ತಮಿಳುನಾಡಿನಲ್ಲಿ ರಾಹುಲ್ ಗಾಂಧಿ ಹೆಲಿಕಾಪ್ಟರ್​ ಪರಿಶೀಲನೆ ನಡೆಸಿದ ಚುನಾವಣಾ ಅಧಿಕಾರಿಗಳು

|

Updated on: Apr 15, 2024 | 2:01 PM

ತಮಿಳುನಾಡಿನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇದ್ದ ಹೆಲಿಕಾಪ್ಟರ್ ಅನ್ನು ಚುನಾವಣಾ ಆಯೋಗದ ಅಧಿಕಾರಿಗಳು ಪರಿಶೀಲನೆ ನಡೆಸಿದರು. ರಾಜ್ಯದ ನೀಲಗಿರಿಯಲ್ಲಿ ಆಯೋಗದ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಗಳು ರಾಹುಲ್ ಗಾಂಧಿ ಅವರ ಹೆಲಿಕಾಪ್ಟರ್ ಅನ್ನು ಪರಿಶೀಲಿಸಿದ್ದಾರೆ. ಈ ಕುರಿತು ವಿಡಿಯೋವೊಂದು ಹೊರಬಿದ್ದಿದೆ. ಹೆಲಿಕಾಪ್ಟರ್ ಇಳಿದ ತಕ್ಷಣ ಆಯೋಗದ ಅಧಿಕಾರಿಗಳು ಬರುವುದು ಕಂಡು ಬರುತ್ತಿದೆ. ಸ್ವಲ್ಪ ಸಮಯದ ನಂತರ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಹೊರಬಂದರು.

ತಮಿಳುನಾಡಿನಲ್ಲಿ ರಾಹುಲ್ ಗಾಂಧಿ ಹೆಲಿಕಾಪ್ಟರ್​ ಪರಿಶೀಲನೆ ನಡೆಸಿದ ಚುನಾವಣಾ ಅಧಿಕಾರಿಗಳು
ರಾಹುಲ್ ಗಾಂಧಿ
Image Credit source: Hindustan Times
Follow us on

ತಮಿಳುನಾಡಿನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ(Rahul Gandhi) ಇದ್ದ  ಹೆಲಿಕಾಪ್ಟರ್ ಅನ್ನು ಚುನಾವಣಾ ಆಯೋಗದ ಅಧಿಕಾರಿಗಳು ಪರಿಶೀಲನೆ ನಡೆಸಿದರು. ರಾಜ್ಯದ ನೀಲಗಿರಿಯಲ್ಲಿ ಆಯೋಗದ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಗಳು ರಾಹುಲ್ ಗಾಂಧಿ ಅವರ ಹೆಲಿಕಾಪ್ಟರ್ ಅನ್ನು ಪರಿಶೀಲಿಸಿದ್ದಾರೆ. ಈ ಕುರಿತು ವಿಡಿಯೋವೊಂದು ಹೊರಬಿದ್ದಿದೆ. ಹೆಲಿಕಾಪ್ಟರ್ ಇಳಿದ ತಕ್ಷಣ ಆಯೋಗದ ಅಧಿಕಾರಿಗಳು ಬರುವುದು ಕಂಡು ಬರುತ್ತಿದೆ. ಸ್ವಲ್ಪ ಸಮಯದ ನಂತರ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಹೊರಬಂದರು.

ವಾಸ್ತವವಾಗಿ, ಲೋಕಸಭೆ ಚುನಾವಣೆಯ ದೃಷ್ಟಿಯಿಂದ, ಕಾಂಗ್ರೆಸ್ ಪರ ಪ್ರಚಾರಕ್ಕಾಗಿ ರಾಹುಲ್ ಗಾಂಧಿ ತಮಿಳುನಾಡಿನಿಂದ ಕೇರಳಕ್ಕೆ ಹೊರಟಿದ್ದರು. ನಾಲ್ಕು ದಿನಗಳ ಕಾಲ ಪಕ್ಷದ ಪರ ಪ್ರಚಾರ ಮಾಡಲು ಹೋಗುತ್ತಿದ್ದಾರೆ.

ರಾಹುಲ್ ಗಾಂಧಿ ವೇಳಾಪಟ್ಟಿ ಏನು?
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೋಮವಾರ ಕೋಳಿಕ್ಕೋಡ್ ತಲುಪಲಿದ್ದು, ಅಲ್ಲಿ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಮತ್ತು ಮಂಗಳವಾರ (ಏಪ್ರಿಲ್ 16, 2024) ವಯನಾಡಿಗೆ ಭೇಟಿ ನೀಡಲಿದ್ದಾರೆ. ನಂತರ ಗುರುವಾರ ಕಣ್ಣೂರು, ಪಾಲಕ್ಕಾಡ್ ಮತ್ತು ಕೊಟ್ಟಾಯಂನಲ್ಲಿ ಪ್ರಚಾರ ನಡೆಸಲಿದ್ದಾರೆ. ತ್ರಿಶೂರ್, ತಿರುವನಂತಪುರಂ ಮತ್ತು ಆಲಪ್ಪುಳಕ್ಕೂ ಭೇಟಿ ನೀಡಲಿದ್ದಾರೆ.

ಮತ್ತಷ್ಟು ಓದಿ: Rahul Gandhi Files Nomination: ಲೋಕಸಭಾ ಚುನಾವಣೆಗೆ ವಯನಾಡಿನಿಂದ ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ

2019ರ ಲೋಕಸಭಾ ಚುನಾವಣೆಯಲ್ಲಿ ರಾಹುಲ್ ಗಾಂಧಿ ವಯನಾಡಿನಿಂದ ಗೆದ್ದಿದ್ದರು. 20 ಲೋಕಸಭಾ ಕ್ಷೇತ್ರಗಳನ್ನು ಹೊಂದಿರುವ ಕೇರಳದಲ್ಲಿ ಏಪ್ರಿಲ್ 26ರಿಂದ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಮತ್ತೊಂದೆಡೆ, ತಮಿಳುನಾಡಿನ 39 ಲೋಕಸಭಾ ಕ್ಷೇತ್ರಗಳಿಗೆ ಏಪ್ರಿಲ್ 19ರಂದು ಚುನಾವಣೆ ನಡೆಯಲಿದೆ. ಜೂನ್ 4 ರಂದು ಮತ ಎಣಿಕೆ ನಡೆಯಲಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ