ಗುವಾಹಟಿ, ಜನವರಿ 19: ಬಿಜೆಪಿ, ಆರ್‌ಎಸ್‌ಎಸ್ (Rahul Gandhi) ವಿರುದ್ಧ ಹೇಳಿಕೆ ನೀಡಿದ್ದ ಹಿನ್ನೆಲೆ ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ಗುವಾಹಟಿಯ ಪಾನ್ ಬಜಾರ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಗುವಾಹಟಿ ಮೂಲದ ವಕೀಲ ಮೊಂಜಿತ್ ಚೇಟಿಯಾ ದೂರು ನೀಡಿದ್ದರು. ಆ ನಿಟ್ಟಿನಲ್ಲಿ ದೇಶದ ಸಾರ್ವಭೌಮತೆ, ಏಕತೆ ಮತ್ತು ಸಮಗ್ರತೆಗೆ ಧಕ್ಕೆ ತರುವ ಕೃತ್ಯಗಳ ಆರೋಪದ ಮೇಲೆ ಸೆಕ್ಷನ್ 152 ಮತ್ತು 197 (1)ಡಿ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.
ಬಿಜೆಪಿ ಮತ್ತು ಆರ್‌ಎಸ್‌ಎಸ್ ಪ್ರತಿಯೊಂದು ಸಂಸ್ಥೆಯನ್ನು ವಶಪಡಿಸಿಕೊಂಡಿವೆ. ನಾವು ಈಗ ಬಿಜೆಪಿ, ಆರ್‌ಎಸ್‌ಎಸ್ ವಿರುದ್ಧ ಹೋರಾಡುತ್ತಿದ್ದೇವೆ ಎಂದು ಕಾಂಗ್ರೆಸ್ ಕಚೇರಿ ಉದ್ಘಾಟನೆ ವೇಳೆ ರಾಹುಲ್ ಗಾಂಧಿ ಹೇಳಿದ್ದರು. ಇದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.
ಇದನ್ನೂ ಓದಿ: ಬಿಜೆಪಿ ಶಾಸಕರಿಗೆ ಅಧಿಕಾರವೇ ಇಲ್ಲ; ಪಾಟ್ನಾದಲ್ಲಿ ಆರ್‌ಎಸ್‌ಎಸ್ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ
ರಾಹುಲ್ ಗಾಂಧಿ ಈ ಹೇಳಿಕೆಯೂ ಅಪಾಯಕಾರಿ, ಅಶಾಂತಿಗೆ ಕಾರಣವಾಗಬಹುದು. ಪ್ರತ್ಯೇಕತಾವಾದಿ ಭಾವನೆಗಳನ್ನು ಉತ್ತೇಜಿಸಬಹುದು. ಸಾರ್ವಜನಿಕರನ್ನು ದಂಗೆ ಪ್ರಚೋದಿಸಬಹುದು ಎಂದು ವಕೀಲ ಮೊಂಜಿತ್ ಚೇಟಿಯಾ ತಮ್ಮ ದೂರಿನಲ್ಲಿ ಆರೋಪಿಸಿದ್ದಾರೆ.
ರಾಮಮಂದಿರ ಉದ್ಘಾಟನೆಯಾಗಿ ಒಂದು ವರ್ಷ ಕಳೆದ ಹಿನ್ನೆಲೆ ಅಯೋಧ್ಯೆಯಲ್ಲಿ ಮಾತನಾಡಿದ್ದ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್, ರಾಮ ಮಂದಿರ ಉದ್ಘಾಟನೆ ಬಳಿಕ ಸ್ವಾತಂತ್ರ್ಯ ಸಿಕ್ಕಿದೆ ಎಂಬ ಹೇಳಿಕೆಗೆ ಕೊಟ್ಟಿದ್ದರು. ಭಾಗವತ್ ಮಾತಿಗೆ ರಾಹುಲ್ ಗಾಂಧಿ ಕೆಂಡಾಮಂಡಲರಾಗಿದ್ದರು. ಪ್ರತಿಯೊಬ್ಬ ಭಾರತೀಯರಿಗೂ ಅವಮಾನ ಮಾಡಿದ್ದಾರೆ. ಸ್ವಾತಂತ್ರ್ಯ ಹೋರಾಟ, ಸಂವಿಧಾನಕ್ಕೆ ಅವಮಾನಿಸಿದ್ದಾರೆ ಎಂದು ಕಿಡಿಕಾರಿದ್ದರು.
ಇದನ್ನೂ ಓದಿ: ಕಾಂಗ್ರೆಸ್ನ ಕೊಳಕು ಸತ್ಯ ಬಯಲು; ರಾಹುಲ್ ಗಾಂಧಿ ವಿವಾದಾತ್ಮಕ ಹೇಳಿಕೆಗೆ ಬಿಜೆಪಿ ತಿರುಗೇಟು
ಬಳಿಕ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಮೋಹನ್ ಭಾಗವತ್ ಹೇಳಿಕೆ ಸಹಜ ಯಾಕಂದ್ರೆ ಮೋದಿಯವರೂ ಕೂಡ 2014ಕ್ಕೆ ಸ್ವಾತಂತ್ರ್ಯ ಸಿಕ್ತು ಎಂದು ಭಾವಿಸುತ್ತಾರೆ ಅಂತಾ ವ್ಯಂಗ್ಯವಾಡಿದ್ದರು. ಸದ್ಯ ಮೋಹನ್ ಭಾಗವತ್ ಹೇಳಿಕೆ ವಿರುದ್ಧ ಕಾಂಗ್ರೆಸ್ ನಾಯಕರು ಮುಗಿಬಿದ್ದಿದ್ದಾರೆ. ಮುಂದಿನ ಚುನಾವಣೆಗಳಲ್ಲೂ ಕಾಂಗ್ರೆಸ್ಗೆ ಇದೇ ಅಸ್ತ್ರವಾದ್ರೂ ಅನುಮಾನವಿಲ್ಲ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 8:52 pm, Sun, 19 January 25