Rain Updates: ಈ ರಾಜ್ಯಗಳಲ್ಲಿ ಇನ್ನೂ ಕೆಲವು ದಿನ ಭಾರೀ ಮಳೆ ಸಾಧ್ಯತೆ; ಕೇರಳ, ತಮಿಳುನಾಡಿಗೆ ಹಳದಿ ಅಲರ್ಟ್

| Updated By: ಸುಷ್ಮಾ ಚಕ್ರೆ

Updated on: Nov 07, 2022 | 3:54 PM

ನವೆಂಬರ್ 11 ರಿಂದ ತಮಿಳುನಾಡು, ಪುದುಚೇರಿ, ಕಾರೈಕಲ್, ಕೇರಳ, ಮಾಹೆ ಮತ್ತು ಆಂಧ್ರಪ್ರದೇಶದಲ್ಲಿ ಗುಡುಗು ಮತ್ತು ಮಿಂಚು ಸಹಿತ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆಯಿದೆ.

Rain Updates: ಈ ರಾಜ್ಯಗಳಲ್ಲಿ ಇನ್ನೂ ಕೆಲವು ದಿನ ಭಾರೀ ಮಳೆ ಸಾಧ್ಯತೆ; ಕೇರಳ, ತಮಿಳುನಾಡಿಗೆ ಹಳದಿ ಅಲರ್ಟ್
ಮಳೆ
Image Credit source: ANI
Follow us on

ನವದೆಹಲಿ: ಭಾರತದ ಬಹುತೇಕ ರಾಜ್ಯಗಳಲ್ಲಿ ಮತ್ತೆ ಮಳೆ ಶುರುವಾಗಿದೆ. ಕಾಶ್ಮೀರದಲ್ಲಿ 5 ದಿನಗಳ ಆರ್ದ್ರ ವಾತಾವರಣ ನವೆಂಬರ್ 10ರಂದು ಕೊನೆಗೊಳ್ಳಲಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ನವೆಂಬರ್ 9ರ ಸುಮಾರಿಗೆ ಶ್ರೀಲಂಕಾ ಕರಾವಳಿಯ ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ಕಡಿಮೆ ಒತ್ತಡದ ಪ್ರದೇಶವು ರೂಪುಗೊಳ್ಳುವ ಸಾಧ್ಯತೆಯಿದೆ. ಜಮ್ಮು ಮತ್ತು ಕಾಶ್ಮೀರ, ದಕ್ಷಿಣದ ತಮಿಳುನಾಡು ಮತ್ತು ಕೇರಳ ರಾಜ್ಯಗಳಿಗೆ ನ. 10ರವರೆಗೆ ಹಳದಿ ಅಲರ್ಟ್​ (Yellow Alert) ನೀಡಲಾಗಿದೆ.

ನವೆಂಬರ್ 9ರಿಂದ ಪಶ್ಚಿಮ ಹಿಮಾಲಯ ಪ್ರದೇಶದ ಮೇಲೆ ತಾಜಾ ಪಾಶ್ಚಿಮಾತ್ಯ ಅಡಚಣೆಯು ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ, ಉತ್ತರಾಖಂಡ ಮತ್ತು ಲಡಾಖ್ ಮುಂತಾದ ಹಿಮಾಲಯ ಶ್ರೇಣಿಗಳ ಹಲವಾರು ಪ್ರದೇಶಗಳಲ್ಲಿ ಹಿಮಪಾತವಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: Karnataka Rain: ಕರ್ನಾಟಕದಲ್ಲಿ ಮಳೆಯ ಅಬ್ಬರ; ಕರಾವಳಿ, ಮಲೆನಾಡಿಗೆ ಹಳದಿ ಅಲರ್ಟ್​ ಘೋಷಣೆ

ಉತ್ತರ ಪಂಜಾಬ್ ಮತ್ತು ಉತ್ತರ ಹರಿಯಾಣದಲ್ಲಿ ನವೆಂಬರ್ 9-10 ಮತ್ತು ಉತ್ತರ ರಾಜಸ್ಥಾನದಲ್ಲಿ ನವೆಂಬರ್ 8ರಂದು ಲಘು ಮಳೆ ಅಥವಾ ತುಂತುರು ಮಳೆಯಾಗುವ ಸಾಧ್ಯತೆಯಿದೆ. ನವೆಂಬರ್ 11 ರಿಂದ ತಮಿಳುನಾಡು, ಪುದುಚೇರಿ, ಕಾರೈಕಲ್, ಕೇರಳ, ಮಾಹೆ ಮತ್ತು ಆಂಧ್ರಪ್ರದೇಶದಲ್ಲಿ ಗುಡುಗು ಮತ್ತು ಮಿಂಚು ಸಹಿತ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆಯಿದೆ.


ನವೆಂಬರ್ 11ರಂದು ತಮಿಳುನಾಡು-ಪುದುಚೇರಿ-ಕಾರೈಕಲ್‌ನಲ್ಲಿ ಅತಿ ಹೆಚ್ಚು ಮಳೆಯಾಗಲಿದೆ. ನವೆಂಬರ್ 8ರಂದು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ.
ತಮಿಳುನಾಡು, ಪುದುಚೇರಿ ಮತ್ತು ಕಾರೈಕಾಲ್ ಮತ್ತು ಕೇರಳ ಮತ್ತು ಮಾಹೆಯಲ್ಲಿ ಗುಡುಗು, ಮಿಂಚು ಸಹಿತ ಮಳೆಯು ಮುಂದುವರಿಯುವ ಸಾಧ್ಯತೆಯಿದೆ. ನವೆಂಬರ್ 8ರವರೆಗೆ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಮೇಲೆ ಸಾಕಷ್ಟು ವ್ಯಾಪಕವಾದ ಮಳೆ ಬೀಳುವ ಸಾಧ್ಯತೆಯಿದೆ.

ಇದನ್ನೂ ಓದಿ: Karnataka Rain: ಮಲೆನಾಡು, ಕರಾವಳಿಯಲ್ಲಿ ಇನ್ನೂ 4 ದಿನ ವ್ಯಾಪಕ ಮಳೆ; ಇಂದಿನಿಂದ ಚಳಿಯೂ ಹೆಚ್ಚಳ

ಹಿಮಪಾತದ ಮುನ್ಸೂಚನೆ:
ಜಮ್ಮು, ಕಾಶ್ಮೀರ, ಲಡಾಖ್, ಗಿಲ್ಗಿಟ್-ಬಾಲ್ಟಿಸ್ತಾನ್, ಮುಜಫರಾಬಾದ್ ಮತ್ತು ಹಿಮಾಚಲ ಪ್ರದೇಶದಲ್ಲಿ ಇಂದು ಮತ್ತು ನವೆಂಬರ್ 9ರಿಂದ 10ರವರೆಗೆ ಸಾಧಾರಣ ಮಳೆ ಅಥವಾ ಹಿಮಪಾತ ಸಂಭವಿಸುವ ಸಾಧ್ಯತೆಯಿದೆ. ಜಮ್ಮು ಮತ್ತು ಕಾಶ್ಮೀರದ ಗುಲ್ಮಾರ್ಗ್ ಭಾಗದಲ್ಲಿ ಮೈನಸ್ 3.6 ಡಿಗ್ರಿ ಸೆಲ್ಸಿಯಸ್‌ನಲ್ಲಿ ದಾಖಲಾಗಿದೆ. ಕಾಶ್ಮೀರ ಕಣಿವೆಯಾದ್ಯಂತ ರಾತ್ರಿಯ ತಾಪಮಾನದಲ್ಲಿ ಕುಸಿತ ಉಂಟಾಗಿದೆ. ಕಾಶ್ಮೀರವನ್ನು ದೇಶದ ಇತರ ಭಾಗಗಳೊಂದಿಗೆ ಸಂಪರ್ಕಿಸುವ ಪರ್ಯಾಯ ಸಂಪರ್ಕವಾದ ಮೊಘಲ್ ರಸ್ತೆಯನ್ನು ಭಾನುವಾರ ವಾಹನ ಸಂಚಾರಕ್ಕಾಗಿ ಮುಚ್ಚಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ