Rain Updates: ಕರ್ನಾಟಕ ಸೇರಿ ದಕ್ಷಿಣ ಭಾರತದ ಈ ರಾಜ್ಯಗಳಲ್ಲಿ ಗುರುವಾರದವರೆಗೂ ವ್ಯಾಪಕ ಮಳೆ; ಹವಾಮಾನ ಇಲಾಖೆ ಅಲರ್ಟ್
Weather Today: ಮುಂದಿನ ಕೆಲವು ದಿನ ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್, ರಾಯಲಸೀಮಾ ಮತ್ತು ಆಂಧ್ರಪ್ರದೇಶದಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ.
ನವದೆಹಲಿ: ದಕ್ಷಿಣ ಭಾರತದ ಹಲವು ರಾಜ್ಯಗಳಲ್ಲಿ ಇಂದಿನಿಂದ ನವೆಂಬರ್ 10ರವರೆಗೆ ಭಾರೀ ಮಳೆಯಾಗಲಿದೆ (Heavy Rainfall) ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ಕಡಿಮೆ ಒತ್ತಡದ ಪ್ರದೇಶವು ರೂಪುಗೊಳ್ಳುವ ಸಾಧ್ಯತೆಯಿದೆ. ಇದು ನವೆಂಬರ್ 9ರಿಂದ 11 ರವರೆಗೆ ತಮಿಳುನಾಡು-ಪುದುಚೇರಿ ಕರಾವಳಿಯ ಕಡೆಗೆ ಚಲಿಸುವ ಸಾಧ್ಯತೆಯಿದೆ. ಕರಾವಳಿ ಕರ್ನಾಟಕ (Karnataka Rains) ಮತ್ತು ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಕೂಡ ಇಂದಿನಿಂದ ಮಳೆ ಹೆಚ್ಚಾಗಲಿದೆ.
ಮುಂದಿನ ಕೆಲವು ದಿನ ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್, ರಾಯಲಸೀಮಾ ಮತ್ತು ಆಂಧ್ರಪ್ರದೇಶದಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಪಂಜಾಬ್ ಮತ್ತು ಉತ್ತರ ಹರಿಯಾಣದಲ್ಲಿ ನವೆಂಬರ್ 9-10 ಮತ್ತು ಉತ್ತರ ರಾಜಸ್ಥಾನದಲ್ಲಿ ತುಂತುರು ಮಳೆಯಾಗುವ ಸಾಧ್ಯತೆಯಿದೆ. ನವೆಂಬರ್ 11 ರಿಂದ ತಮಿಳುನಾಡು, ಪುದುಚೇರಿ, ಕಾರೈಕಲ್, ಕೇರಳ, ಮಾಹೆ ಮತ್ತು ಆಂಧ್ರಪ್ರದೇಶದಲ್ಲಿ ಗುಡುಗು ಮತ್ತು ಮಿಂಚು ಸಹಿತ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಜಮ್ಮು, ಕಾಶ್ಮೀರ, ಲಡಾಖ್, ಗಿಲ್ಗಿಟ್-ಬಾಲ್ಟಿಸ್ತಾನ್, ಮುಜಫರಾಬಾದ್ ಮತ್ತು ಹಿಮಾಚಲ ಪ್ರದೇಶದಲ್ಲಿ ಇಂದು ಮತ್ತು ನವೆಂಬರ್ 9ರಿಂದ 10ರವರೆಗೆ ಸಾಧಾರಣ ಮಳೆ ಅಥವಾ ಹಿಮಪಾತ ಸಂಭವಿಸುವ ಸಾಧ್ಯತೆಯಿದೆ.
ಇದನ್ನೂ ಓದಿ: Karnataka Rain: ಕರ್ನಾಟಕದಲ್ಲಿ ಕೊಂಚ ತಗ್ಗಿದ ವರುಣನ ಅಬ್ಬರ; ಇನ್ನೆರಡು ದಿನ ಸಾಧಾರಣ ಮಳೆ ಸಾಧ್ಯತೆ
ನವೆಂಬರ್ 10ರವರೆಗೆ ಜಮ್ಮು, ಕಾಶ್ಮೀರ, ಲಡಾಖ್, ಗಿಲ್ಗಿಟ್ ಬಾಲ್ಟಿಸ್ತಾನ್ ಮತ್ತು ಮುಜಫರಾಬಾದ್ ಮತ್ತು 9ರಿಂದ 10ರ ಅವಧಿಯಲ್ಲಿ ಹಿಮಾಚಲ ಪ್ರದೇಶದಲ್ಲಿ ಚದುರಿದ ಮಳೆ ಬೀಳುವ ಸಾಧ್ಯತೆಯಿದೆ. ನವೆಂಬರ್ 9ರಂದು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ವ್ಯಾಪಕ ಮಳೆಯಾಗುವ ನಿರೀಕ್ಷೆಯಿದೆ.
Isolated very heavy rainfall also likely over Tamil Nadu-Puducherry-Karaikal on 11th November, 2022. Strong winds (wind speed 45-55 kmph gusting to 65 kmph) likely to prevail over Tamilnadu-south Andhra Pradesh coasts on 10th & 11th November, 2022.
— India Meteorological Department (@Indiametdept) November 7, 2022
ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಲಡಾಖ್‌ನಲ್ಲಿ ಸಾಕಷ್ಟು ವ್ಯಾಪಕವಾದ ಮಳೆಯಾಗಲಿದೆ. ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ನಲ್ಲಿ ಗುಡುಗು ಸಹಿತ ಸಾಕಷ್ಟು ವ್ಯಾಪಕ ಮಳೆಯಾಗಬಹುದು. ಕೇರಳ, ಮಾಹೆ ಮತ್ತು ಲಕ್ಷದ್ವೀಪದಲ್ಲಿ ಗುಡುಗು ಸಹಿತ ತುಂತುರು ಮಳೆಯಾಗುವ ಸಾಧ್ಯತೆ ಇದೆ. ಪಶ್ಚಿಮ ರಾಜಸ್ಥಾನ, ಆಂಧ್ರಪ್ರದೇಶದಲ್ಲೂ ವರುಣನ ಆರ್ಭಟ ಹೆಚ್ಚಾಗಲಿದೆ.