Rain Updates: ಪಂಜಾಬ್, ಉತ್ತರ ಪ್ರದೇಶ ಸೇರಿ ಈ ರಾಜ್ಯಗಳಲ್ಲಿ ನಾಳೆಯಿಂದ ಭಾರೀ ಮಳೆ ಶುರು
Weather Forecast: ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ, ಮುಂದಿನ ಎರಡು ದಿನಗಳಲ್ಲಿ ಕಾಶ್ಮೀರ-ಲಡಾಖ್-ಗಿಲ್ಗಿಟ್-ಬಾಲ್ಟಿಸ್ತಾನ್-ಮುಜಫರಾಬಾದ್ನಲ್ಲಿ ಲಘು ಮಳೆ ಅಥವಾ ಹಿಮ ಬೀಳುವ ಸಾಧ್ಯತೆಯಿದೆ.
ನವದೆಹಲಿ: ಪಂಜಾಬ್, ಹರಿಯಾಣ, ಉತ್ತರ ಪ್ರದೇಶದ ಪಶ್ಚಿಮ ಭಾಗಗಳಲ್ಲಿ ಡಿಸೆಂಬರ್ 16ರಿಂದ ಮಳೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ರಾತ್ರಿಯಿಂದ ಹವಾಮಾನದಲ್ಲಿ ತೀವ್ರವಾದ ಬದಲಾವಣೆಗಳಾಗಲಿದ್ದು, ಇದರಿಂದಾಗಿ ನಾಳೆಯಿಂದ ಪಂಜಾಬ್, ಹರಿಯಾಣ ಮತ್ತು ಉತ್ತರ ಪ್ರದೇಶದ ಪಶ್ಚಿಮ ಭಾಗಗಳಲ್ಲಿ ಮೋಡದಿಂದ ಕೂಡಿದ ಲಘು ಮಳೆಯಾಗಲಿದೆ.
ಹವಾಮಾನ ಇಲಾಖೆಯು ತನ್ನ ಟ್ವೀಟ್‌ನಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದು, ಪಶ್ಚಿಮ, ಪೂರ್ವ ಪ್ರದೇಶದಲ್ಲಿ ಗಾಳಿ ಸಹಿತ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಐಎಂಡಿ ತಿಳಿಸಿದೆ. ವಾಯುವ್ಯ ಭಾರತದ ಬಯಲು ಪ್ರದೇಶಗಳಲ್ಲಿ ಡಿಸೆಂಬರ್ 17ರಿಂದ ಡಿಸೆಂಬರ್ 20ರವರೆಗೆ ವಾಯುವ್ಯ ಅಥವಾ ಉತ್ತರ ದಿಕ್ಕಿನ ಮಾರುತಗಳು ಪ್ರಾರಂಭವಾಗುವ ಸಾಧ್ಯತೆಯಿದೆ.
ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ, ಮುಂದಿನ ಎರಡು ದಿನಗಳಲ್ಲಿ ಕಾಶ್ಮೀರ-ಲಡಾಖ್-ಗಿಲ್ಗಿಟ್-ಬಾಲ್ಟಿಸ್ತಾನ್-ಮುಜಫರಾಬಾದ್ನಲ್ಲಿ ಲಘು ಮಳೆ ಅಥವಾ ಹಿಮ ಬೀಳುವ ಸಾಧ್ಯತೆಯಿದೆ. ಡಿಸೆಂಬರ್ 17ರ ಅವಧಿಯಲ್ಲಿ ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಮಳೆಯಾಗಲಿದೆ. ಡಿಸೆಂಬರ್ 16ರಂದು ಪಂಜಾಬ್, ಹರಿಯಾಣ ಮತ್ತು ಉತ್ತರ ಪ್ರದೇಶದ ಪಶ್ಚಿಮ ಭಾಗಗಳಲ್ಲಿ ಲಘು ಮಳೆಯ ಮುನ್ಸೂಚನೆ ಇದೆ.
Present WD likely to move away from tonight and lower level winds may likely to be mix up of westerly/easterly/calm winds till 15th December.
— India Meteorological Department (@Indiametdept) December 14, 2021
ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರದಲ್ಲಿ ನಾಳೆಯಿಂದ ಹಳದಿ ಅಲರ್ಟ್ ಘೋಷಿಸಲಾಗಿದೆ. ಮುಂದಿನ ಐದು ದಿನಗಳಲ್ಲಿ ದೇಶದ ಉಳಿದ ಭಾಗಗಳಲ್ಲಿ ಶುಷ್ಕ ಹವಾಮಾನವಿರುತ್ತದೆ. IMD ಪ್ರಕಾರ, ಮುಂದಿನ 2 ದಿನಗಳಲ್ಲಿ ಪಂಜಾಬ್, ಹರಿಯಾಣ, ಚಂಡೀಗಢ ಮತ್ತು ದೆಹಲಿ, ಉತ್ತರ ರಾಜಸ್ಥಾನ, ಉತ್ತರ ಪ್ರದೇಶ ಮತ್ತು ಉತ್ತರ ಮಧ್ಯಪ್ರದೇಶದ ಹೆಚ್ಚಿನ ಭಾಗಗಳಲ್ಲಿ ಕನಿಷ್ಠ ತಾಪಮಾನವು 6-10 ಡಿಗ್ರಿ ಸೆಲ್ಷಿಯಸ್ ಇರಲಿದೆ. ನಾಳೆಯಿಂದ ಈಶಾನ್ಯ ತ್ರಿಪುರ, ವಾಯುವ್ಯ ಮಿಜೋರಾಂ, ದಕ್ಷಿಣ ಅಸ್ಸಾಂ ಮತ್ತು ಈಶಾನ್ಯ ಅರುಣಾಚಲ ಪ್ರದೇಶದಲ್ಲಿ ಬೆಳಿಗ್ಗೆ ದಟ್ಟವಾದ ಮಂಜು ಕವಿಯುವ ಸಾಧ್ಯತೆಯಿದೆ.
ಡಿಸೆಂಬರ್ 19ರವರೆಗೆ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮಳೆಯಾಗಲಿದೆ. ಕಾಶ್ಮೀರ ಮತ್ತು ಲಡಾಖ್‌ನಲ್ಲಿ ಡಿಸೆಂಬರ್ 17ರವರೆಗೆ ಕಡಿಮೆ ಮಳೆ ಅಥವಾ ಹಿಮಪಾತ ಇರಲಿದೆ. ಇಂದು ಮತ್ತು ಡಿ. 17ರ ನಡುವೆ ಉತ್ತರಾಖಂಡ ಮತ್ತು ಹಿಮಾಚಲ ಪ್ರದೇಶದಲ್ಲಿ ಮಳೆಯ ಎಚ್ಚರಿಕೆಯನ್ನು ನೀಡಲಾಗಿದೆ. ಡಿಸೆಂಬರ್ 16ರಂದು ಪಂಜಾಬ್, ಹರಿಯಾಣ ಮತ್ತು ಪಶ್ಚಿಮ ಉತ್ತರ ಪ್ರದೇಶದ ಉತ್ತರ ಭಾಗಗಳಲ್ಲಿ ಲಘು ಮಳೆಯ ಮುನ್ಸೂಚನೆ ನೀಡಲಾಗಿದೆ.
In view of another WD from the night of 15th December, likely to cause lower level easterlies from 16th and some cloudiness and light rain over northern parts of Punjab-Haryana-West Uttar Pradesh.
— India Meteorological Department (@Indiametdept) December 14, 2021
ಡಿಸೆಂಬರ್ 19ರವರೆಗೆ ತಮಿಳುನಾಡು, ಪುದುಚೇರಿ ಮತ್ತು ಕಾರೈಕಾಲ್ (ಪುದುಚೇರಿಯಲ್ಲಿಯೂ ಸಹ)ನಲ್ಲಿ ಚದುರಿದ ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಕೇರಳ, ಮಾಹೆ (ಪುದುಚೇರಿಯಲ್ಲಿ) ಮತ್ತು ಅಂಡಮಾನ್ ಮತ್ತು ನಿಕೋಬಾರ್‌ನಲ್ಲಿ ಕೂಡ ಮುಂದಿನ 5 ದಿನ ಮಳೆಯಾಗಲಿದೆ. ಆಂಧ್ರಪ್ರದೇಶದಲ್ಲಿ ಡಿಸೆಂಬರ್ 16ರವರೆಗೆ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ.
ಡಿಸೆಂಬರ್ 16ರಂದು ಅಸ್ಸಾಂ, ಮೇಘಾಲಯ, ತ್ರಿಪುರಾ, ಮಿಜೋರಾಂ, ನಾಗಾಲ್ಯಾಂಡ್ ಮತ್ತು ಮಣಿಪುರದ ಪ್ರತ್ಯೇಕ ಪಾಕೆಟ್‌ಗಳಲ್ಲಿ ಬೆಳಿಗ್ಗೆ ದಟ್ಟವಾದ ಮಂಜು ಇರುತ್ತದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇದನ್ನೂ ಓದಿ: Karnataka Dams Water Level: ರಾಜ್ಯಾದ್ಯಂತ ತುಂತುರು ಮಳೆ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ
Karnataka Dams Water Level: ರಾಜ್ಯಾದ್ಯಂತ ಮುಂದುವರೆದ ಮಳೆ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ