ನವದೆಹಲಿ: ಬಂಗಾಳಕೊಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಭಾರತದ ಅನೇಕ ರಾಜ್ಯಗಳಲ್ಲಿ ಭಾರೀ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ (IMD) ಇಂದು ಉತ್ತರ ಪ್ರದೇಶ (Uttar Pradesh Rain), ಮಧ್ಯಪ್ರದೇಶ (Madhya Pradesh Rain) ಮತ್ತು ರಾಜಸ್ಥಾನ (Rajasthan Rains) ಸೇರಿದಂತೆ 25 ರಾಜ್ಯಗಳಲ್ಲಿ ಭಾರೀ ಮಳೆಯ ಎಚ್ಚರಿಕೆಯನ್ನು ನೀಡಿದೆ. ಈ ರಾಜ್ಯಗಳಲ್ಲಿ ಆರೆಂಜ್ ಅಲರ್ಟ್ (Orange Alert) ಕೂಡ ನೀಡಲಾಗಿದೆ. ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಂಜಾಬ್, ಹರಿಯಾಣ, ದೆಹಲಿ, ಉತ್ತರ ಪ್ರದೇಶ, ಮಧ್ಯಪ್ರದೇಶ, ಮಹಾರಾಷ್ಟ್ರದ ಕೆಲವು ಭಾಗಗಳು, ತೆಲಂಗಾಣ, ಆಂಧ್ರ ಪ್ರದೇಶ, ಛತ್ತೀಸ್‌ಗಢ, ಒಡಿಶಾ, ಜಾರ್ಖಂಡ್, ಪಶ್ಚಿಮ ಬಂಗಾಳ, ಸಿಕ್ಕಿಂ ಭಾರೀ ಮಳೆಗೆ ಸಾಕ್ಷಿಯಾಗಲಿದೆ. ಉತ್ತರ ಪ್ರದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಸತತ ಮಳೆಯಿಂದಾಗಿ ಗೋಡೆ ಕುಸಿದು ಒಟ್ಟು 7 ಜನರು ಸಾವನ್ನಪ್ಪಿದ್ದಾರೆ.
ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಎಚ್ಚರಿಕೆಯನ್ನು ನೀಡಲಾಗಿದೆ. ಈ ರಾಜ್ಯಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ.
ಒಡಿಶಾದಲ್ಲಿ ಮಳೆ:
ಒಡಿಶಾದ ಹಲವು ಜಿಲ್ಲೆಗಳಿಗೆ ಭಾರೀ ಮಳೆಯ ಎಚ್ಚರಿಕೆ ನೀಡಲಾಗಿದೆ. ರಾಜ್ಯದ ಕರಾವಳಿ ಮತ್ತು ದಕ್ಷಿಣ ಪ್ರದೇಶಗಳಲ್ಲಿ ಸತತ 2 ದಿನಗಳ ಕಾಲ ಕಡಿಮೆ ಒತ್ತಡದ ರಚನೆಯಿಂದಾಗಿ ಭಾರೀ ಮಳೆಯಾಗಿದೆ. ಒಡಿಶಾ ರಾಜ್ಯದ ಪಶ್ಚಿಮ ಮತ್ತು ಒಳನಾಡಿನ ಭಾಗಗಳ ಜೊತೆಗೆ ಭುವನೇಶ್ವರದಲ್ಲಿ ತೀವ್ರವಾದ ಮಳೆ ಮುಂದುವರೆದಿದೆ.
Delhi | Heavy downpour witnessed in several parts of the national capital; visuals from Kartavya Path pic.twitter.com/c1reQ3a31y
— ANI (@ANI) September 22, 2022
ತಮಿಳುನಾಡು ಮಳೆ:
ಕರಾವಳಿ ಪ್ರದೇಶಗಳು ಮತ್ತು ಪಶ್ಚಿಮ ಘಟ್ಟಗಳಿಗೆ ಹೊಂದಿಕೊಂಡಿರುವ ಪ್ರದೇಶಗಳು ಸೇರಿದಂತೆ ತಮಿಳುನಾಡಿನ ಕೆಲವು ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು IMD ಮುನ್ಸೂಚನೆ ನೀಡಿದೆ. ಮುಂದಿನ ಕೆಲವು ದಿನಗಳಲ್ಲಿ ರಾಜ್ಯದ ರಾಜಧಾನಿ ಚೆನ್ನೈನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಇದನ್ನೂ ಓದಿ: Rain Updates: ತೆಲಂಗಾಣದಲ್ಲಿ ಇನ್ನೂ ಕೆಲವು ದಿನ ಭಾರೀ ಮಳೆ ಸಾಧ್ಯತೆ; ಹೈದರಾಬಾದ್ನಲ್ಲಿ ಹಳದಿ ಅಲರ್ಟ್ ಘೋಷಣೆ
ಮಧ್ಯಪ್ರದೇಶದಲ್ಲಿ ಮಳೆ:
ಮಧ್ಯಪ್ರದೇಶದ ಮೊರೆನಾ, ಛತ್ತರ್‌ಪುರ, ಟಿಕಮ್‌ಗಢ ಮತ್ತು ನಿವಾರಿಯಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ ತಿಳಿಸಿದೆ. ನರ್ಮದಾಪುರಂ ಮತ್ತು ಗ್ವಾಲಿಯರ್ ವಿಭಾಗಗಳ ಜಿಲ್ಲೆಗಳು ಸೇರಿದಂತೆ ಸುಮಾರು 20 ಜಿಲ್ಲೆಗಳಲ್ಲಿ ಭಾರೀ ಮಳೆಯ ಎಚ್ಚರಿಕೆ ನೀಡಲಾಗಿದೆ.
ದೆಹಲಿಯಲ್ಲಿ ಮಳೆ:
ಮುಂಗಾರು ಹಿನ್ನಡೆಯಾಗುತ್ತಿದ್ದಂತೆ, ರಾಷ್ಟ್ರ ರಾಜಧಾನಿ ದೆಹಲಿಯ ಹಲವು ಭಾಗಗಳಲ್ಲಿ ಭಾರೀ ಮಳೆಯಾಗಿದೆ. ಮುಂದಿನ 2-3 ದಿನಗಳ ಕಾಲ ನಗರದಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. ನಗರದಲ್ಲಿ 14 ವರ್ಷಗಳಲ್ಲೇ ಅತ್ಯಂತ ಕಡಿಮೆ ಮಳೆಯಾದ ಆಗಸ್ಟ್‌ನಲ್ಲಿ ದಾಖಲೆಯ ಮುಂಗಾರು ಕೊರತೆಯನ್ನು ಈ ಮಳೆಯು ಸರಿದೂಗಿಸುವ ನಿರೀಕ್ಷೆಯಿದೆ.