AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ, ಆರ್​ಎಸ್​ಎಸ್​ ಬಗ್ಗೆ ಹೇಳಿಕೆ: ರಾಹುಲ್​ ಗಾಂಧಿ ವಿರುದ್ಧ ಎಫ್​ಐಆರ್​ ದಾಖಲು

ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಬಿಜೆಪಿ ಮತ್ತು ಆರ್‌ಎಸ್‌ಎಸ್‌ ವಿರುದ್ಧ ನೀಡಿದ್ದ ಹೇಳಿಕೆಗೆ ಗುವಾಹಟಿಯಲ್ಲಿ ಎಫ್‌ಐಆರ್ ದಾಖಲಾಗಿದೆ. ದೆಹಲಿಯಲ್ಲಿ ಕಾಂಗ್ರೆಸ್ ಕಚೇರಿ ಉದ್ಘಾಟನೆಯಲ್ಲಿ ಮಾಡಿದ ಭಾಷಣದಲ್ಲಿ ಈ ಹೇಳಿಕೆ ನೀಡಿದ್ದರು. ದೇಶದ ಸಾರ್ವಭೌಮತೆಗೆ ಧಕ್ಕೆ ತಂದ ಆರೋಪದ ಮೇಲೆ ಮೊಂಜಿತ್ ಚೇಟಿಯಾ ಎಂಬುವವರು ದೂರು ದಾಖಲಿಸಿದ್ದಾರೆ.

ಬಿಜೆಪಿ, ಆರ್​ಎಸ್​ಎಸ್​ ಬಗ್ಗೆ ಹೇಳಿಕೆ: ರಾಹುಲ್​ ಗಾಂಧಿ ವಿರುದ್ಧ ಎಫ್​ಐಆರ್​ ದಾಖಲು
ಬಿಜೆಪಿ, ಆರ್​ಎಸ್​ಎಸ್​ ಬಗ್ಗೆ ಹೇಳಿಕೆ: ರಾಹುಲ್​ ಗಾಂಧಿ ವಿರುದ್ಧ ಎಫ್​ಐಆರ್​ ದಾಖಲು
ಗಂಗಾಧರ​ ಬ. ಸಾಬೋಜಿ
|

Updated on:Jan 19, 2025 | 9:09 PM

Share

ಗುವಾಹಟಿ, ಜನವರಿ 19: ಬಿಜೆಪಿ, ಆರ್‌ಎಸ್‌ಎಸ್ (Rahul Gandhi) ವಿರುದ್ಧ ಹೇಳಿಕೆ ನೀಡಿದ್ದ ಹಿನ್ನೆಲೆ ಕಾಂಗ್ರೆಸ್​ ನಾಯಕ ಹಾಗೂ ಲೋಕಸಭೆ ವಿಪಕ್ಷ ನಾಯಕ ರಾಹುಲ್​ ಗಾಂಧಿ ವಿರುದ್ಧ ​ಗುವಾಹಟಿಯ ಪಾನ್ ಬಜಾರ್ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ. ಗುವಾಹಟಿ ಮೂಲದ ವಕೀಲ ಮೊಂಜಿತ್ ಚೇಟಿಯಾ ದೂರು ನೀಡಿದ್ದರು.  ಆ ನಿಟ್ಟಿನಲ್ಲಿ ದೇಶದ ಸಾರ್ವಭೌಮತೆ, ಏಕತೆ ಮತ್ತು ಸಮಗ್ರತೆಗೆ ಧಕ್ಕೆ ತರುವ ಕೃತ್ಯಗಳ ಆರೋಪದ ಮೇಲೆ ಸೆಕ್ಷನ್ 152 ಮತ್ತು 197 (1)ಡಿ ಅಡಿಯಲ್ಲಿ ಎಫ್​​ಐಆರ್​ ದಾಖಲಿಸಲಾಗಿದೆ.

ಬಿಜೆಪಿ ಮತ್ತು ಆರ್​​ಎಸ್​ಎಸ್​ ಪ್ರತಿಯೊಂದು ಸಂಸ್ಥೆಯನ್ನು ವಶಪಡಿಸಿಕೊಂಡಿವೆ. ನಾವು ಈಗ ಬಿಜೆಪಿ, ಆರ್‌ಎಸ್‌ಎಸ್ ವಿರುದ್ಧ ಹೋರಾಡುತ್ತಿದ್ದೇವೆ ಎಂದು ಕಾಂಗ್ರೆಸ್​ ಕಚೇರಿ ಉದ್ಘಾಟನೆ ವೇಳೆ ರಾಹುಲ್ ಗಾಂಧಿ ಹೇಳಿದ್ದರು. ಇದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.

ಇದನ್ನೂ ಓದಿ: ಬಿಜೆಪಿ ಶಾಸಕರಿಗೆ ಅಧಿಕಾರವೇ ಇಲ್ಲ; ಪಾಟ್ನಾದಲ್ಲಿ ಆರ್‌ಎಸ್‌ಎಸ್ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ರಾಹುಲ್ ಗಾಂಧಿ ಈ ಹೇಳಿಕೆಯೂ ಅಪಾಯಕಾರಿ, ಅಶಾಂತಿಗೆ ಕಾರಣವಾಗಬಹುದು. ಪ್ರತ್ಯೇಕತಾವಾದಿ ಭಾವನೆಗಳನ್ನು ಉತ್ತೇಜಿಸಬಹುದು. ಸಾರ್ವಜನಿಕರನ್ನು ದಂಗೆ ಪ್ರಚೋದಿಸಬಹುದು ಎಂದು ವಕೀಲ ಮೊಂಜಿತ್ ಚೇಟಿಯಾ ತಮ್ಮ ದೂರಿನಲ್ಲಿ ಆರೋಪಿಸಿದ್ದಾರೆ.

ರಾಮಮಂದಿರ ಉದ್ಘಾಟನೆಯಾಗಿ ಒಂದು ವರ್ಷ ಕಳೆದ ಹಿನ್ನೆಲೆ ಅಯೋಧ್ಯೆಯಲ್ಲಿ ಮಾತನಾಡಿದ್ದ ಆರ್​​ಎಸ್​ಎಸ್ ಮುಖ್ಯಸ್ಥ ಮೋಹನ್ ಭಾಗವತ್, ರಾಮ ಮಂದಿರ ಉದ್ಘಾಟನೆ ಬಳಿಕ ಸ್ವಾತಂತ್ರ್ಯ ಸಿಕ್ಕಿದೆ ಎಂಬ ಹೇಳಿಕೆಗೆ ಕೊಟ್ಟಿದ್ದರು. ಭಾಗವತ್ ಮಾತಿಗೆ ರಾಹುಲ್ ಗಾಂಧಿ ಕೆಂಡಾಮಂಡಲರಾಗಿದ್ದರು. ಪ್ರತಿಯೊಬ್ಬ ಭಾರತೀಯರಿಗೂ ಅವಮಾನ ಮಾಡಿದ್ದಾರೆ. ಸ್ವಾತಂತ್ರ್ಯ ಹೋರಾಟ, ಸಂವಿಧಾನಕ್ಕೆ ಅವಮಾನಿಸಿದ್ದಾರೆ ಎಂದು ಕಿಡಿಕಾರಿದ್ದರು.

ಇದನ್ನೂ ಓದಿ: ಕಾಂಗ್ರೆಸ್​ನ ಕೊಳಕು ಸತ್ಯ ಬಯಲು; ರಾಹುಲ್ ಗಾಂಧಿ ವಿವಾದಾತ್ಮಕ ಹೇಳಿಕೆಗೆ ಬಿಜೆಪಿ ತಿರುಗೇಟು

ಬಳಿಕ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಮೋಹನ್​ ಭಾಗವತ್ ಹೇಳಿಕೆ ಸಹಜ ಯಾಕಂದ್ರೆ ಮೋದಿಯವರೂ ಕೂಡ 2014ಕ್ಕೆ ಸ್ವಾತಂತ್ರ್ಯ ಸಿಕ್ತು ಎಂದು ಭಾವಿಸುತ್ತಾರೆ ಅಂತಾ ವ್ಯಂಗ್ಯವಾಡಿದ್ದರು. ಸದ್ಯ ಮೋಹನ್ ಭಾಗವತ್ ಹೇಳಿಕೆ ವಿರುದ್ಧ ಕಾಂಗ್ರೆಸ್​ ನಾಯಕರು ಮುಗಿಬಿದ್ದಿದ್ದಾರೆ. ಮುಂದಿನ ಚುನಾವಣೆಗಳಲ್ಲೂ ಕಾಂಗ್ರೆಸ್​ಗೆ ಇದೇ ಅಸ್ತ್ರವಾದ್ರೂ ಅನುಮಾನವಿಲ್ಲ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:52 pm, Sun, 19 January 25

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?