Rain Updates: ಮಧ್ಯಪ್ರದೇಶ, ಗುಜರಾತ್, ಮಹಾರಾಷ್ಟ್ರದಲ್ಲಿ ಇನ್ನೆರಡು ದಿನ ವ್ಯಾಪಕ ಮಳೆ; ಹಳದಿ ಅಲರ್ಟ್​ ಘೋಷಣೆ

Weather Forecast: ಇಂದಿನಿಂದ ಮಾರ್ಚ್​ 10ರವರೆಗೆ ಮಹಾರಾಷ್ಟ್ರ, ಗುಜರಾತ್, ರಾಜಸ್ಥಾನ ಮತ್ತು ಪಶ್ಚಿಮ ಮಧ್ಯಪ್ರದೇಶದಲ್ಲಿ ಗುಡುಗು, ಮಿಂಚು, ಗಾಳಿ ಸಹಿತ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಐಎಂಡಿ ತಿಳಿಸಿದೆ.

Rain Updates: ಮಧ್ಯಪ್ರದೇಶ, ಗುಜರಾತ್, ಮಹಾರಾಷ್ಟ್ರದಲ್ಲಿ ಇನ್ನೆರಡು ದಿನ ವ್ಯಾಪಕ ಮಳೆ; ಹಳದಿ ಅಲರ್ಟ್​ ಘೋಷಣೆ
ಮಳೆ
Follow us
| Updated By: ಸುಷ್ಮಾ ಚಕ್ರೆ

Updated on: Mar 08, 2022 | 9:45 PM

ಮುಂಬೈ: ಇನ್ನೆರಡು ದಿನಗಳ ಕಾಲ ಮಧ್ಯಪ್ರದೇಶ, ಗುಜರಾತ್ ಮತ್ತು ಮಹಾರಾಷ್ಟ್ರದ ಬಹುತೇಕ ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ. ಈ ಹಿನ್ನೆಲೆಯಲ್ಲಿ ಈ ಮೂರು ರಾಜ್ಯಗಳಲ್ಲಿ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಹಳದಿ ಅಲರ್ಟ್ (Yellow Alert) ಘೋಷಣೆ ಮಾಡಿದೆ. ಇಂದಿನಿಂದ ಮಾರ್ಚ್​ 10ರವರೆಗೆ ಮಹಾರಾಷ್ಟ್ರ, ಗುಜರಾತ್, ರಾಜಸ್ಥಾನ ಮತ್ತು ಪಶ್ಚಿಮ ಮಧ್ಯಪ್ರದೇಶದಲ್ಲಿ ಗುಡುಗು, ಮಿಂಚು, ಗಾಳಿ ಸಹಿತ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಐಎಂಡಿ ತಿಳಿಸಿದೆ.

ಮಾರ್ಚ್ 9ರಂದು ಉತ್ತರ ಮಧ್ಯ ಮಹಾರಾಷ್ಟ್ರ, ಮರಾಠವಾಡದಲ್ಲಿ ಆಲಿಕಲ್ಲು ಮಳೆ ಬೀಳುವ ಸಾಧ್ಯತೆಯಿದೆ ಎಂದು ಐಎಂಡಿ ತಿಳಿಸಿದೆ. ಮುಂಬೈ ಮೂಲದ ಪ್ರಾದೇಶಿಕ ಹವಾಮಾನ ಕೇಂದ್ರದ ಪ್ರಕಾರ, ಪಾಲ್ಘರ್, ಥಾಣೆ, ರಾಯಗಢ ಮತ್ತು ರತ್ನಗಿರಿ ಮುಂದಿನ ಎರಡು ದಿನಗಳಲ್ಲಿ ಗುಡುಗು, ಮಿಂಚು, ಸಾಧಾರಣ ಮಳೆ, ಬಿರುಗಾಳಿ ಸಹಿತ ಚಂಡಮಾರುತ ಉಂಟಾಗಲಿದೆ. ಮುಂದಿನ ಎರಡು ದಿನಗಳಲ್ಲಿ ಮುಂಬೈನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಭಾರತದ ಕೇರಳ, ತಮಿಳುನಾಡು, ಕರ್ನಾಟಕದಲ್ಲಿ ಕೂಡ ಬುಧವಾರದವರೆಗೆ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಹಾಗೇ, ದಕ್ಷಿಣ ಅಂಡಮಾನ್ ಸಮುದ್ರದಲ್ಲಿ ಚಂಡಮಾರುತದ ಪರಿಚಲನೆ ಉಂಟಾಗಲಿದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಗುಡುಗು ಸಹಿತ ವ್ಯಾಪಕವಾದ ಮಳೆ ಉಂಟಾಗಲಿದೆ. ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶದ ಕೆಲವು ಪ್ರದೇಶಗಳಲ್ಲಿ ಬುಧವಾರದವರೆಗೆ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ.

ಜಮ್ಮು ಮತ್ತು ಕಾಶ್ಮೀರ, ಲಡಾಖ್, ಪೂರ್ವ ರಾಜಸ್ಥಾನ, ಪಶ್ಚಿಮ ಮಧ್ಯಪ್ರದೇಶ, ಗುಜರಾತ್, ಮರಾಠವಾಡ, ಮಧ್ಯ ಮಹಾರಾಷ್ಟ್ರ, ಗೋವಾ, ಕೊಂಕಣ, ತಮಿಳುನಾಡು ಮತ್ತು ಅಂಡಮಾನ್ ನಿಕೋಬಾರ್​​ನಲ್ಲಿ ಹಳದಿ ಅಲರ್ಟ್​ ಘೋಷಿಸಲಾಗಿದೆ. ಶನಿವಾರ ಗುಜರಾತ್ ಮತ್ತು ಮಹಾರಾಷ್ಟ್ರದ ಕರಾವಳಿ ಭಾಗಗಳಲ್ಲಿ ತಾಪಮಾನವು 40 ಡಿಗ್ರಿ ಸೆಲ್ಷಿಯಸ್ ದಾಟುವ ಸಾಧ್ಯತೆಯಿದೆ.

ಲಡಾಖ್ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ನಾಳೆ ಹಿಮ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ತಮಿಳುನಾಡು, ಕೇರಳ, ಕರ್ನಾಟಕ ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ. ಮಧ್ಯಪ್ರದೇಶ ಮತ್ತು ಮಹಾರಾಷ್ಟ್ರದ ಕೆಲವು ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: Weather Today: ಕರ್ನಾಟಕದ ಹಲವೆಡೆ ಇಂದು, ನಾಳೆ ಮಳೆಯಾಗುವ ಸಾಧ್ಯತೆ; ಹವಾಮಾನ ಇಲಾಖೆ ಮುನ್ಸೂಚನೆ

Weather Today: ತಮಿಳುನಾಡಿನ ಹಲವೆಡೆ ಇನ್ನೆರಡು ದಿನ ಭಾರೀ ಮಳೆ; ಚೆನ್ನೈನಲ್ಲಿ ರೆಡ್ ಅಲರ್ಟ್​ ಘೋಷಣೆ