Narendra Modi Birthday: ರೈಲು ನಿಲ್ದಾಣ ಸ್ವಚ್ಛಗೊಳಿಸುವ ಮೂಲಕ ಮೋದಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಸಚಿವ ಅಶ್ವಿನಿ ವೈಷ್ಣವ್

ಪ್ರಧಾನಿ ನರೇಂದ್ರ ಮೋದಿಯವರು ಇಂದು 72ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ಈ ಸಂದರ್ಭದಲ್ಲಿ ಎಲ್ಲ ನಾಯಕರು ಪ್ರಧಾನಿ ಮೋದಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ.

Narendra Modi Birthday: ರೈಲು ನಿಲ್ದಾಣ ಸ್ವಚ್ಛಗೊಳಿಸುವ ಮೂಲಕ ಮೋದಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಸಚಿವ ಅಶ್ವಿನಿ ವೈಷ್ಣವ್
Ashwini Vaishnav
TV9kannada Web Team

| Edited By: Nayana Rajeev

Sep 17, 2022 | 11:35 AM

ಪ್ರಧಾನಿ ನರೇಂದ್ರ ಮೋದಿಯವರು ಇಂದು 72ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ಈ ಸಂದರ್ಭದಲ್ಲಿ ಎಲ್ಲ ನಾಯಕರು ಪ್ರಧಾನಿ ಮೋದಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ. ಇದೇ ವೇಳೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬಕ್ಕೆ ವಿಶಿಷ್ಟ ರೀತಿಯಲ್ಲಿ ಶುಭಾಶಯ ಕೋರಿದ್ದರು.

ಪ್ರಧಾನಿ ಮೋದಿಯವರ ಹುಟ್ಟುಹಬ್ಬದ ಸಂದರ್ಭದಲ್ಲಿ, ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ದೆಹಲಿಯ ಹಜರತ್ ನಿಜಾಮುದ್ದೀನ್ ರೈಲು ನಿಲ್ದಾಣವನ್ನು ಸ್ವಚ್ಛಗೊಳಿಸಿದರು ಮತ್ತು ಸ್ವಚ್ಛತೆಯ ಸಂದೇಶವನ್ನು ಸಾರಿದರು.

ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಹಜರತ್ ನಿಜಾಮುದ್ದೀನ್ ರೈಲು ನಿಲ್ದಾಣವನ್ನು ಗುಡಿಸುವ ವಿಡಿಯೋವನ್ನು ಹಂಚಿಕೊಂಡಿದ್ದಾರೆ ಮತ್ತು ಸ್ವಚ್ಛತೆಯೇ ಸೇವೆ ಎಂಬ ಶೀರ್ಷಿಕೆಯಲ್ಲಿ ಬರೆದಿದ್ದಾರೆ. ಇಂದಿನಿಂದ ದೇಶದ ಭಾರತೀಯ ರೈಲ್ವೆ, ಅಂಚೆ ಕಚೇರಿ, ಟೆಲಿಕಾಂ, ಐಟಿ ಮತ್ತು ಇತರ ಇಲಾಖೆಗಳಲ್ಲಿ ಸ್ವಚ್ಛತೆಯ ಅಭಿಯಾನ ಆರಂಭವಾಗಿದೆ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ.

ಪ್ರಧಾನಿ ಮೋದಿಯವರು ರಾಜಕೀಯವನ್ನು ಸೇವಾ ಮಾಧ್ಯಮವನ್ನಾಗಿಸಿಕೊಂಡ ರೀತಿ, ಸ್ವಚ್ಛತೆ ಕೂಡ ಸೇವೆಗೆ ದೊಡ್ಡ ಸಮಾನಾರ್ಥಕವಾಗಿದೆ. ವಿಶೇಷವೆಂದರೆ, ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನವಾದ ಇಂದು ಬಿಜೆಪಿ ವತಿಯಿಂದ ರಕ್ತದಾನ ಕಾರ್ಯಕ್ರಮವನ್ನು ಸಹ ಮಾಡಲಾಗುತ್ತಿದೆ. ರಕ್ತದಾನಕ್ಕಾಗಿ ನಗರ-ನಗರಗಳಲ್ಲಿ ರಕ್ತದಾನ ಶಿಬಿರಗಳನ್ನು ಆಯೋಜಿಸಲಾಗುತ್ತಿದೆ.

ದೇಶದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada