Rain Updates: ದಕ್ಷಿಣ ಭಾರತ ಸೇರಿ ಈ ರಾಜ್ಯಗಳಲ್ಲಿ 5 ದಿನ ಭಾರೀ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ

Weather Today: ತಮಿಳುನಾಡು, ಕರಾವಳಿ ಆಂಧ್ರಪ್ರದೇಶ, ತೆಲಂಗಾಣ, ರಾಯಲಸೀಮಾ ಮತ್ತು ಕರ್ನಾಟಕದ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಮಳೆ ನಿರೀಕ್ಷಿಸಲಾಗಿದೆ.

Rain Updates: ದಕ್ಷಿಣ ಭಾರತ ಸೇರಿ ಈ ರಾಜ್ಯಗಳಲ್ಲಿ 5 ದಿನ ಭಾರೀ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ
ಮಳೆ
Follow us
| Updated By: ಸುಷ್ಮಾ ಚಕ್ರೆ

Updated on:Apr 15, 2022 | 6:44 PM

ನವದೆಹಲಿ: ದಕ್ಷಿಣ ಭಾರತದ ರಾಜ್ಯಗಳಾದ ಕರ್ನಾಟಕ, ಕೇರಳ, ತಮಿಳುನಾಡು, ಮಹಾರಾಷ್ಟ್ರ, ಆಂಧ್ರಪ್ರದೇಶದಲ್ಲಿ ಮಳೆಯಾಗುತ್ತಿದೆ. ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ, ಆಗ್ನೇಯ ಅರೇಬಿಯನ್ ಸಮುದ್ರ ಮತ್ತು ಪಕ್ಕದ ಲಕ್ಷದ್ವೀಪ ಪ್ರದೇಶದಲ್ಲಿ ಚಂಡಮಾರುತದ ಪರಿಚಲನೆಯಿಂದಾಗಿ ಭಾರತದಾದ್ಯಂತ ಮುಂದಿನ ಐದು ದಿನಗಳವರೆಗೆ ಮಳೆಯ (Heavy Rainfall) ಅಬ್ಬರವಿರಲಿದೆ. ಕೇರಳ ಮತ್ತು ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ 5 ದಿನಗಳವರೆಗೆ ಚದುರಿದ ಮಳೆಯಾಗಲಿದೆ.

ತಮಿಳುನಾಡು, ಕರಾವಳಿ ಆಂಧ್ರಪ್ರದೇಶ, ತೆಲಂಗಾಣ, ರಾಯಲಸೀಮಾ ಮತ್ತು ಕರ್ನಾಟಕದ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಮಳೆ ನಿರೀಕ್ಷಿಸಲಾಗಿದೆ. ಏಪ್ರಿಲ್ 17ರವರೆಗೆ ಕೇರಳವು ಪ್ರತ್ಯೇಕ ಭಾರೀ ಮಳೆಯನ್ನು ಅನುಭವಿಸಬಹುದು. ವಾಯುವ್ಯ ಭಾರತ ಮತ್ತು ಮಧ್ಯಪ್ರದೇಶದಲ್ಲಿ ಏಪ್ರಿಲ್ 17ರವರೆಗೆ ತೀವ್ರವಾದ ಶಾಖದ ಅಲೆಯು ಮುಂದುವರಿಯುತ್ತದೆ ಎಂದು ಭಾರತೀಯ ಮಾಪನಶಾಸ್ತ್ರ ಇಲಾಖೆ (ಐಎಂಡಿ) ಹೇಳಿದೆ. ತಮಿಳುನಾಡು-ಪುದುಚೇರಿ-ಕಾರೈಕಲ್, ಕೇರಳ-ಮಾಹೆ, ಅಸ್ಸಾಂ-ಮೇಘಾಲಯ ಮತ್ತು ಅರುಣಾಚಲ ಪ್ರದೇಶದಲ್ಲಿ ಏಪ್ರಿಲ್ 17ರವರೆಗೆ ವ್ಯಾಪಕ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮುನ್ಸೂಚನೆಯ ಪ್ರಕಾರ, ಕೇರಳ, ತಮಿಳುನಾಡು, ಜಮ್ಮು ಕಾಶ್ಮೀರ, ಪಂಜಾಬ್, ಹರಿಯಾಣ ಮತ್ತು ಹಿಮಾಚಲ ಪ್ರದೇಶದ ಕೆಲವು ಭಾಗಗಳಲ್ಲಿ ಮಳೆ ಹೆಚ್ಚಾಗಲಿದೆ. ಮುಂದಿನ 5 ದಿನಗಳಲ್ಲಿ ಅರುಣಾಚಲ ಪ್ರದೇಶ, ಅಸ್ಸಾಂ-ಮೇಘಾಲಯ ಮತ್ತು ನಾಗಾಲ್ಯಾಂಡ್-ಮಣಿಪುರ-ಮಿಜೋರಾಂ-ತ್ರಿಪುರಾದಲ್ಲಿ ಗುಡುಗು, ಮಿಂಚು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು IMD ತಿಳಿಸಿದೆ.

ಇನ್ನೆರಡು ದಿನ ಅರುಣಾಚಲ ಪ್ರದೇಶ ಮತ್ತು ಅಸ್ಸಾಂ-ಮೇಘಾಲಯದಲ್ಲಿ ಮತ್ತು ಏಪ್ರಿಲ್ 17ರಂದು ನಾಗಾಲ್ಯಾಂಡ್-ಮಣಿಪುರ-ಮಿಜೋರಾಂ-ತ್ರಿಪುರಾದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ 5 ದಿನಗಳಲ್ಲಿ ಕೇರಳ-ಮಾಹೆ, ತಮಿಳುನಾಡು ಮತ್ತು ಕರ್ನಾಟಕದಲ್ಲಿ ಗುಡುಗು, ಮಿಂಚು ಸಹಿತ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮುಂದಿನ 5 ದಿನಗಳಲ್ಲಿ ಆಂಧ್ರ ಪ್ರದೇಶ ಮತ್ತು ತೆಲಂಗಾಣದಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ. ಏಪ್ರಿಲ್ 17ರಂದು ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ.

ಏ. 19ರಂದು ಪಂಜಾಬ್, ಹರಿಯಾಣ, ಚಂಡೀಗಢ, ದೆಹಲಿ ಮತ್ತು ರಾಜಸ್ಥಾನದಲ್ಲಿ ಬಿಸಿಗಾಳಿ ಉಂಟಾಗಲಿದೆ. ಏ. 18ರವರೆಗೆ ಹಿಮಾಚಲ ಪ್ರದೇಶ, ಜಮ್ಮು ಕಾಶ್ಮೀರ, ಬಿಹಾರ, ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶದಲ್ಲಿ ಮಳೆಯಾಗಲಿದೆ. ಏಪ್ರಿಲ್ 17-19ರ ಅವಧಿಯಲ್ಲಿ ರಾಜಸ್ಥಾನ ಮತ್ತು ಏಪ್ರಿಲ್ 17 ಮತ್ತು 18ರಂದು ಪಂಜಾಬ್, ಹರಿಯಾಣ, ಚಂಡೀಗಢ, ದೆಹಲಿಗಳಲ್ಲಿ ತೀವ್ರ ಶಾಖ ಉಂಟಾಗಲಿದೆ.

ಕರ್ನಾಟಕದಲ್ಲೂ ಮಳೆಯ ಅಬ್ಬರ ಹೆಚ್ಚಾಗುತ್ತಿದ್ದು, ಹವಾಮಾನ ಇಲಾಖೆ ಬೆಂಗಳೂರಿಗೆ ಇನ್ನೂ ಮೂರು ದಿನಗಳ ಕಾಲ ‘ಭಾರೀ ಮಳೆ’ಯ ಮುನ್ಸೂಚನೆ ನೀಡಿದೆ. ಮಲೆನಾಡು, ಕರಾವಳಿ, ಕೊಡಗಿನಲ್ಲಿ ಕೂಡ ಮಳೆಯಾಗಲಿದೆ.

ಇದನ್ನೂ ಓದಿ: ರಾಜಧಾನಿ ಬೆಂಗಳೂರಿನಲ್ಲಿ ಬಿರು ಬೇಸಿಗೆಯಲ್ಲಿ ಮೂರನೆಯ ದಿನವೂ ಮುಂದುವರಿದ ಭರ್ಜರಿ ಮಳೆ

Bengaluru Rain: ರಾಜಧಾನಿ ಬೆಂಗಳೂರಿನಲ್ಲಿ ಇಂದು ಕೂಡ ವರುಣನ ಆರ್ಭಟ, ಹಲವೆಡೆ ಭಾರಿ ಮಳೆ

Published On - 6:42 pm, Fri, 15 April 22