AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rain Updates: ಅಸ್ಸಾಂನಲ್ಲಿ ಭಾರೀ ಮಳೆಯಿಂದ 8 ಜನ ಸಾವು; ದಕ್ಷಿಣ ಭಾರತದಲ್ಲಿ ರೆಡ್ ಅಲರ್ಟ್​ ಘೋಷಣೆ

Weather Today: ಅಸ್ಸಾಂ ರಾಜ್ಯದ 26 ಜಿಲ್ಲೆಗಳಲ್ಲಿ ಭಾರೀ ಮಳೆಯಿಂದ ಜನಜೀವನ ಸಂಕಷ್ಟಕ್ಕೆ ಸಿಲುಕಿದೆ. ಅಸ್ಸಾಂ ರಾಜ್ಯವೊಂದರಲ್ಲೇ ಮಳೆಯಿಂದ 8 ಮಂದಿ ಸಾವನ್ನಪ್ಪಿದ್ದಾರೆ.

Rain Updates: ಅಸ್ಸಾಂನಲ್ಲಿ ಭಾರೀ ಮಳೆಯಿಂದ 8 ಜನ ಸಾವು; ದಕ್ಷಿಣ ಭಾರತದಲ್ಲಿ ರೆಡ್ ಅಲರ್ಟ್​ ಘೋಷಣೆ
ಮಳೆImage Credit source: Times of India
S Chandramohan
| Updated By: ಸುಷ್ಮಾ ಚಕ್ರೆ|

Updated on: May 18, 2022 | 6:35 PM

Share

ನವದೆಹಲಿ: ಭಾರತಕ್ಕೆ ಇನ್ನೂ ಮುಂಗಾರು ಮಳೆ (Monsoon) ಪ್ರವೇಶವಾಗಿಲ್ಲ. ಆದರೆ, ಮುಂಗಾರು ಮಾರುತಗಳ ಪ್ರವೇಶಕ್ಕೂ ಮುನ್ನ ದೇಶದ ಕೆಲವು ಭಾಗದಲ್ಲಿ ಭಾರೀ ಮಳೆಯಿಂದ ಸಾಕಷ್ಟು ಅನಾಹುತ ಸೃಷ್ಟಿಯಾಗಿದೆ. ಈಶಾನ್ಯದ ಅಸ್ಸಾಂ ರಾಜ್ಯದಲ್ಲಿ ಮಳೆ ಅನಾಹುತಗಳಿಂದ 8 ಮಂದಿ ಸಾವನ್ನಪ್ಪಿದ್ದಾರೆ. ಇನ್ನೂ ಎರಡು ದಿನಗಳ ಕಾಲ ಅಸ್ಸಾಂ ಹಾಗೂ ಕೇರಳದಲ್ಲಿ ವ್ಯಾಪಕ ಮಳೆ ಸುರಿಯುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ (IMD) ನೀಡಿದೆ. ಈ ವರ್ಷ ಮೇ ತಿಂಗಳ ಕೊನೆಯ ವಾರ ಮುಂಗಾರು ಮಾರುತಗಳು ಕೇರಳವನ್ನು ಪ್ರವೇಶಿಸುತ್ತವೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮುಂಗಾರು ಮಳೆ ಈಗಾಗಲೇ ಅಂಡಮಾನ್ ನಿಕೋಬಾರ್ ದ್ವೀಪಗಳಲ್ಲಿ ಆವರಿಸಿದೆ. ಆದರೆ, ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಬಿರುಗಾಳಿಯಿಂದ ದೇಶದ ಕೆಲ ಭಾಗಗಳಲ್ಲಿ ಹೆಚ್ಚು ಮಳೆಯಾಗುತ್ತಿದೆ.

ದಿಢೀರ್ ಪ್ರವಾಹ, ಭೂಕುಸಿತದಿಂದ ಈಶಾನ್ಯ ರಾಜ್ಯಗಳಲ್ಲಿ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈಶಾನ್ಯದ ಅಸ್ಸಾಂ ರಾಜ್ಯದ 26 ಜಿಲ್ಲೆಗಳಲ್ಲಿ ಭಾರೀ ಮಳೆಯಿಂದ ಜನಜೀವನ ಸಂಕಷ್ಟಕ್ಕೆ ಸಿಲುಕಿದೆ. ಅಸ್ಸಾಂ ರಾಜ್ಯವೊಂದರಲ್ಲೇ ಮಳೆಯಿಂದ 8 ಮಂದಿ ಸಾವನ್ನಪ್ಪಿದ್ದಾರೆ. ಅಸ್ಸಾಂನ 5 ಲಕ್ಷಕ್ಕೂ ಹೆಚ್ಚು ಜನರು ತಮ್ಮ ಮನೆಗಳನ್ನು ತೊರೆದು ಸುರಕ್ಷಿತ ಸ್ಥಳಗಳಿಗೆ ವಲಸೆ ಹೋಗಿದ್ದಾರೆ, ತಾತ್ಕಾಲಿಕ ಶಿಬಿರಗಳಲ್ಲಿ ಜನರು ನೆಲೆಸಿದ್ದಾರೆ. ಅಸ್ಸಾಂನಲ್ಲಿ ಇಂದು ಕೂಡ ಭಾರೀ ಮಳೆ ಮುಂದುವರಿದಿದೆ. ಮುಂದಿನ 5 ದಿನಗಳವರೆಗೂ ಅಸ್ಸಾಂನಲ್ಲಿ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬ್ರಹ್ಮಪುತ್ರ ನದಿಯಲ್ಲಿ ನೀರಿನ ಮಟ್ಟ ಹೆಚ್ಚಾಗುವ ಸಾಧ್ಯತೆ ಇದೆ. ಅಸ್ಸಾಂನಲ್ಲಿ ಭಾರೀ ಮಳೆ, ದಿಢೀರ್ ಪ್ರವಾಹದ ಕಾರಣದಿಂದ 11ನೇ ತರಗತಿಯ ಪರೀಕ್ಷೆಗಳನ್ನು ಮುಂದೂಡಲಾಗಿದೆ.

ಇದನ್ನೂ ಓದಿ: Bengaluru Rain: ಬೆಂಗಳೂರಲ್ಲಿಂದು 12-14 ಸೆ.ಮೀ. ಮಳೆಯಾಗುವ ಸಾಧ್ಯತೆ: ಟಿವಿ9ಗೆ ಮಾಹಿತಿ ನೀಡಿದ ಹವಾಮಾನ ಇಲಾಖೆ ತಜ್ಞ ಪ್ರಸಾದ್

ಇದನ್ನೂ ಓದಿ
Image
Bengaluru Rain: ಬೆಂಗಳೂರಲ್ಲಿಂದು 12-14 ಸೆ.ಮೀ. ಮಳೆಯಾಗುವ ಸಾಧ್ಯತೆ: ಟಿವಿ9ಗೆ ಮಾಹಿತಿ ನೀಡಿದ ಹವಾಮಾನ ಇಲಾಖೆ ತಜ್ಞ ಪ್ರಸಾದ್
Image
Karnataka Rain: ಭಾರೀ ಮಳೆಯಿಂದ ಕರಾವಳಿ, ಮಲೆನಾಡಿನಲ್ಲಿ ರೆಡ್ ಅಲರ್ಟ್ ​ಘೋಷಣೆ; ಇನ್ನೂ 3 ದಿನ ವರುಣನ ಆರ್ಭಟ
Image
Bengaluru Rain: ಬೆಂಗಳೂರಿನಲ್ಲಿ ರಾತ್ರಿಯಿಡೀ ಮಳೆಯ ಆರ್ಭಟ; ಇಂದು ಆರೆಂಜ್ ಅಲರ್ಟ್​ ಘೋಷಣೆ

ಅಸ್ಸಾಂನ ಇಟಾನಗರ-ಗೋಪುರ ರಸ್ತೆಯಲ್ಲಿ ಮಣ್ಣು ಕುಸಿದು ರಸ್ತೆ ಸಂಚಾರ ಬ್ಲಾಕ್ ಆಗಿದೆ. ಬಾರಕ್ ವ್ಯಾಲಿಗೆ ರೈಲು ಮತ್ತು ರಸ್ತೆ ಸಂಪರ್ಕ ಕಡಿತವಾಗಿದೆ. ಅಸ್ಸಾಂನ ಕಚರ್ ಜಿಲ್ಲೆಯಲ್ಲಿ 96 ಸಾವಿರ ಜನರು ತೊಂದರೆಗೊಳಗಾಗಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ, ಅಸ್ಸಾಂ ಸಿಎಂ ಹಿಮಂತ್ ಬಿಸ್ವಾ ಶರ್ಮಾ ಜೊತೆಗೆ ಮಾತನಾಡಿದ್ದು, ಕೇಂದ್ರದಿಂದ ಎಲ್ಲ ಅಗತ್ಯ ನೆರವು ನೀಡುವುದಾಗಿ ಹೇಳಿದ್ದಾರೆ. ಐಎಎಫ್ ಹೆಲಿಕಾಪ್ಟರ್ ಬಳಸಿ ಪ್ರವಾಹದಲ್ಲಿ ಸಿಲುಕಿದ್ದ 119 ರೈಲ್ವೇ ಪ್ರಯಾಣಿಕರನ್ನು ಡಿಟಕೋಚರ ರೈಲ್ವೇ ನಿಲ್ದಾಣದಿಂದ ರಕ್ಷಿಸಿ ಸುರಕ್ಷಿತ ಸ್ಥಳಕ್ಕೆ ಕರೆ ತರಲಾಗಿದೆ. ನ್ಯೂ ಹಾಫ್ಲಲಾಂಗ್ ರೈಲ್ವೇ ನಿಲ್ದಾಣ ಸಂಪೂರ್ಣ ಪ್ರವಾಹದ ನೀರಿನಲ್ಲಿ ಮುಳುಗಿ ಹೋಗಿದೆ. ರೈಲ್ವೇ ಬೋಗಿಗಳು ಮುಳುಗಿ ಹೋಗಿವೆ. ಈ ರೈಲ್ವೇ ನಿಲ್ದಾಣದಲ್ಲಿದ್ದ ಪ್ರಯಾಣಿಕರು, ರೈಲ್ವೇ ಸಿಬ್ಬಂದಿಯ ಕುಟುಂಬವನ್ನು ರಕ್ಷಿಸಲಾಗಿದೆ. ಇಂದಿನಿಂದ ಅಸ್ಸಾಂನಲ್ಲಿ ವಾಯುಪಡೆಯ ಹೆಲಿಕಾಪ್ಟರ್ ಗಳು ಆಹಾರ ಸಾಮಗ್ರಿಗಳನ್ನು ಏರ್ ಡ್ರಾಪ್ ಮಾಡುತ್ತಿವೆ.

ಈಶಾನ್ಯದ ಅರುಣಾಚಲ ಪ್ರದೇಶ, ಮೇಘಾಲಯ ರಾಜ್ಯಗಳಲ್ಲಿ ಮಳೆಯಿಂದಾಗಿ ಭೂ ಕುಸಿತ ಸಂಭವಿಸಿದೆ. ಇದರಿಂದ ಅನೇಕ ಕಡೆಗಳಲ್ಲಿ ವಾಹನ ಸಂಚಾರ ಅಸ್ತವ್ಯಸ್ತವಾಗಿದೆ. ಹವಾಮಾನ ಇಲಾಖೆಯು ಇಂದು ಕೇರಳ ಹಾಗೂ ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡು ಪ್ರದೇಶಗಳಿಗೆ ರೆಡ್ ಅಲರ್ಟ್ ನೀಡಿದೆ. ಈಶಾನ್ಯದ ರಾಜ್ಯಗಳಿಗೂ ಇಂದು ರೆಡ್ ಅಲರ್ಟ್ ನೀಡಿದೆ. ಹೀಗಾಗಿ ಇಂದು ರಾತ್ರಿ ಕೇರಳ, ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ಭಾರೀ ಮಳೆಯಾಗಲಿದೆ. ತಮಿಳುನಾಡಿಗೆ ಇಂದು ಆರೆಂಜ್ ಅಲರ್ಟ್ ನೀಡಲಾಗಿದೆ. ನಾಳೆಯೂ ಕೇರಳ ಹಾಗೂ ಕರ್ನಾಟಕದ ದಕ್ಷಿಣ ಒಳನಾಡು, ಕರ್ನಾಟಕ ಕರಾವಳಿ ಪ್ರದೇಶಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ನಾಡಿದ್ದು ಕರ್ನಾಟಕ, ಕೇರಳದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಇದನ್ನೂ ಓದಿ: Karnataka Rain: ಭಾರೀ ಮಳೆಯಿಂದ ಕರಾವಳಿ, ಮಲೆನಾಡಿನಲ್ಲಿ ರೆಡ್ ಅಲರ್ಟ್ ​ಘೋಷಣೆ; ಇನ್ನೂ 3 ದಿನ ವರುಣನ ಆರ್ಭಟ

ಕೇರಳದ ಕೋಯಿಕ್ಕೋಡ್ ಸೇರಿದಂತೆ ಕೆಲ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಕೊಟ್ಟಾಯಂ ಜಿಲ್ಲೆಯ ಅನೇಕ ಪ್ರದೇಶಗಳು ಮಳೆ ನೀರಿನಿಂದ ಜಲಾವೃತವಾಗಿವೆ. ಒಟ್ಟಿನಲ್ಲಿ ಇನ್ನೂ ಕೆಲ ದಿನಗಳ ಕಾಲ ಅಸ್ಸಾಂ ಸೇರಿದಂತೆ ಈಶಾನ್ಯ ರಾಜ್ಯಗಳು, ಕೇರಳ, ತಮಿಳುನಾಡು, ಕರ್ನಾಟಕದ ದಕ್ಷಿಣ ಒಳನಾಡು ಪ್ರದೇಶಗಳಿಗೆ ಬಾರಿ ಮಳೆಯಿಂದ ಸಮಸ್ಯೆ ಎದುರಾಗುವ ಸಾಧ್ಯತೆ ಇದೆ.

ಇನ್ನಷ್ಟು ಮಳೆಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು