ಜಮ್ಮು ಕಾಶ್ಮೀರ, ಹಿಮಾಚಲ ಪ್ರದೇಶದಲ್ಲಿ ಭಾರೀ ಪ್ರವಾಹ; 16 ಮಂದಿ ಸಾವು, 40ಕ್ಕೂ ಹೆಚ್ಚು ಜನ ನಾಪತ್ತೆ

| Updated By: ಸುಷ್ಮಾ ಚಕ್ರೆ

Updated on: Jul 28, 2021 | 8:50 PM

ಜಮ್ಮು ಮತ್ತು ಕಾಶ್ಮೀರದ ಕಿಶ್ತ್​ವರ್​ ಹಾಗೂ ಹಿಮಾಚಲ ಪ್ರದೇಶದ ಲಾಹೂಲ್ ಸ್ಪಿತಿಯಲ್ಲಿ ಮೇಘಸ್ಫೋಟ ಸಂಭವಿಸಿದ್ದು, ಸಾವಿನ ಸಂಖ್ಯೆ 16ಕ್ಕೆ ಏರಿಕೆಯಾಗಿದೆ.

ಜಮ್ಮು ಕಾಶ್ಮೀರ, ಹಿಮಾಚಲ ಪ್ರದೇಶದಲ್ಲಿ ಭಾರೀ ಪ್ರವಾಹ; 16 ಮಂದಿ ಸಾವು, 40ಕ್ಕೂ ಹೆಚ್ಚು ಜನ ನಾಪತ್ತೆ
ಜಮ್ಮು ಕಾಶ್ಮೀರದಲ್ಲಿ ಜನರ ರಕ್ಷಣಾ ಕಾರ್ಯಾಚರಣೆ
Follow us on

ಶ್ರೀನಗರ: ಹಿಮಾಚಲ ಪ್ರದೇಶ ಮತ್ತು ಜಮ್ಮು ಕಾಶ್ಮೀರದ ಭಾಗಗಳಲ್ಲಿ ವಿಪರೀತ ಮಳೆಯಾಗುತ್ತಿದೆ. ಈ ದುರಂತದಲ್ಲಿ 16 ಜನರು ಸಾವನ್ನಪ್ಪಿದ್ದು, 40ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಕಿಶ್ತ್​ವರ್​ ಹಾಗೂ ಹಿಮಾಚಲ ಪ್ರದೇಶದ ಲಾಹೂಲ್ ಸ್ಪಿತಿಯಲ್ಲಿ ಮೇಘಸ್ಫೋಟ ಸಂಭವಿಸಿದ್ದು, ಸಾವಿನ ಸಂಖ್ಯೆ 16ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಿಂದ ಜಮ್ಮು ಕಾಶ್ಮೀರ ಹಾಗೂ ಹಿಮಾಚಲ ಪ್ರದೇಶದಲ್ಲಿ ಮಳೆ ಹೆಚ್ಚಾಗಿದೆ.

ಜಮ್ಮು ಮತ್ತು ಕಾಶ್ಮೀರದ ಕಿಶ್ತ್​ವರ್ ಜಿಲ್ಲೆಯ ಡಚ್ಚನ್ ಟೆಹ್ಸೀಲ್ ಪ್ರಾಂತ್ಯದ ಹೊಂಜಾರ್ ಎಂಬ ಕುಗ್ರಾಮದಲ್ಲಿ ಇಂದು ಮುಂಜಾನೆ ಮೇಘಸ್ಪೋಟ ಸಂಭವಿಸಿದ್ದು, ಪ್ರವಾಹದಲ್ಲಿ ಸಾಕಷ್ಟು ಮನೆಗಳು ಕೊಚ್ಚಿಹೋಗಿವೆ. ವಿಚಾರ ತಿಳಿಯುತ್ತಿದ್ದಂತೆಯೇ ರಾಷ್ಟ್ರೀಯ ವಿಪತ್ತು ನಿರ್ವಹಣಾ ದಳ (NDRF) ಸಿಬ್ಬಂದಿಗಳು ಸ್ಥಳಕ್ಕೆ ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆ ಕೈಗೊಂಡಿದ್ದಾರೆ.

ಭೂಕುಸಿತ ಮತ್ತು ಪ್ರವಾಹದಿಂದ ಡೆಬ್ರೀಸ್​ನಲ್ಲಿ 7 ಶವಗಳು ಪತ್ತೆಯಾಗಿದ್ದು, ಇನ್ನೂ 12 ಮಂದಿ ನಾಪತ್ತೆಯಾಗಿದ್ದಾರೆ. ಹೊಂಜಾರ್ ಪ್ರದೇಶದ 100 ಗ್ರಾಮಗಳ ಜನರನ್ನು ಸುರಕ್ಷಿತ ಸ್ಥಳಗಳಿಗೆ ಶಿಫ್ಟ್ ಮಾಡಲಾಗಿದೆ. ಅಮರನಾಥ ದೇವಾಲಯದ ಬಳಿಯೂ ಭೂಕುಸಿತ ಸಂಭವಿಸಿದೆ.

ಕಳೆದೊಂದು ವಾರದಿಂದ ಜಮ್ಮುವಿನ ಬಹುತೇಕ ಭಾಗಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಮುಂದಿನ ಒಂದು ವಾರಗಳ ಇದೇ ಪರಿಸ್ಥಿತಿ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಪ್ರಮುಖವಾಗಿ ನದಿ ಪಾತ್ರದ ಗ್ರಾಮಗಳು ಮತ್ತು ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನರು ಅಪಾಯದಲ್ಲಿದ್ದು ಅವರನ್ನು ತುರ್ತಾಗಿ ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಇದನ್ನೂ ಓದಿ: Maharashtra Rains: ಮಹಾರಾಷ್ಟ್ರದಲ್ಲಿ ಮಳೆ, ಪ್ರವಾಹದ ಅಬ್ಬರ; ಸಾವಿನ ಸಂಖ್ಯೆ 209ಕ್ಕೆ ಏರಿಕೆ, 8 ಜನರು ನಾಪತ್ತೆ

Delhi Rains: ದೆಹಲಿಯಲ್ಲಿ ಹೆಚ್ಚಿದ ಮಳೆಯ ಆರ್ಭಟ; ನೀರು ತುಂಬಿದ ಬಸ್​ನಲ್ಲೇ ಜನರ ಸಂಚಾರ

(Rain Updates 16 Dead over 40 People Missing after Floods and Cloudburst in Jammu Kashmir and Himachal Pradesh)