ನವದೆಹಲಿ: ಕರ್ನಾಟಕದಲ್ಲಿ ಮಳೆಯ ಅಬ್ಬರ ಕಡಿಮೆಯಾಗಿದ್ದರೂ ನಾಳೆ (ಸೆ. 21) ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ ನಿರೀಕ್ಷೆಯಿದೆ. ನೆರೆಯ ರಾಜ್ಯಗಳಾದ ತೆಲಂಗಾಣ (Telangana Rains), ಆಂಧ್ರದಲ್ಲಿ ಮಳೆಯ ಅಬ್ಬರ ಹೆಚ್ಚಾಗಿದೆ. ಹೈದರಾಬಾದ್‌ನಲ್ಲಿರುವ ಭಾರತೀಯ ಹವಾಮಾನ ಇಲಾಖೆ (IMD) ಹಳದಿ ಅಲರ್ಟ್ (Yellow Alert) ನೀಡಿದೆ. ಮುನ್ಸೂಚನೆಯ ಪ್ರಕಾರ, ಹೈದರಾಬಾದ್‌ನ ಹೆಚ್ಚಿನ ಪ್ರದೇಶಗಳಲ್ಲಿ ಬುಧವಾರ ಬೆಳಿಗ್ಗೆ 0.10 ಮಿಮೀನಿಂದ 2.40 ಮಿಮೀವರೆಗೆ ಮಳೆ ಬೀಳಬಹುದು. ಆದರೆ, ಚಂದ್ರಾಯನಗುಟ್ಟ, ರಾಜೇಂದ್ರನಗರ, ಮಲಕ್‌ಪೇಟ್, ಎಲ್‌ಬಿ ನಗರ, ಚಾರ್ಮಿನಾರ್, ಬಂಡ್ಲಗುಡ, ಯೂಸುಫ್‌ಗುಡ ಸೇರಿದಂತೆ ಕೆಲವೆಡೆ 2.50 ಮಿ.ಮೀನಿಂದ 15.50 ಮಿ.ಮೀವರೆಗೆ ಮಳೆಯಾಗುವ ಸಾಧ್ಯತೆ ಇದೆ.
ಹೈದರಾಬಾದ್‌ನ ಇತರ ಭಾಗಗಳಲ್ಲಿ ಇಂದು ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಅದಿಲಾಬಾದ್, ಕೊಮಾರಂ ಭೀಮ್ ಆಸಿಫಾಬಾದ್, ಮಂಚೇರಿಯಲ್, ನಿರ್ಮಲ್, ನಿಜಾಮಾಬಾದ್, ಜಗಿತ್ಯಾಲ್, ರಾಜಣ್ಣ ಸಿರ್ಸಿಲ್ಲಾ, ಕರೀಂನಗರ, ಪೆದ್ದಪಲ್ಲಿ, ಸಿದ್ದಿಪೇಟ್, ಸಂಗಾರೆಡ್ಡಿಯಲ್ಲಿ ಹಳದಿ ಎಚ್ಚರಿಕೆ ನೀಡಲಾಗಿದೆ. ರಾಜ್ಯದಾದ್ಯಂತ ಇದೇ ರೀತಿಯ ಹವಾಮಾನ ಇರಲಿದೆ ಎಂದು ನಿರೀಕ್ಷಿಸಲಾಗಿದೆ.
ಇದನ್ನೂ ಓದಿ: Rain Updates: ಒಡಿಶಾ, ತೆಲಂಗಾಣ ಸೇರಿ ಈ ರಾಜ್ಯಗಳಲ್ಲಿ ಇಂದಿನಿಂದ ಭಾರೀ ಮಳೆ; ಹಲವೆಡೆ ಆರೆಂಜ್ ಅಲರ್ಟ್ ಘೋಷಣೆ
ಇಂದು ಒಡಿಶಾದಲ್ಲಿ ಸಾಕಷ್ಟು ವ್ಯಾಪಕವಾಗಿ ಮಳೆಯಾಗುವ ಸಾಧ್ಯತೆಯಿದೆ. ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಗಂಗಾನದಿ ಪಶ್ಚಿಮ ಬಂಗಾಳ, ಜಾರ್ಖಂಡ್, ಪೂರ್ವ ಉತ್ತರ ಪ್ರದೇಶ, ಪೂರ್ವ ಮಧ್ಯಪ್ರದೇಶ, ಕರಾವಳಿ ಆಂಧ್ರಪ್ರದೇಶ, ಯಾನಂ ಮತ್ತು ತೆಲಂಗಾಣದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕೊಂಕಣ, ಗೋವಾ, ಮರಾಠವಾಡ ಮತ್ತು ವಿದರ್ಭದಲ್ಲಿ ಗುಡುಗು ಸಹಿತ ಸಾಕಷ್ಟು ವ್ಯಾಪಕ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ಹಾಗೇ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಉಪ-ಹಿಮಾಲಯ ಪಶ್ಚಿಮ ಬಂಗಾಳ, ಸಿಕ್ಕಿಂ, ಬಿಹಾರ, ಪಶ್ಚಿಮ ಉತ್ತರ ಪ್ರದೇಶ, ಉತ್ತರಾಖಂಡ, ಹಿಮಾಚಲ ಪ್ರದೇಶ, ಮಧ್ಯ ಮಹಾರಾಷ್ಟ್ರ, ಕರಾವಳಿ ಕರ್ನಾಟಕ, ಕೇರಳ, ಮಾಹೆ, ಲಕ್ಷದ್ವೀಪಗಳಲ್ಲಿ ಗುಡುಗು ಸಹಿತ ಚದುರಿದ ಮಳೆ ನಿರೀಕ್ಷಿಸಲಾಗಿದೆ. ಹರಿಯಾಣ, ಚಂಡೀಗಢ, ದೆಹಲಿ, ಜಮ್ಮು ಮತ್ತು ಕಾಶ್ಮೀರ, ಲಡಾಖ್, ಪೂರ್ವ ರಾಜಸ್ಥಾನ, ಪಶ್ಚಿಮ ಮಧ್ಯಪ್ರದೇಶ, ಗುಜರಾತ್, ರಾಯಲಸೀಮಾ, ತಮಿಳುನಾಡು, ಪುದುಚೇರಿ, ಕಾರೈಕಲ್, ಕರ್ನಾಟಕದ ಒಳನಾಡಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಇದನ್ನೂ ಓದಿ: Rain Updates: ಒಡಿಶಾದಲ್ಲಿ ಇಂದಿನಿಂದ 1 ವಾರ ಭಾರೀ ಮಳೆ; ಮಹಾರಾಷ್ಟ್ರದಲ್ಲಿ ರೈಲ್ವೆ ಹಳಿಗಳು ಮುಳುಗಡೆ
ಬುಧವಾರ ಮಳೆಯಾಗುವ ಪ್ರದೇಶಗಳು:
ನಾಳೆ (ಸೆ. 21) ಒಡಿಶಾದಲ್ಲಿ ಸಾಕಷ್ಟು ವ್ಯಾಪಕವಾಗಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ಪೂರ್ವ ಉತ್ತರ ಪ್ರದೇಶ, ಪೂರ್ವ ಮಧ್ಯಪ್ರದೇಶ, ವಿದರ್ಭ ಮತ್ತು ತೆಲಂಗಾಣದಲ್ಲಿ ಭಾರೀ ಮಳೆಯಾಗಲಿದೆ. ಜಾರ್ಖಂಡ್‌ನಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಗಂಗಾತೀರದ ಪಶ್ಚಿಮ ಬಂಗಾಳ, ಕೊಂಕಣ, ಗೋವಾ, ಮಧ್ಯ ಮಹಾರಾಷ್ಟ್ರ, ಮರಾಠವಾಡ, ಕರಾವಳಿ ಆಂಧ್ರಪ್ರದೇಶ ಮತ್ತು ಯಾನಂಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ.
ಪಶ್ಚಿಮ ಬಂಗಾಳ, ಸಿಕ್ಕಿಂ, ಬಿಹಾರ, ಉತ್ತರ ಪ್ರದೇಶ, ಉತ್ತರಾಖಂಡ, ಮಧ್ಯಪ್ರದೇಶ, ಕರಾವಳಿ ಕರ್ನಾಟಕ, ಕೇರಳ, ಮಾಹೆ ಮತ್ತು ಲಕ್ಷದ್ವೀಪಗಳಲ್ಲಿ ಗುಡುಗು ಸಹಿತ ಚದುರಿದ ಮಳೆಯಾಗುವ ಸಾಧ್ಯತೆ ಇದೆ. ಹರಿಯಾಣ, ಚಂಡೀಗಢ, ದೆಹಲಿ, ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಲಡಾಖ್, ರಾಜಸ್ಥಾನ, ಗುಜರಾತ್, ರಾಯಲಸೀಮಾ, ತಮಿಳುನಾಡು, ಪುದುಚೇರಿ, ಕಾರೈಕಲ್ ಮತ್ತು ಕರ್ನಾಟಕದ ಒಳನಾಡಿನಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ.