Rain Updates: ದೆಹಲಿ, ಪಂಜಾಬ್, ಹರಿಯಾಣದಲ್ಲಿ ಫೆಬ್ರವರಿ ಮೊದಲ ವಾರದಲ್ಲಿ ಭಾರೀ ಮಳೆ ಸಾಧ್ಯತೆ

Weather Today: ಪಂಜಾಬ್, ಹರಿಯಾಣ ಮತ್ತು ದೆಹಲಿಯ ಭಾಗಗಳಲ್ಲಿ ನಿರ್ದಿಷ್ಟವಾಗಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಗೆ ಸಾಕ್ಷಿಯಾಗಬಹುದು ಎಂದು ನಿರೀಕ್ಷಿಸಲಾಗಿದೆ.

Rain Updates: ದೆಹಲಿ, ಪಂಜಾಬ್, ಹರಿಯಾಣದಲ್ಲಿ ಫೆಬ್ರವರಿ ಮೊದಲ ವಾರದಲ್ಲಿ ಭಾರೀ ಮಳೆ ಸಾಧ್ಯತೆ
ಮಳೆ
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Feb 01, 2022 | 6:53 PM

ನವದೆಹಲಿ: ಫೆಬ್ರವರಿಯಲ್ಲಿ ಭಾರತದ ಬಹುತೇಕ ಭಾಗಗಳಲ್ಲಿ ಮಳೆ ಹಾಗೂ ಶೀತ ಗಾಳಿ ಉಂಟಾಗುವ ಸಾಧ್ಯತೆಯಿದೆ ಎಂದು ಭಾರತ ಹವಾಮಾನ ಇಲಾಖೆ (IMD) ಹೇಳಿದೆ. ಪಂಜಾಬ್ ಮತ್ತು ಹರಿಯಾಣದ ಹೆಚ್ಚಿನ ಭಾಗಗಳನ್ನು ಹೊರತುಪಡಿಸಿ ಉತ್ತರ ಭಾರತದ ಹೆಚ್ಚಿನ ಭಾಗಗಳಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗುವ (Rain Updatest) ಮುನ್ಸೂಚನೆಯನ್ನು ನೀಡಲಾಗಿದೆ ಎಂದು ಹವಾಮಾನ ಸಂಸ್ಥೆ (Weather Department) ಹೇಳಿದೆ. ಜಮ್ಮು ಮತ್ತು ಕಾಶ್ಮೀರ, ಲಡಾಖ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಂಜಾಬ್, ಚಂಡೀಗಢ, ದೆಹಲಿ, ಹರಿಯಾಣ ಮತ್ತು ಉತ್ತರ ಭಾರತದ ಪ್ರದೇಶಗಳಲ್ಲಿ ಸರಾಸರಿಗಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ.

ಪಂಜಾಬ್, ಹರಿಯಾಣ ಮತ್ತು ದೆಹಲಿಯ ಭಾಗಗಳಲ್ಲಿ ನಿರ್ದಿಷ್ಟವಾಗಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಗೆ ಸಾಕ್ಷಿಯಾಗಬಹುದು ಎಂದು ನಿರೀಕ್ಷಿಸಲಾಗಿದೆ. ಫೆಬ್ರವರಿ 2ರಿಂದ 4ರವರೆಗೆ ಪಶ್ಚಿಮ ಹಿಮಾಲಯ ಪ್ರದೇಶದಾದ್ಯಂತ ವ್ಯಾಪಕವಾದ ಲಘು, ಮಧ್ಯಮ ಮಳೆ ಮತ್ತು ಹಿಮಪಾತ ಉಂಟಾಗುವ ಮುನ್ಸೂಚನೆಯನ್ನು ನೀಡಲಾಗಿದೆ. ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ವಿಶೇಷವಾಗಿ ಫೆಬ್ರವರಿ 3ರಂದು ಭಾರೀ ಮಳೆ ಅಥವಾ ಹಿಮಪಾತವಾಗುವ ಸಾಧ್ಯತೆಯಿದೆ.

ಪಂಜಾಬ್, ಹರಿಯಾಣ, ಚಂಡೀಗಢ, ದೆಹಲಿ ಮತ್ತು ಉತ್ತರ ಪ್ರದೇಶಗಳಲ್ಲಿ ಫೆಬ್ರವರಿ 2ರಿಂದ 4ರ ನಡುವೆ ಸಾಕಷ್ಟು ವ್ಯಾಪಕವಾದ ಮಳೆಯಾಗಲಿದೆ. ಫೆಬ್ರವರಿ 6ರಿಂದ ಪಶ್ಚಿಮ ಹಿಮಾಲಯ ಪ್ರದೇಶದಲ್ಲಿ ಮಳೆಯಾಗಲಿದೆ. ಫೆಬ್ರವರಿ 3ರಿಂದ ಫೆಬ್ರವರಿ 5ರವರೆಗೆ 3 ದಿನಗಳ ಕಾಲ ಮಳೆ ಮತ್ತು ಮೋಡ ಕವಿದ ವಾತಾವರಣವಿರಲಿದೆ. ಪಂಜಾಬ್ ಮತ್ತು ಹರಿಯಾಣದಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ ಎಂದು IMD ಹೇಳಿದೆ.

ಹೊಸ ವರ್ಷದ ಆರಂಭದಲ್ಲಿ ಉತ್ತರ ಭಾರತದ ಬೇರೆಲ್ಲ ವಲಯಗಳಿಗೆ ಹೋಲಿಸಿದರೆ ಜನವರಿ 2022 ಸಾಕಷ್ಟು ತೇವವಾಗಿತ್ತು. ಜನವರಿ 1 ಮತ್ತು ಫೆಬ್ರವರಿ 1ರ ನಡುವೆ ಇಡೀ ಪ್ರದೇಶವು ಒಟ್ಟಾರೆಯಾಗಿ 78.5 ಮಿಮೀ ಮಳೆಯನ್ನು ದಾಖಲಿಸಿದೆ. ಈ ಅವಧಿಗೆ ಪ್ರದೇಶದ ದೀರ್ಘಾವಧಿಯ ಸರಾಸರಿಗಿಂತ ಶೇ. 127ರಷ್ಟು ಹೆಚ್ಚಾಗಿದೆ. ಚಂಡೀಗಢ (207.7 ಮಿಮೀ), ಹಿಮಾಚಲ ಪ್ರದೇಶ (173.2 ಮಿಮೀ), ಜಮ್ಮು ಮತ್ತು ಕಾಶ್ಮೀರ (169 ಮಿಮೀ), ಉತ್ತರಾಖಂಡ (108.4 ಮಿಮೀ), ಪಂಜಾಬ್ (104.6 ಮಿಮೀ), ದೆಹಲಿ (88.6 ಮಿಮೀ), ಹರಿಯಾಣ (69.4 ಮಿಮೀ), ಉತ್ತರ ಪ್ರದೇಶ (40.2 ಮಿಮೀ). ) ಮತ್ತು ರಾಜಸ್ಥಾನ (24.4 ಮಿಮೀ) ದಾಖಲಿಸಿದೆ.

ಇದನ್ನೂ ಓದಿ: Karnataka Weather Today: ಕರ್ನಾಟಕದಲ್ಲಿ ಇಂದು ತುಂತುರು ಮಳೆ; ತಮಿಳುನಾಡು, ಕೇರಳದಲ್ಲೂ ಭಾರೀ ಮಳೆ

Karnataka Weather Today: ಬೆಂಗಳೂರು, ಕೋಲಾರ ಸುತ್ತಮುತ್ತ ಇನ್ನೆರಡು ದಿನ ಮಳೆ; ನೆರೆಯ ರಾಜ್ಯಗಳಲ್ಲೂ ವರುಣನ ಅಬ್ಬರ

Published On - 6:53 pm, Tue, 1 February 22

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್