ಈದ್‌ ಹಬ್ಬದಂದು ‘ಮಹಾ ಆರತಿ’ ಬೇಡ ಎಂದ ಎಂಎನ್‌ಎಸ್ ಮುಖ್ಯಸ್ಥ ರಾಜ್ ಠಾಕ್ರೆ

ಇದು ಧಾರ್ಮಿಕ ವಿಚಾರವಲ್ಲ. ಇದು ರಾಷ್ಟ್ರೀಯ ವಿಚಾರ. ಆದರೆ ನೀವು ನಮ್ಮನ್ನು ತಡೆದರೆ ನಾವೂ ನಿಲುವು ತಳೆಯುತ್ತೇವೆ. ಎಲ್ಲಾ ಧ್ವನಿವರ್ಧಕಗಳು ಕಾನೂನಿನಡಿಯಲ್ಲಿಲ್ಲ ಮತ್ತು ಇದು ಕಾನೂನುಬಾಹಿರವಾಗಿದೆ. ಇದು ಅಕ್ರಮ ಎಂದು ಸುಪ್ರೀಂಕೋರ್ಟ್ ಈಗಾಗಲೇ ಹೇಳಿದೆ

ಈದ್‌ ಹಬ್ಬದಂದು ‘ಮಹಾ ಆರತಿ’ ಬೇಡ ಎಂದ ಎಂಎನ್‌ಎಸ್ ಮುಖ್ಯಸ್ಥ ರಾಜ್ ಠಾಕ್ರೆ
ರಾಜ್ ಠಾಕ್ರೆ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:May 02, 2022 | 5:54 PM

ಮಹಾರಾಷ್ಟ್ರ ನವನಿರ್ಮಾಣ ಸೇನೆ (MNS) ಮುಖ್ಯಸ್ಥ ರಾಜ್ ಠಾಕ್ರೆ (Raj Thackeray)ಅವರು  ಮೇ 3 ರಂದು ಅಕ್ಷಯ ತೃತೀಯ ಪ್ರಯುಕ್ತ  ಘೋಷಿಸಲಾದ ‘ಮಹಾ ಆರತಿ’ ಬೇಡ ಎಂದು ಸೋಮವಾರ ತಮ್ಮ ಪಕ್ಷದ ಕಾರ್ಯಕರ್ತರಿಗೆ ಮನವಿ ಮಾಡಿದ್ದಾರೆ. ಮೇ 3ರಂದು ಈದ್ ಹಬ್ಬವಾಗಿದ್ದು(Eid) ಈ ಸಮಯದಲ್ಲಿ ಮುಸ್ಲಿಮರಿಗೆ ಯಾವುದೇ ಅಡಚಣೆಯನ್ನು ಸೃಷ್ಟಿಸಲು ನಾವು ಬಯಸುವುದಿಲ್ಲ ಎಂದಿದ್ದಾರೆ ಠಾಕ್ರೆ. ಧ್ವನಿವರ್ಧಕಗಳ ವಿರುದ್ಧದ ತಮ್ಮ ಅಭಿಯಾನ ಸಾಮಾಜಿಕ ಸಮಸ್ಯೆಯಾಗಿದೆ ಎಂದು ಪುನರುಚ್ಚರಿಸಿದ ಅವರು ಮಂಗಳವಾರ ಟ್ವಿಟರ್ ಮೂಲಕ ತಮ್ಮ ಭವಿಷ್ಯದ ಯೋಜನೆಗಳನ್ನು ಬಹಿರಂಗಪಡಿಸಲಿದ್ದಾರೆ. ಮಸೀದಿಗಳಲ್ಲಿ ಧ್ವನಿವರ್ಧಕಗಳ ಬಳಕೆಯ ಕುರಿತು ನಡೆಯುತ್ತಿರುವ ರಾಜಕೀಯ ಗದ್ದಲದ ನಡುವೆ ಭಾನುವಾರ ಎಚ್ಚರಿಕೆ ನೀಡಿದ ಠಾಕ್ರೆ, ಧ್ವನಿವರ್ಧಕಗಳನ್ನು ತೆಗೆದುಹಾಕದಿದ್ದರೆ ಮೇ4ರಿಂದ ಆಜಾನ್‌ ದನಿಗಿಂತ ಡಬಲ್ ವಾಲ್ಯೂಮ್‌ನಲ್ಲಿ ಹನುಮಾನ್ ಚಾಲೀಸಾವನ್ನು ನುಡಿಸಲಾಗುವುದು ಎಂದು ಹೇಳಿದ್ದರು. ಅದೇ ವೇಳೆ ಎಂಎನ್ಎಸ್ ಮುಖ್ಯಸ್ಥರು ಮಸೀದಿಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು “ಸಾಮಾಜಿಕ ಸಮಸ್ಯೆ ಅದು ಮತ್ತು ಧಾರ್ಮಿಕ ವಿಷಯವಲ್ಲ” ಎಂದು ಹೇಳಿಗದ್ದಾರೆ. ಧ್ವನಿವರ್ಧಕಗಳನ್ನು ತೆಗೆದುಹಾಕಲು ಮೇ 3 ರ ಗಡುವಿನ ಮೇಲೆ ತಾವು ಅಚಲರಾಗಿದ್ದೇವೆ ಎಂದಿದ್ದಾರೆ.

ಧ್ವನಿವರ್ಧಕವು ಧಾರ್ಮಿಕ ವಿಷಯವಲ್ಲ ಆದರೆ ಇದು ರಾಷ್ಟ್ರೀಯ ಸಮಸ್ಯೆಯಾಗಿದೆ ಎಂದು ಹೇಳಿದ ಠಾಕ್ರೆ ಅವರು ನಿಲ್ಲಿಸದಿದ್ದರೆ ನಾವು ಸಹ ನಿಲುವು ತೆಗೆದುಕೊಳ್ಳುತ್ತೇವೆ ಎಂದು ಎಚ್ಚರಿಸಿದರು.

ಇದು ಧಾರ್ಮಿಕ ವಿಚಾರವಲ್ಲ. ಇದು ರಾಷ್ಟ್ರೀಯ ವಿಚಾರ. ಆದರೆ ನೀವು ನಮ್ಮನ್ನು ತಡೆದರೆ ನಾವೂ ನಿಲುವು ತಳೆಯುತ್ತೇವೆ. ಎಲ್ಲಾ ಧ್ವನಿವರ್ಧಕಗಳು ಕಾನೂನಿನಡಿಯಲ್ಲಿಲ್ಲ ಮತ್ತು ಇದು ಕಾನೂನುಬಾಹಿರವಾಗಿದೆ. ಇದು ಅಕ್ರಮ ಎಂದು ಸುಪ್ರೀಂಕೋರ್ಟ್ ಈಗಾಗಲೇ ಹೇಳಿದೆ. ಇದು ಸಂಭಾಜಿನಗರ (ಔರಂಗಾಬಾದ್) ವಿಷಯವಲ್ಲ. ನಾವು ಸಭೆ ನಡೆಸುವಾಗ ಅದು ಶಿಕ್ಷಣ ವಲಯ, ದೇವಸ್ಥಾನದ ವಲಯ ಎಂದು ಹೇಳುತ್ತಾರೆ, ನೀವು ಸಭೆ ನಡೆಸಲು ಸಾಧ್ಯವಿಲ್ಲ ಎಂದು ಹೇಳುತ್ತಾರೆ. ನಿಮಗೆ ಹಕ್ಕು ಕೊಟ್ಟವರು ಯಾರು?” ಎಂದು ಎಂಎನ್‌ಎಸ್ ಮುಖ್ಯಸ್ಥರು ಪ್ರಶ್ನಿಸಿದರು.

ಕಾನೂನು ಕೈಗೆತ್ತಿಕೊಳ್ಳಬೇಡಿ ಎಂದ ಮುಂಬೈ ಮೇಯರ್

ಎಂಎನ್‌ಎಸ್ ಮುಖ್ಯಸ್ಥ ರಾಜ್ ಠಾಕ್ರೆ ಅವರ ಧ್ವನಿವರ್ಧಕ ತೆಗೆದುಹಾಕುವ ಅಂತಿಮ ಗಡುವಿಗೆ  ಪ್ರತಿಕ್ರಿಯಿಸಿದ ಮುಂಬೈ ಮೇಯರ್ ಕಿಶೋರಿ ಪೆಡ್ನೇಕರ್, ಶಬ್ದ ಮಾಲಿನ್ಯ ನಿಯಮಗಳಿಗೆ ಅನುಸಾರವಾಗಿ ಧ್ವನಿವರ್ಧಕಗಳನ್ನು ಬಳಸಬೇಕು. ಯಾರಾದರೂ ನಿಗದಿತ ಡೆಸಿಬಲ್ ಮಿತಿಯನ್ನು ಉಲ್ಲಂಘಿಸಿದರೆ ಅವುಗಳನ್ನು ತೆಗೆದುಹಾಕಬೇಕು ಎಂದು ಸೋಮವಾರ ಹೇಳಿದ್ದಾರೆ. ಆದಾಗ್ಯೂ, ಕಾನೂನನ್ನು ಕೈಗೆತ್ತಿಕೊಳ್ಳಬೇಡಿ ಎಂದು ಅವರು ಮಹಾರಾಷ್ಟ್ರ ನವನಿರ್ಮಾಣ್ ಸೇನಾ (ಎಂಎನ್‌ಎಸ್) ಕಾರ್ಯಕರ್ತರಿಗೆ ಎಚ್ಚರಿಕೆ ನೀಡಿದರು. ಹಾಗೇನಾದರೂ ಆದರೆ ಇಡೀ ಜೀವನ ನ್ಯಾಯಾಲಯದಲ್ಲಿ ಅಲೆಯುವುದರಲ್ಲಿ ವ್ಯರ್ಥವಾಗುತ್ತದೆ ಎಂದಿದ್ದಾರೆ ಪೆಡ್ನೇಕರ್.

ಮುಸ್ಲಿಮರು ಸೇರಿದಂತೆ ಯಾರೂ ಹನುಮಾನ್ ಚಾಲೀಸಾವನ್ನು ವಿರೋಧಿಸಿಲ್ಲ. ಮಂದಿರ, ಮಸೀದಿಗಳಿಂದ ಧ್ವನಿವರ್ಧಕಗಳನ್ನು ತೆಗೆಯಲಾಗುವುದು. ಶಾಂತಿ ಕಾಪಾಡುವಂತೆ ಎಲ್ಲರಿಗೂ ಮನವಿ ಮಾಡುತ್ತೇನೆ .ಕಾನೂನು ಎಲ್ಲರಿಗೂ ಸಮಾನ. ರಾಜ್ ಠಾಕ್ರೆ ತಮ್ಮ ಭಾಷಣದಲ್ಲಿ ಆಕ್ಷೇಪಾರ್ಹ ಹೇಳಿಕೆ ನೀಡಿದ್ದರೆ ಕ್ರಮ ಅವರ ವಿರುದ್ಧ ಕ್ರಮಕೈಗೊಳ್ಳಲಾಗುವುದು” ಎಂದು ಪೆಡ್ನೇಕರ್ ಹೇಳಿರುವುದಾಗಿ ಎಎನ್‌ಐ ಸುದ್ದಿಸಂಸ್ಥೆ ವರದಿ ಮಾಡಿದೆ.

ಭಾನುವಾರ ಮಹಾರಾಷ್ಟ್ರದ ಔರಂಗಾಬಾದ್‌ನಲ್ಲಿ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಠಾಕ್ರೆ, ಮಸೀದಿಗಳಿಂದ ಧ್ವನಿವರ್ಧಕಗಳನ್ನು ತೆಗೆದುಹಾಕಲು ಮೇ 3 ರ ಗಡುವಿನಿಂದ ಹಿಂದೆ ಸರಿಯುವ ಮಾತೇ ಇಲ್ಲ ಎಂದಿದ್ದರು.

ಮಹಾರಾಷ್ಟ್ರದಲ್ಲಿ ಎನ್‌ಸಿಪಿ ಮುಖ್ಯಸ್ಥರು ಜಾತಿ ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪಿಸಿದ ಠಾಕ್ರೆ   ಅವರಿಗೆ ‘ಹಿಂದೂ’ ಪದದ ಬಗ್ಗೆ ಅಲರ್ಜಿ ಇದೆ ಎಂದು ಹೇಳಿದರು. ಉತ್ತರ ಪ್ರದೇಶ ಸರ್ಕಾರವು ಧ್ವನಿವರ್ಧಕಗಳನ್ನು ತೆಗೆದುಹಾಕುತ್ತದೆ. ಆದರೆ ನಮ್ಮ  ಸಂಬಂಧಿ ಉದ್ಧವ್ ಠಾಕ್ರೆ ನೇತೃತ್ವದ ಮಹಾರಾಷ್ಟ್ರ ಸರ್ಕಾರವು ಹಾಗೆ ಮಾಡುವುದನ್ನು ತಡೆಯುತ್ತದೆ ಎಂದು ಎಂಎನ್ಎಸ್ ಮುಖ್ಯಸ್ಥರು ಹೇಳಿದ್ದಾರೆ.

ದೇಶದ ಇತರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

Published On - 5:44 pm, Mon, 2 May 22

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ