Rain Updates: ಭಾರೀ ಮಳೆಯಿಂದ ಮಹಾರಾಷ್ಟ್ರ, ಗೋವಾದ ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಣೆ

Maharashtra Rain: ಮುಂದಿನ ಎರಡು ದಿನಗಳವರೆಗೆ ಕೊಂಕಣ, ಗೋವಾ ಮತ್ತು ಮಹಾರಾಷ್ಟ್ರಕ್ಕೆ ರೆಡ್ ಅಲರ್ಟ್ ಘೋಷಿಸಲಾಗಿದೆ. ವಿದರ್ಭದಲ್ಲಿ ಆರೆಂಜ್ ಅಲರ್ಟ್ ನೀಡಲಾಗಿದೆ.

Rain Updates: ಭಾರೀ ಮಳೆಯಿಂದ ಮಹಾರಾಷ್ಟ್ರ, ಗೋವಾದ ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಣೆ
ಮಳೆ
Image Credit source: Hindustan Times
TV9kannada Web Team

| Edited By: Sushma Chakre

Jul 07, 2022 | 9:04 AM

Monsoon 2022: ಭಾರತದ ಹಲವು ರಾಜ್ಯಗಳಲ್ಲಿ ಮಳೆಯ ಅಬ್ಬರ ಹೆಚ್ಚಾಗಿದೆ. ಇಂದು ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್​ (Red Alert) ಘೋಷಿಸಲಾಗಿದೆ. ಬಾಗಲಕೋಟೆ ಮತ್ತು ಬೆಳಗಾವಿಯ ಕೃಷ್ಣಾ ನದಿ ತೀರದ ಪ್ರದೇಶಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ. ಅದೇ ರೀತಿ ಮಹಾರಾಷ್ಟ್ರ (Maharashtra Rains) ಮತ್ತು ಗೋವಾದಲ್ಲಿ (Goa Rain) ಕೂಡ ಭಾರೀ ಮಳೆಯಿಂದಾಗಿ ರೆಡ್ ಅಲರ್ಟ್​ ಘೋಷಿಸಲಾಗಿದೆ. ಮುಂದಿನ ಎರಡು ದಿನಗಳವರೆಗೆ ಕೊಂಕಣ, ಗೋವಾ ಮತ್ತು ಮಹಾರಾಷ್ಟ್ರಕ್ಕೆ ರೆಡ್ ಅಲರ್ಟ್ ಘೋಷಿಸಲಾಗಿದೆ. ವಿದರ್ಭದಲ್ಲಿ ಆರೆಂಜ್ ಅಲರ್ಟ್ (Orange Alert) ನೀಡಲಾಗಿದೆ. ಪುಣೆ, ಸತಾರಾ ಮತ್ತು ಕೊಲ್ಹಾಪುರ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಮುಂದಿನ ಮೂರು ದಿನಗಳಲ್ಲಿ ಪಶ್ಚಿಮ ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗಲಿದೆ.

ಗುಜರಾತ್​ನ ಕರಾವಳಿ ಮತ್ತು ಕೊಂಕಣ, ಗೋವಾದಲ್ಲಿ ಮಳೆ ಹೆಚ್ಚಾಗಿದೆ. ಗುಜರಾತ್, ಮುಂಬೈ ಮತ್ತು ಗೋವಾದ ಕರಾವಳಿ ಪ್ರದೇಶಗಳಲ್ಲಿ ಸಾಧಾರಣದಿಂದ ಭಾರೀ ಮಳೆಯಾಗಲಿದೆ. ಇದಲ್ಲದೆ, ಪಂಜಾಬ್, ಹರಿಯಾಣ, ರಾಜಸ್ಥಾನ, ಮಧ್ಯಪ್ರದೇಶ, ಈಶಾನ್ಯ ಭಾರತದ ಕೆಲವು ಭಾಗಗಳಲ್ಲಿ ಲಘು ಮಳೆಯಾಗಲಿದೆ. ಹವಾಮಾನ ಮುನ್ಸೂಚನೆಯ ಪ್ರಕಾರ, ಮುಂದಿನ 24 ಗಂಟೆಗಳಲ್ಲಿ ಕೊಂಕಣ ಮತ್ತು ಗೋವಾ, ಕರಾವಳಿ ಕರ್ನಾಟಕ ಮತ್ತು ಗುಜರಾತ್‌ನ ಕೆಲವು ಭಾಗಗಳಲ್ಲಿ ಭಾರೀ ಮಳೆ ಮುಂದುವರಿಯಬಹುದು.

ದೆಹಲಿ, ಪಶ್ಚಿಮ ಉತ್ತರ ಪ್ರದೇಶ, ಜಾರ್ಖಂಡ್, ಪಶ್ಚಿಮ ಬಂಗಾಳ, ತಮಿಳುನಾಡು ಮತ್ತು ರಾಜಸ್ಥಾನದ ಉಳಿದ ಭಾಗಗಳಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ. ಭಾರತೀಯ ಹವಾಮಾನ ಇಲಾಖೆ (IMD) ದಕ್ಷಿಣ ಕೊಂಕಣ, ಗೋವಾ ಮತ್ತು ದಕ್ಷಿಣ ಮಧ್ಯ ಮಹಾರಾಷ್ಟ್ರದಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಮಹಾರಾಷ್ಟ್ರ, ವಿದರ್ಭದಲ್ಲಿ ಮುಂದಿನ ಎರಡು ದಿನಗಳವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಪುಣೆ, ಸತಾರಾ ಮತ್ತು ಕೊಲ್ಲಾಪುರ ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಡಲಾಗಿದೆ.

ಇದನ್ನೂ ಓದಿ: ರಾಜ್ಯದಲ್ಲಿ ಧಾರಾಕಾರ ಮಳೆ: ಉತ್ತರ ಕನ್ನಡ, ದಕ್ಷಿಣ ಕನ್ನಡ ಸೇರಿದಂತೆ ಹಲವೆಡೆ ಶಾಲಾ ಕಾಲೇಜಿಗೆ ರಜೆ

ಮುಂದಿನ ಮೂರು ದಿನಗಳಲ್ಲಿ ಮಹಾರಾಷ್ಟ್ರದ ಪಶ್ಚಿಮ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇದಲ್ಲದೆ ಜುಲೈ 8ರವರೆಗೆ ಸತಾರಾ ಜಿಲ್ಲೆಗೆ ಮತ್ತು ಜುಲೈ 9ರವರೆಗೆ ಕೊಲ್ಹಾಪುರ ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಪಂಜಾಬ್ ಮತ್ತು ಹರಿಯಾಣ ಮತ್ತು ಚಂಡೀಗಢದಲ್ಲಿ ಜುಲೈ 9 ರವರೆಗೆ ಅಲ್ಲಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು IMD ಟ್ವೀಟ್ ಮಾಡಿದೆ.

ಮಧ್ಯಪ್ರದೇಶ, ವಿದರ್ಭ, ಉತ್ತರ ಮಧ್ಯ ಮಹಾರಾಷ್ಟ್ರ, ಗುಜರಾತ್‌ನ ಉಳಿದ ಭಾಗಗಳು, ದಕ್ಷಿಣ ರಾಜಸ್ಥಾನ, ಕೇರಳ ಮತ್ತು ಒಡಿಶಾದ ಕೆಲವು ಭಾಗಗಳು, ಛತ್ತೀಸ್‌ಗಢ, ತೆಲಂಗಾಣ, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದ ಕೆಲವು ಸ್ಥಳಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ.

ಇದನ್ನೂ ಓದಿ: Karnataka Rain: ಕರ್ನಾಟಕದಾದ್ಯಂತ ಜುಲೈ 9ರವರೆಗೆ ಭಾರೀ ಮಳೆ; ಕರಾವಳಿಯಲ್ಲಿ ಇಂದು ರೆಡ್ ಅಲರ್ಟ್​ ಘೋಷಣೆ

ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ (ಎನ್‌ಡಿಆರ್‌ಎಫ್) 17 ತಂಡಗಳನ್ನು ನಿಯೋಜಿಸಲಾಗಿದೆ. ಎರಡು ತಂಡಗಳು ಪ್ರವಾಹ ಪೀಡಿತ ಶಿರೋಲ್ ತೆಹಸಿಲ್ ಮತ್ತು ಕೊಲ್ಹಾಪುರ ನಗರದಲ್ಲಿ ಬೀಡುಬಿಟ್ಟಿವೆ. ತೆಲಂಗಾಣದಲ್ಲಿ ಮುಂದಿನ ಕೆಲವು ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ 5 ದಿನಗಳಲ್ಲಿ ಕೊಂಕಣ ಮತ್ತು ಗೋವಾದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada