಲ್ಲ ಅಥವಾ ಮಾಡಲು ಸಾಧ್ಯವಾಗುವುದಿಲ್ಲ ಎಂದಿದ್ದಾರೆ ಮೀನಾ.
ಈ ಹೇಳಿಕೆಯನ್ನು ಖಂಡಿಸಿರುವ ಬಿಜೆಪಿಯ ರಾಜ್ಯ ವಕ್ತಾರ ಮತ್ತು ಶಾಸಕ ರಾಮಲಾಲ್ ಶರ್ಮಾ, ಕಾಂಗ್ರೆಸ್ ಭಗವಾನ್ ರಾಮನ ಅಸ್ತಿತ್ವವನ್ನು ಒಪ್ಪಿಕೊಳ್ಳಲಿಲ್ಲ. ಈಗ ಅವರು ತಮ್ಮ ಪಾದಯಾತ್ರೆಯನ್ನು ಅದಕ್ಕೆ ಹೋಲಿಸುತ್ತಿದ್ದಾರೆ ಎಂದಿದ್ದಾರೆ.

ಪಕ್ಷವು ರಾಮನ ಅಸ್ತಿತ್ವವನ್ನು ಪ್ರಶ್ನಿಸಿತು. ಈಗ ಕಾಂಗ್ರೆಸ್ ನಾಯಕರು ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಮುಖಸ್ತುತಿ ಮಾಡುತ್ತಿದ್ದಾರೆ. ಆದರೆ ಜನರು ಎಲ್ಲವನ್ನೂ ಗಮನಿಸುತ್ತಿದ್ದಾರೆ ಮತ್ತು ಸರಿಯಾದ ಸಮಯದಲ್ಲಿ ಕಾಂಗ್ರೆಸ್‌ನೊಂದಿಗೆ ಕಣಕ್ಕಿಳಿಯುತ್ತಾರೆ ಎಂದು ಬಿಜೆಪಿ ಹೇಳಿದೆ.

Published On - 1:02 pm, Tue, 18 October 22