AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Defamation Case: ರಾಹುಲ್ ಗಾಂಧಿ ಅರ್ಜಿ ಗುಜರಾತ್ ಹೈಕೋರ್ಟ್​​ನಲ್ಲಿ ಇಂದು ವಿಚಾರಣೆ

ಮೋದಿ ಉಪನಾಮ ಹೇಳಿಕೆ ಕುರಿತು ವಿಚಾರಣಾ ನ್ಯಾಯಾಲಯ ನೀಡಿರುವ ತೀರ್ಪನ್ನು ಪ್ರಶ್ನಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಲ್ಲಿಸಿರುವ ಮೇಲ್ಮನವಿ ಅರ್ಜಿಯನ್ನು ಗುಜರಾತ್ ಹೈಕೋರ್ಟ್​​ ಇಂದು (ಶನಿವಾರ) ವಿಚಾರಣೆ ನಡೆಸಲಿದೆ.

Defamation Case: ರಾಹುಲ್ ಗಾಂಧಿ ಅರ್ಜಿ ಗುಜರಾತ್ ಹೈಕೋರ್ಟ್​​ನಲ್ಲಿ ಇಂದು ವಿಚಾರಣೆ
ರಾಹುಲ್ ಗಾಂಧಿ
Ganapathi Sharma
|

Updated on: Apr 29, 2023 | 10:53 AM

Share

ಅಹಮದಾಬಾದ್: ಮೋದಿ ಉಪನಾಮ ಹೇಳಿಕೆ ಕುರಿತು ವಿಚಾರಣಾ ನ್ಯಾಯಾಲಯ ನೀಡಿರುವ ತೀರ್ಪನ್ನು ಪ್ರಶ್ನಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಸಲ್ಲಿಸಿರುವ ಮೇಲ್ಮನವಿ ಅರ್ಜಿಯನ್ನು ಗುಜರಾತ್ ಹೈಕೋರ್ಟ್​​ (Gujrat High Court) ಇಂದು (ಶನಿವಾರ) ವಿಚಾರಣೆ ನಡೆಸಲಿದೆ. ನ್ಯಾಯಮೂರ್ತಿ ಗೀತಾ ಗೋಪಿ ಅವರು ವಿಚಾರಣೆಯಿಂದ ಹಿಂದೆ ಸರಿದ ಕಾರಣ, ಪ್ರಕರಣ ಬೇರೊಂದು ನ್ಯಾಯಪೀಠದ ಮುಂದೆ ವಿಚಾರಣೆಗೆ ಬರಲಿದೆ. ಗೀತಾ ಗೋಪಿ ಅವರು ಪ್ರಕರಣವನ್ನು ಮುಖ್ಯ ನ್ಯಾಯಮೂರ್ತಿ ಎಜೆ ದೇಸಾಯಿ ಅವರಿಗೆ ಹಸ್ತಾಂತರಿಸುವಂತೆ ಅಥವಾ ಬೇರೆ ಪೀಠಕ್ಕೆ ನಿಯೋಜಿಸುವಂತೆ ನ್ಯಾಯಾಲಯದ ರಿಜಿಸ್ಟ್ರಿಗೆ ನಿರ್ದೇಶನ ನೀಡಿದ್ದರು.

ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ರಾಹುಲ್ ಗಾಂಧಿ ಅವರಿಗೆ ಕಳೆದ ತಿಂಗಳು, ಸೂರತ್‌ನ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಅಪರಾಧಿ ಎಂದು ಘೋಷಿಸಿತ್ತು ಮತ್ತು ಅವರಿಗೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು. ಇದರ ಬೆನ್ನಲ್ಲೇ ಅವರನ್ನು ಸಂಸತ್ ಸದಸ್ಯ ಸ್ಥಾನದಿಂದಲೂ ಅನರ್ಹಗೊಳಿಸಲಾಗಿತ್ತು. ರಾಹುಲ್ ಗಾಂಧಿ ಅವರ ‘ಮೋದಿ ಉಪನಾಮ ಟೀಕೆ’ ವಿರುದ್ಧ ಗುಜರಾತ್ ಬಿಜೆಪಿ ಶಾಸಕ ಪೂರ್ಣೇಶ್ ಮೋದಿ ಅವರು ಪ್ರಕರಣ ದಾಖಲಿಸಿದ್ದರು.

ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದ ಬೆನ್ನಲ್ಲೇ ಜಾಮೀನು ಸಹ ನೀಡಿದ್ದ ನ್ಯಾಯಾಲಯ ಮೇಲ್ಮನವಿ ಸಲ್ಲಿಸಲು 30 ದಿನಗಳ ಕಾಲಶವಕಾಶ ನೀಡಿತ್ತು. ಸಂಸತ್ ಸ್ಥಾನದಿಂದ ಅನರ್ಹಗೊಂಡ ರಾಹುಲ್​ ಗಾಂಧಿಯವರು ಇತ್ತೀಚೆಗೆ ದೆಹಲಿಯ ಸಂಸದರ ಅಧಿಕೃತ ನಿವಾಸವನ್ನೂ ತೆರವುಗೊಳಿಸಿದ್ದರು.

ಇದನ್ನೂ ಓದಿ: Rahul Gandhi: ಸೆಂಟ್ರಲ್ ದೆಹಲಿಯಲ್ಲಿರುವ ಅಧಿಕೃತ ನಿವಾಸ ಖಾಲಿ ಮಾಡಿದ ರಾಹುಲ್ ಗಾಂಧಿ

2019 ರಲ್ಲಿ ಲೋಕಸಭಾ ಚುನಾವಣೆಯ ಪ್ರಚಾರದ ವೇಳೆ ಕೋಲಾರದಲ್ಲಿ ಮಾತನಾಡಿದ್ದ ರಾಹುಲ್ ಗಾಂಧಿಯ, ‘ಎಲ್ಲಾ ಕಳ್ಳರಿಗೆ ಮೋದಿ ಎಂಬ ಉಪನಾಮ ಏಕಿರುತ್ತದೆ’ ಎಂದು ಪ್ರಶ್ನಿಸಿದ್ದರು. ಅವರು ಪ್ರಧಾನಿಯನ್ನು ಗುರಿಯಾಗಿಟ್ಟುಕೊಂಡು ಪರಾರಿಯಾಗಿರುವ ಉದ್ಯಮಿ ನೀರವ್ ಮೋದಿ ಮತ್ತು ಲಲಿತ್ ಮೋದಿ ಬಗ್ಗೆ ವಾಗ್ದಾಳಿ ನಡೆಸಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ
ಬೆಂಗಳೂರಿನ ತಿರುಮಲ ತಿರುಪತಿ ದೇವಾಲಯಕ್ಕೆ ಹರಿದುಬಂತು ಭಕ್ತರ ದಂಡು!
ಬೆಂಗಳೂರಿನ ತಿರುಮಲ ತಿರುಪತಿ ದೇವಾಲಯಕ್ಕೆ ಹರಿದುಬಂತು ಭಕ್ತರ ದಂಡು!
ಹಳ್ಳಿಯಲ್ಲಿ ವ್ಯಕ್ತಿಯ ಮೇಲೆ ದಾಳಿ ಮಾಡಿ, ಮಂಚದ ಮೇಲೆ ಮಲಗಿದ ಹುಲಿ
ಹಳ್ಳಿಯಲ್ಲಿ ವ್ಯಕ್ತಿಯ ಮೇಲೆ ದಾಳಿ ಮಾಡಿ, ಮಂಚದ ಮೇಲೆ ಮಲಗಿದ ಹುಲಿ