ತಮಿಳುನಾಡಿನಲ್ಲಿ ರಾಹುಲ್ ಗಾಂಧಿ ಹೆಲಿಕಾಪ್ಟರ್​ ಪರಿಶೀಲನೆ ನಡೆಸಿದ ಚುನಾವಣಾ ಅಧಿಕಾರಿಗಳು

ತಮಿಳುನಾಡಿನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇದ್ದ ಹೆಲಿಕಾಪ್ಟರ್ ಅನ್ನು ಚುನಾವಣಾ ಆಯೋಗದ ಅಧಿಕಾರಿಗಳು ಪರಿಶೀಲನೆ ನಡೆಸಿದರು. ರಾಜ್ಯದ ನೀಲಗಿರಿಯಲ್ಲಿ ಆಯೋಗದ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಗಳು ರಾಹುಲ್ ಗಾಂಧಿ ಅವರ ಹೆಲಿಕಾಪ್ಟರ್ ಅನ್ನು ಪರಿಶೀಲಿಸಿದ್ದಾರೆ. ಈ ಕುರಿತು ವಿಡಿಯೋವೊಂದು ಹೊರಬಿದ್ದಿದೆ. ಹೆಲಿಕಾಪ್ಟರ್ ಇಳಿದ ತಕ್ಷಣ ಆಯೋಗದ ಅಧಿಕಾರಿಗಳು ಬರುವುದು ಕಂಡು ಬರುತ್ತಿದೆ. ಸ್ವಲ್ಪ ಸಮಯದ ನಂತರ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಹೊರಬಂದರು.

ತಮಿಳುನಾಡಿನಲ್ಲಿ ರಾಹುಲ್ ಗಾಂಧಿ ಹೆಲಿಕಾಪ್ಟರ್​ ಪರಿಶೀಲನೆ ನಡೆಸಿದ ಚುನಾವಣಾ ಅಧಿಕಾರಿಗಳು
ರಾಹುಲ್ ಗಾಂಧಿImage Credit source: Hindustan Times
Follow us
|

Updated on: Apr 15, 2024 | 2:01 PM

ತಮಿಳುನಾಡಿನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ(Rahul Gandhi) ಇದ್ದ  ಹೆಲಿಕಾಪ್ಟರ್ ಅನ್ನು ಚುನಾವಣಾ ಆಯೋಗದ ಅಧಿಕಾರಿಗಳು ಪರಿಶೀಲನೆ ನಡೆಸಿದರು. ರಾಜ್ಯದ ನೀಲಗಿರಿಯಲ್ಲಿ ಆಯೋಗದ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಗಳು ರಾಹುಲ್ ಗಾಂಧಿ ಅವರ ಹೆಲಿಕಾಪ್ಟರ್ ಅನ್ನು ಪರಿಶೀಲಿಸಿದ್ದಾರೆ. ಈ ಕುರಿತು ವಿಡಿಯೋವೊಂದು ಹೊರಬಿದ್ದಿದೆ. ಹೆಲಿಕಾಪ್ಟರ್ ಇಳಿದ ತಕ್ಷಣ ಆಯೋಗದ ಅಧಿಕಾರಿಗಳು ಬರುವುದು ಕಂಡು ಬರುತ್ತಿದೆ. ಸ್ವಲ್ಪ ಸಮಯದ ನಂತರ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಹೊರಬಂದರು.

ವಾಸ್ತವವಾಗಿ, ಲೋಕಸಭೆ ಚುನಾವಣೆಯ ದೃಷ್ಟಿಯಿಂದ, ಕಾಂಗ್ರೆಸ್ ಪರ ಪ್ರಚಾರಕ್ಕಾಗಿ ರಾಹುಲ್ ಗಾಂಧಿ ತಮಿಳುನಾಡಿನಿಂದ ಕೇರಳಕ್ಕೆ ಹೊರಟಿದ್ದರು. ನಾಲ್ಕು ದಿನಗಳ ಕಾಲ ಪಕ್ಷದ ಪರ ಪ್ರಚಾರ ಮಾಡಲು ಹೋಗುತ್ತಿದ್ದಾರೆ.

ರಾಹುಲ್ ಗಾಂಧಿ ವೇಳಾಪಟ್ಟಿ ಏನು? ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೋಮವಾರ ಕೋಳಿಕ್ಕೋಡ್ ತಲುಪಲಿದ್ದು, ಅಲ್ಲಿ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಮತ್ತು ಮಂಗಳವಾರ (ಏಪ್ರಿಲ್ 16, 2024) ವಯನಾಡಿಗೆ ಭೇಟಿ ನೀಡಲಿದ್ದಾರೆ. ನಂತರ ಗುರುವಾರ ಕಣ್ಣೂರು, ಪಾಲಕ್ಕಾಡ್ ಮತ್ತು ಕೊಟ್ಟಾಯಂನಲ್ಲಿ ಪ್ರಚಾರ ನಡೆಸಲಿದ್ದಾರೆ. ತ್ರಿಶೂರ್, ತಿರುವನಂತಪುರಂ ಮತ್ತು ಆಲಪ್ಪುಳಕ್ಕೂ ಭೇಟಿ ನೀಡಲಿದ್ದಾರೆ.

ಮತ್ತಷ್ಟು ಓದಿ: Rahul Gandhi Files Nomination: ಲೋಕಸಭಾ ಚುನಾವಣೆಗೆ ವಯನಾಡಿನಿಂದ ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ

2019ರ ಲೋಕಸಭಾ ಚುನಾವಣೆಯಲ್ಲಿ ರಾಹುಲ್ ಗಾಂಧಿ ವಯನಾಡಿನಿಂದ ಗೆದ್ದಿದ್ದರು. 20 ಲೋಕಸಭಾ ಕ್ಷೇತ್ರಗಳನ್ನು ಹೊಂದಿರುವ ಕೇರಳದಲ್ಲಿ ಏಪ್ರಿಲ್ 26ರಿಂದ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಮತ್ತೊಂದೆಡೆ, ತಮಿಳುನಾಡಿನ 39 ಲೋಕಸಭಾ ಕ್ಷೇತ್ರಗಳಿಗೆ ಏಪ್ರಿಲ್ 19ರಂದು ಚುನಾವಣೆ ನಡೆಯಲಿದೆ. ಜೂನ್ 4 ರಂದು ಮತ ಎಣಿಕೆ ನಡೆಯಲಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ