AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rain Updates: ಒಡಿಶಾ, ತೆಲಂಗಾಣ ಸೇರಿ ಈ ರಾಜ್ಯಗಳಲ್ಲಿ ಇಂದಿನಿಂದ ಭಾರೀ ಮಳೆ; ಹಲವೆಡೆ ಆರೆಂಜ್ ಅಲರ್ಟ್​ ಘೋಷಣೆ

ಮುಂದಿನ 3 ದಿನಗಳ ಕಾಲ ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ, ಉತ್ತರಾಖಂಡ, ಉತ್ತರ ಪ್ರದೇಶ, ಬಿಹಾರ, ಪಶ್ಚಿಮ ಬಂಗಾಳ, ಒಡಿಶಾ, ಜಾರ್ಖಂಡ್, ಮಧ್ಯಪ್ರದೇಶ, ತೆಲಂಗಾಣ ಮತ್ತು ಛತ್ತೀಸ್‌ಗಢದಲ್ಲಿ ಮಳೆಯಾಗಲಿದೆ

Rain Updates: ಒಡಿಶಾ, ತೆಲಂಗಾಣ ಸೇರಿ ಈ ರಾಜ್ಯಗಳಲ್ಲಿ ಇಂದಿನಿಂದ ಭಾರೀ ಮಳೆ; ಹಲವೆಡೆ ಆರೆಂಜ್ ಅಲರ್ಟ್​ ಘೋಷಣೆ
ಮಳೆ
TV9 Web
| Updated By: ಸುಷ್ಮಾ ಚಕ್ರೆ|

Updated on: Sep 19, 2022 | 3:50 PM

Share

ನವದೆಹಲಿ: ಇಂದಿನಿಂದ ನಾಲ್ಕೈದು ದಿನಗಳ ಕಾಲ ಭಾರತದ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಎಚ್ಚರಿಕೆ ನೀಡಿದೆ. ಈ ವರ್ಷದ ಮುಂಗಾರು (Monsoon) ಕೊನೆಯ ಹಂತದಲ್ಲಿದ್ದರೂ ದೇಶದ ಹಲವು ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರ ಮಳೆಯಾಗುತ್ತಿದೆ. ಒಡಿಶಾ (Odisha Rain), ಆಂಧ್ರಪ್ರದೇಶ ಮತ್ತು ಪಶ್ಚಿಮ ಬಂಗಾಳದಲ್ಲಿ ಇಂದಿನಿಂದ ಸೆ. 21ರವರೆಗೆ ಭಾರೀ ಮಳೆಯಾಗಲಿದೆ. ವಿದರ್ಭ, ಛತ್ತೀಸ್‌ಗಢ ಮತ್ತು ಮಧ್ಯಪ್ರದೇಶದಲ್ಲಿ ಸೆ. 21 ಮತ್ತು 22ರಂದು ವ್ಯಾಪಕ ಮಳೆಯಾಗುತ್ತದೆ ಎಂದು IMD ಹೇಳಿದೆ.

ಮುಂದಿನ 3 ದಿನಗಳ ಕಾಲ ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ, ಉತ್ತರಾಖಂಡ, ಉತ್ತರ ಪ್ರದೇಶ, ಬಿಹಾರ, ಪಶ್ಚಿಮ ಬಂಗಾಳ, ಒಡಿಶಾ, ಜಾರ್ಖಂಡ್, ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢದಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗೇ, ಅಸ್ಸಾಂ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ ಮತ್ತು ಮೇಘಾಲಯ ಸೇರಿದಂತೆ ಹಲವು ಈಶಾನ್ಯ ರಾಜ್ಯಗಳಲ್ಲಿ ಕೂಡ ಮಳೆಯಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: Rain Updates: ಒಡಿಶಾದಲ್ಲಿ ಇಂದಿನಿಂದ 1 ವಾರ ಭಾರೀ ಮಳೆ; ಮಹಾರಾಷ್ಟ್ರದಲ್ಲಿ ರೈಲ್ವೆ ಹಳಿಗಳು ಮುಳುಗಡೆ

ಇಂದಿನಿಂದ ಒಡಿಶಾದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ನಾಳೆ (ಸೆ. 20ರಂದು) ಛತ್ತೀಸ್‌ಗಢ, ಜಾರ್ಖಂಡ್, ಗಂಗಾನದಿ ಪಶ್ಚಿಮ ಬಂಗಾಳ, ಅಸ್ಸಾಂ, ಮೇಘಾಲಯ, ಕರಾವಳಿ ಆಂಧ್ರಪ್ರದೇಶ, ಯಾನಂ ಮತ್ತು ತೆಲಂಗಾಣದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ಉತ್ತರಾಖಂಡ, ಪೂರ್ವ ಉತ್ತರ ಪ್ರದೇಶ, ಮಧ್ಯಪ್ರದೇಶ, ವಿದರ್ಭ, ಛತ್ತೀಸ್‌ಗಢ, ಜಾರ್ಖಂಡ್, ಪಶ್ಚಿಮ ಬಂಗಾಳ, ಮಹಾರಾಷ್ಟ್ರ, ಮರಾಠವಾಡ, ಕರಾವಳಿ ಆಂಧ್ರ ಪ್ರದೇಶ, ಯಾನಂ, ತೆಲಂಗಾಣ, ಕೇರಳ ಮತ್ತು ಮಾಹೆಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಪೂರ್ವ ರಾಜ್ಯಗಳು ಇಡೀ ಅಕ್ಟೋಬರ್‌ನಲ್ಲಿ ಮುಂದುವರಿಯುವ ಹಬ್ಬಗಳ ಸಾಲಿಗೆ ಸಜ್ಜಾಗುತ್ತಿರುವಾಗ ಮುನ್ಸೂಚನೆ ಬಂದಿದೆ. ಒಡಿಶಾ, ಕರಾವಳಿ ಆಂಧ್ರಪ್ರದೇಶ ಮತ್ತು ಛತ್ತೀಸ್‌ಗಢದಲ್ಲಿ ಸೆಪ್ಟೆಂಬರ್ 21ರವರೆಗೆ ವಿದರ್ಭ ಮತ್ತು ಮಧ್ಯಪ್ರದೇಶದಲ್ಲಿ ಸೆಪ್ಟೆಂಬರ್ 20ರಿಂದ 22ರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಸೆಪ್ಟೆಂಬರ್ 22 ಮತ್ತು 23ರಂದು ಪಶ್ಚಿಮ ಮಧ್ಯಪ್ರದೇಶ, ಗುಜರಾತ್ ಪ್ರದೇಶ, ಮರಾಠವಾಡ, ಮಹಾರಾಷ್ಟ್ರದ ಘಾಟ್ ಪ್ರದೇಶಗಳಲ್ಲಿ ಮಳೆಯಾಗಲಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?