AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rain Updates: ತೆಲಂಗಾಣದಲ್ಲಿ ಇನ್ನೂ ಕೆಲವು ದಿನ ಭಾರೀ ಮಳೆ ಸಾಧ್ಯತೆ; ಹೈದರಾಬಾದ್​​ನಲ್ಲಿ ಹಳದಿ ಅಲರ್ಟ್ ಘೋಷಣೆ

ಇಂದು ಒಡಿಶಾ, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಪಶ್ಚಿಮ ಬಂಗಾಳ, ಜಾರ್ಖಂಡ್, ಉತ್ತರ ಪ್ರದೇಶ, ಮಧ್ಯಪ್ರದೇಶ, ಆಂಧ್ರಪ್ರದೇಶ, ಯಾನಂ ಮತ್ತು ತೆಲಂಗಾಣದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

Rain Updates: ತೆಲಂಗಾಣದಲ್ಲಿ ಇನ್ನೂ ಕೆಲವು ದಿನ ಭಾರೀ ಮಳೆ ಸಾಧ್ಯತೆ; ಹೈದರಾಬಾದ್​​ನಲ್ಲಿ ಹಳದಿ ಅಲರ್ಟ್ ಘೋಷಣೆ
ಮಳೆ (ಸಂಗ್ರಹ ಚಿತ್ರ)
TV9 Web
| Updated By: ಸುಷ್ಮಾ ಚಕ್ರೆ|

Updated on: Sep 20, 2022 | 4:45 PM

Share

ನವದೆಹಲಿ: ಕರ್ನಾಟಕದಲ್ಲಿ ಮಳೆಯ ಅಬ್ಬರ ಕಡಿಮೆಯಾಗಿದ್ದರೂ ನಾಳೆ (ಸೆ. 21) ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ ನಿರೀಕ್ಷೆಯಿದೆ. ನೆರೆಯ ರಾಜ್ಯಗಳಾದ ತೆಲಂಗಾಣ (Telangana Rains), ಆಂಧ್ರದಲ್ಲಿ ಮಳೆಯ ಅಬ್ಬರ ಹೆಚ್ಚಾಗಿದೆ. ಹೈದರಾಬಾದ್‌ನಲ್ಲಿರುವ ಭಾರತೀಯ ಹವಾಮಾನ ಇಲಾಖೆ (IMD) ಹಳದಿ ಅಲರ್ಟ್​ (Yellow Alert) ನೀಡಿದೆ. ಮುನ್ಸೂಚನೆಯ ಪ್ರಕಾರ, ಹೈದರಾಬಾದ್‌ನ ಹೆಚ್ಚಿನ ಪ್ರದೇಶಗಳಲ್ಲಿ ಬುಧವಾರ ಬೆಳಿಗ್ಗೆ 0.10 ಮಿಮೀನಿಂದ 2.40 ಮಿಮೀವರೆಗೆ ಮಳೆ ಬೀಳಬಹುದು. ಆದರೆ, ಚಂದ್ರಾಯನಗುಟ್ಟ, ರಾಜೇಂದ್ರನಗರ, ಮಲಕ್‌ಪೇಟ್, ಎಲ್‌ಬಿ ನಗರ, ಚಾರ್ಮಿನಾರ್, ಬಂಡ್ಲಗುಡ, ಯೂಸುಫ್‌ಗುಡ ಸೇರಿದಂತೆ ಕೆಲವೆಡೆ 2.50 ಮಿ.ಮೀನಿಂದ 15.50 ಮಿ.ಮೀವರೆಗೆ ಮಳೆಯಾಗುವ ಸಾಧ್ಯತೆ ಇದೆ.

ಹೈದರಾಬಾದ್‌ನ ಇತರ ಭಾಗಗಳಲ್ಲಿ ಇಂದು ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಅದಿಲಾಬಾದ್, ಕೊಮಾರಂ ಭೀಮ್ ಆಸಿಫಾಬಾದ್, ಮಂಚೇರಿಯಲ್, ನಿರ್ಮಲ್, ನಿಜಾಮಾಬಾದ್, ಜಗಿತ್ಯಾಲ್, ರಾಜಣ್ಣ ಸಿರ್ಸಿಲ್ಲಾ, ಕರೀಂನಗರ, ಪೆದ್ದಪಲ್ಲಿ, ಸಿದ್ದಿಪೇಟ್, ಸಂಗಾರೆಡ್ಡಿಯಲ್ಲಿ ಹಳದಿ ಎಚ್ಚರಿಕೆ ನೀಡಲಾಗಿದೆ. ರಾಜ್ಯದಾದ್ಯಂತ ಇದೇ ರೀತಿಯ ಹವಾಮಾನ ಇರಲಿದೆ ಎಂದು ನಿರೀಕ್ಷಿಸಲಾಗಿದೆ.

ಇದನ್ನೂ ಓದಿ: Rain Updates: ಒಡಿಶಾ, ತೆಲಂಗಾಣ ಸೇರಿ ಈ ರಾಜ್ಯಗಳಲ್ಲಿ ಇಂದಿನಿಂದ ಭಾರೀ ಮಳೆ; ಹಲವೆಡೆ ಆರೆಂಜ್ ಅಲರ್ಟ್​ ಘೋಷಣೆ

ಇಂದು ಒಡಿಶಾದಲ್ಲಿ ಸಾಕಷ್ಟು ವ್ಯಾಪಕವಾಗಿ ಮಳೆಯಾಗುವ ಸಾಧ್ಯತೆಯಿದೆ. ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಗಂಗಾನದಿ ಪಶ್ಚಿಮ ಬಂಗಾಳ, ಜಾರ್ಖಂಡ್, ಪೂರ್ವ ಉತ್ತರ ಪ್ರದೇಶ, ಪೂರ್ವ ಮಧ್ಯಪ್ರದೇಶ, ಕರಾವಳಿ ಆಂಧ್ರಪ್ರದೇಶ, ಯಾನಂ ಮತ್ತು ತೆಲಂಗಾಣದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕೊಂಕಣ, ಗೋವಾ, ಮರಾಠವಾಡ ಮತ್ತು ವಿದರ್ಭದಲ್ಲಿ ಗುಡುಗು ಸಹಿತ ಸಾಕಷ್ಟು ವ್ಯಾಪಕ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

ಹಾಗೇ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಉಪ-ಹಿಮಾಲಯ ಪಶ್ಚಿಮ ಬಂಗಾಳ, ಸಿಕ್ಕಿಂ, ಬಿಹಾರ, ಪಶ್ಚಿಮ ಉತ್ತರ ಪ್ರದೇಶ, ಉತ್ತರಾಖಂಡ, ಹಿಮಾಚಲ ಪ್ರದೇಶ, ಮಧ್ಯ ಮಹಾರಾಷ್ಟ್ರ, ಕರಾವಳಿ ಕರ್ನಾಟಕ, ಕೇರಳ, ಮಾಹೆ, ಲಕ್ಷದ್ವೀಪಗಳಲ್ಲಿ ಗುಡುಗು ಸಹಿತ ಚದುರಿದ ಮಳೆ ನಿರೀಕ್ಷಿಸಲಾಗಿದೆ. ಹರಿಯಾಣ, ಚಂಡೀಗಢ, ದೆಹಲಿ, ಜಮ್ಮು ಮತ್ತು ಕಾಶ್ಮೀರ, ಲಡಾಖ್, ಪೂರ್ವ ರಾಜಸ್ಥಾನ, ಪಶ್ಚಿಮ ಮಧ್ಯಪ್ರದೇಶ, ಗುಜರಾತ್, ರಾಯಲಸೀಮಾ, ತಮಿಳುನಾಡು, ಪುದುಚೇರಿ, ಕಾರೈಕಲ್, ಕರ್ನಾಟಕದ ಒಳನಾಡಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: Rain Updates: ಒಡಿಶಾದಲ್ಲಿ ಇಂದಿನಿಂದ 1 ವಾರ ಭಾರೀ ಮಳೆ; ಮಹಾರಾಷ್ಟ್ರದಲ್ಲಿ ರೈಲ್ವೆ ಹಳಿಗಳು ಮುಳುಗಡೆ

ಬುಧವಾರ ಮಳೆಯಾಗುವ ಪ್ರದೇಶಗಳು: ನಾಳೆ (ಸೆ. 21) ಒಡಿಶಾದಲ್ಲಿ ಸಾಕಷ್ಟು ವ್ಯಾಪಕವಾಗಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ಪೂರ್ವ ಉತ್ತರ ಪ್ರದೇಶ, ಪೂರ್ವ ಮಧ್ಯಪ್ರದೇಶ, ವಿದರ್ಭ ಮತ್ತು ತೆಲಂಗಾಣದಲ್ಲಿ ಭಾರೀ ಮಳೆಯಾಗಲಿದೆ. ಜಾರ್ಖಂಡ್‌ನಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಗಂಗಾತೀರದ ಪಶ್ಚಿಮ ಬಂಗಾಳ, ಕೊಂಕಣ, ಗೋವಾ, ಮಧ್ಯ ಮಹಾರಾಷ್ಟ್ರ, ಮರಾಠವಾಡ, ಕರಾವಳಿ ಆಂಧ್ರಪ್ರದೇಶ ಮತ್ತು ಯಾನಂಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ.

ಪಶ್ಚಿಮ ಬಂಗಾಳ, ಸಿಕ್ಕಿಂ, ಬಿಹಾರ, ಉತ್ತರ ಪ್ರದೇಶ, ಉತ್ತರಾಖಂಡ, ಮಧ್ಯಪ್ರದೇಶ, ಕರಾವಳಿ ಕರ್ನಾಟಕ, ಕೇರಳ, ಮಾಹೆ ಮತ್ತು ಲಕ್ಷದ್ವೀಪಗಳಲ್ಲಿ ಗುಡುಗು ಸಹಿತ ಚದುರಿದ ಮಳೆಯಾಗುವ ಸಾಧ್ಯತೆ ಇದೆ. ಹರಿಯಾಣ, ಚಂಡೀಗಢ, ದೆಹಲಿ, ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಲಡಾಖ್, ರಾಜಸ್ಥಾನ, ಗುಜರಾತ್, ರಾಯಲಸೀಮಾ, ತಮಿಳುನಾಡು, ಪುದುಚೇರಿ, ಕಾರೈಕಲ್ ಮತ್ತು ಕರ್ನಾಟಕದ ಒಳನಾಡಿನಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ