ಪಶ್ಚಿಮ ಬಂಗಾಳ: ತಲೆಯಲ್ಲಿ ಗುಂಡೇಟು, ಪತ್ನಿ ಕೊಲೆಯಾಗಿ 6 ತಿಂಗಳಲ್ಲಿ ರೈಲ್ವೆ ಸಿಬ್ಬಂದಿ ಸಾವು
ಪತ್ನಿ ಮೃತಪಟ್ಟು ಆರೇ ತಿಂಗಳಲ್ಲಿ ರೈಲ್ವೆ ಸಿಬ್ಬಂದಿ ಸಾವನ್ನಪ್ಪಿರುವ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಪಶ್ಚಿಮ ಬಂಗಾಳದ ಚಿತ್ತರಂಜನ್‌ನ ರೈಲ್ವೆ ಟೌನ್‌ಶಿಪ್‌ನಲ್ಲಿರುವ ಸರ್ಕಾರಿ ವಸತಿಗೃಹದೊಳಗೆ ಭಾನುವಾರ ರಾತ್ರಿ ರೈಲ್ವೆ ಉದ್ಯೋಗಿಯೊಬ್ಬರು ಗುಂಡೇಟಿನಿಂದ ಸಾವನ್ನಪ್ಪಿರುವುದು ಪತ್ತೆಯಾಗಿದೆ. ಪ್ರತ್ಯಕ್ಷದರ್ಶಿಗಳ ಪ್ರಕಾರ, ಮೃತ ಪ್ರದೀಪ್ ಚೌಧರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ಆದರೂ ಪೊಲೀಸ್ ತನಿಖೆ ನಡೆಯುತ್ತಿದೆ ಎಂದು ಹೇಳಿದ್ದಾರೆ.

ಕೋಲ್ಕತ್ತಾ, ಅಕ್ಟೋಬರ್ 06: ಪತ್ನಿ ಕೊಲೆಯಾಗಿ ಆರೇ ತಿಂಗಳಲ್ಲಿ ರೈಲ್ವೆ ಸಿಬ್ಬಂದಿ(Railway Staff) ಸಾವನ್ನಪ್ಪಿರುವ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಪಶ್ಚಿಮ ಬಂಗಾಳದ ಚಿತ್ತರಂಜನ್‌ನ ರೈಲ್ವೆ ಟೌನ್‌ಶಿಪ್‌ನಲ್ಲಿರುವ ಸರ್ಕಾರಿ ವಸತಿಗೃಹದೊಳಗೆ ಭಾನುವಾರ ರಾತ್ರಿ ರೈಲ್ವೆ ಉದ್ಯೋಗಿಯೊಬ್ಬರು ಗುಂಡೇಟಿನಿಂದ ಸಾವನ್ನಪ್ಪಿರುವುದು ಪತ್ತೆಯಾಗಿದೆ. ಪ್ರತ್ಯಕ್ಷದರ್ಶಿಗಳ ಪ್ರಕಾರ, ಮೃತ ಪ್ರದೀಪ್ ಚೌಧರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ಆದರೂ ಪೊಲೀಸ್ ತನಿಖೆ ನಡೆಯುತ್ತಿದೆ ಎಂದು ಹೇಳಿದ್ದಾರೆ. ಪ್ರದೀಪ್ ಅವರ ಪತ್ನಿ ಸಂಚಿತಾ ಚೌಧರಿ ಅವರನ್ನು ಅದೇ ಕೋಣೆಯಲ್ಲಿ ಕತ್ತು ಸೀಳಿ ಕೊಲೆ(Murder) ಮಾಡಲಾಗಿತ್ತು. ಇದೀಗ ಆರು ತಿಂಗಳ ಬಳಿಕ ಅದೇ ಕೋಣೆಯಲ್ಲಿ ರೈಲ್ವೆ ಸಿಬ್ಬಂದಿ ಶವವಾಗಿ ಪತ್ತೆಯಾಗಿದ್ದಾರೆ.
ಪೊಲೀಸರು ಮತ್ತು ಸ್ಥಳೀಯ ಮೂಲಗಳ ಪ್ರಕಾರ, ಪ್ರದೀಪ್ ತನ್ನ ಮಗ ದೇಬಾದಿತ್ಯ ಜೊತೆ ಕ್ವಾರ್ಟರ್ಸ್‌ನಲ್ಲಿ ವಾಸಿಸುತ್ತಿದ್ದರು. ಭಾನುವಾರ ಮಧ್ಯಾಹ್ನ, ದೇಬಾದಿತ್ಯ ಹೊರಗೆ ಹೋಗಿದ್ದರು, ಮತ್ತು ರಾತ್ರಿ 8 ಗಂಟೆ ಸುಮಾರಿಗೆ ಹಿಂತಿರುಗಿದಾಗ, ಬಾಗಿಲು ಒಳಗಿನಿಂದ ಲಾಕ್ ಆಗಿರುವುದನ್ನು ಕಂಡರು.
ಪದೇ ಪದೇ ಬಾಗಿಲು ಬಡಿದರೂ ಯಾವುದೇ ಪ್ರತಿಕ್ರಿಯೆ ಬರಲಿಲ್ಲ. ನಂತರ ಅವರು ಸ್ಥಳೀಯ ವೈಸ್ ವಾರ್ಡನ್ ಮತ್ತು ಚಿತ್ತರಂಜನ್ ಪೊಲೀಸರಿಗೆ ಮಾಹಿತಿ ನೀಡಿದರು. ಪೊಲೀಸರು ಸ್ಥಳಕ್ಕೆ ಬಂದು ಬಾಗಿಲು ಒಡೆದು ನೋಡಿದಾಗ ಪ್ರದೀಪ್ ತಲೆಗೆ ಗುಂಡೇಟಿನಿಂದ ಮೃತಪಟ್ಟು ಹಾಸಿಗೆಯ ಮೇಲೆ ಬಿದ್ದಿರುವುದು ಕಂಡುಬಂದಿದೆ. ಪೊಲೀಸ್ ಮೂಲಗಳ ಪ್ರಕಾರ, ಸ್ಥಳದಿಂದ ಬಂದೂಕನ್ನು ಸಹ ವಶಪಡಿಸಿಕೊಳ್ಳಲಾಗಿದೆ.
ಮತ್ತಷ್ಟು ಓದಿ: ಕೇರಳ: ಬಾಡಿಗೆ ಮನೆಯೊಂದರಲ್ಲಿ ವ್ಯಕ್ತಿಯ ಅರೆಬೆಂದ ಶವ ಪತ್ತೆ
ಇದು ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಘಟನೆಯ ತನಿಖೆಗಾಗಿ ವಿಧಿವಿಜ್ಞಾನ ತಜ್ಞರನ್ನು ಕರೆಸಲಾಗಿದೆ. ಏಪ್ರಿಲ್ 3 ರಂದು ನಡೆದ ಬಸಂತಿ ಪೂಜೆಯಂದು, ಪ್ರದೀಪ್ ಅವರ ಪತ್ನಿಯ ದೇಹ ಕತ್ತು ಸೀಳಿದ ಸ್ಥಿತಿಯಲ್ಲಿ ಮನೆಯೊಳಗೆ ಪತ್ತೆಯಾಗಿದ್ದು, ಆ ಪ್ರದೇಶದಾದ್ಯಂತ ವ್ಯಾಪಕ ಆಘಾತವನ್ನುಂಟು ಮಾಡಿತ್ತು.
ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪ್ರದೀಪ್ ಅವರನ್ನು ಹಲವು ಬಾರಿ ವಿಚಾರಣೆ ನಡೆಸಿದ್ದರು. ಅವರು ಆತ್ಮಹತ್ಯೆಯಿಂದ ಸಾವನ್ನಪ್ಪಿದ್ದಾರೆ ಹೇಳಲಾಗಿದೆ. ಪೊಲೀಸ್ ತನಿಖೆ ನಡೆಯುತ್ತಿದೆ. ಅವರ ಪತ್ನಿಯನ್ನು ಕೊಂದ ಆರೋಪಿಗಳನ್ನು ಇನ್ನೂ ಬಂಧಿಸಿಲ್ಲ. ಚಿತ್ತರಂಜನ್‌ನಲ್ಲಿ ಅಪರಾಧ ಹೆಚ್ಚಾಗಿದೆ. ಆಡಳಿತವು ಹೆಚ್ಚು ಕ್ರಿಯಾಶೀಲವಾಗಿರಬೇಕು ಮತ್ತು ಶೀಘ್ರದಲ್ಲೇ ಕ್ರಮ ಕೈಗೊಳ್ಳಬೇಕು ಎಂದು CRMCಯ ಪ್ರಧಾನ ಕಾರ್ಯದರ್ಶಿ ಇಂದ್ರಜಿತ್ ಸಿಂಗ್ ಹೇಳಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ




