ಕೋಟಾದಲ್ಲಿ ಮತ್ತೋರ್ವ ವಿದ್ಯಾರ್ಥಿ ಆತ್ಮಹತ್ಯೆ, ವರ್ಷದಲ್ಲಿ 27ನೇ ಘಟನೆ

ರಾಜಸ್ಥಾನದ ಕೋಟದಲ್ಲಿ ಮತ್ತೋರ್ವ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದು, ಇದು ಈ ವರ್ಷದಲ್ಲಿ ನಡೆದ ಎರಡನೇ ಘಟನೆಯಾಗಿದೆ. ಮೊಹಮ್ಮದ್ ತನ್ವೀರ್ ಎಂದು ಗುರುತಿಸಲಾದ 20 ವರ್ಷದ ಯುವಕ ತನ್ನ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ತನ್ವೀರ್ ಉತ್ತರ ಪ್ರದೇಶದ ಮಹಾರಾಜ್‌ಗಂಜ್ ಮೂಲದವರಾಗಿದ್ದು, ಕೋಟಾದ ಕೋಚಿಂಗ್ ಇನ್‌ಸ್ಟಿಟ್ಯೂಟ್‌ನಲ್ಲಿ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದ ತಂದೆಯೊಂದಿಗೆ ವಾಸಿಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಕೋಟಾದಲ್ಲಿ ಮತ್ತೋರ್ವ ವಿದ್ಯಾರ್ಥಿ ಆತ್ಮಹತ್ಯೆ, ವರ್ಷದಲ್ಲಿ 27ನೇ ಘಟನೆ
ಸಾವು
Follow us
ನಯನಾ ರಾಜೀವ್
|

Updated on: Sep 28, 2023 | 2:11 PM

ರಾಜಸ್ಥಾನದ ಕೋಟದಲ್ಲಿ ಮತ್ತೋರ್ವ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದು, ಇದು ಈ ವರ್ಷದಲ್ಲಿ ನಡೆದ ಎರಡನೇ ಘಟನೆಯಾಗಿದೆ. ಮೊಹಮ್ಮದ್ ತನ್ವೀರ್ ಎಂದು ಗುರುತಿಸಲಾದ 20 ವರ್ಷದ ಯುವಕ ತನ್ನ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ತನ್ವೀರ್ ಉತ್ತರ ಪ್ರದೇಶದ ಮಹಾರಾಜ್‌ಗಂಜ್ ಮೂಲದವರಾಗಿದ್ದು, ಕೋಟಾದ ಕೋಚಿಂಗ್ ಇನ್‌ಸ್ಟಿಟ್ಯೂಟ್‌ನಲ್ಲಿ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದ ತಂದೆಯೊಂದಿಗೆ ವಾಸಿಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ವಿದ್ಯಾರ್ಥಿಯ ಸಾವಿನ ನಿಖರವಾದ ಸಂದರ್ಭಗಳು ಇನ್ನೂ ಸ್ಪಷ್ಟವಾಗಿಲ್ಲ. ವಿದ್ಯಾರ್ಥಿಯು ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದಾನೋ ಇಲ್ಲವೋ ಎಂಬುದು ಕೂಡ ಖಚಿತವಾಗಿಲ್ಲ. ಈ ಬಗ್ಗೆ ತನಿಖೆ ನಡೆಯುತ್ತಿದೆ. ಕಳೆದ ಕೆಲವು ತಿಂಗಳುಗಳಲ್ಲಿ ಆತ್ಮಹತ್ಯೆ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದ್ದು, ಸ್ಥಳೀಯ ಅಧಿಕಾರಿಗಳಲ್ಲಿ ಕಳವಳವನ್ನು ಉಂಟುಮಾಡಿದೆ.

ಸೀಲಿಂಗ್ ಫ್ಯಾನ್‌ಗಳಲ್ಲಿ ಆ್ಯಂಟಿ ಹ್ಯಾಂಗಿಂಗ್ ಸಾಧನಗಳನ್ನು ಅಳವಡಿಸುವುದನ್ನು ಕಡ್ಡಾಯಗೊಳಿಸಿದ್ದಾರೆ. ಎರಡು ತಿಂಗಳ ಅವಧಿಗೆ ಯಾವುದೇ ಪರೀಕ್ಷೆಗಳನ್ನು ನಡೆಸದಂತೆ ತರಬೇತಿ ಸಂಸ್ಥೆಗಳಿಗೆ ನಿರ್ದೇಶನಗಳನ್ನು ನೀಡಿದ್ದಾರೆ.

ಮತ್ತಷ್ಟು ಓದಿ: ಕೋಟಾ: ನೀಟ್ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಇಬ್ಬರು ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣು, ವರ್ಷದಲ್ಲಿ 23ನೇ ಘಟನೆ

ಹಾಸ್ಟೆಲ್‌ಗಳಲ್ಲಿ ಮತ್ತು ಪಿಜಿಗಳಲ್ಲಿ ಉಳಿದುಕೊಳ್ಳುವ ವಿದ್ಯಾರ್ಥಿಗಳಲ್ಲಿ ಖಿನ್ನತೆ ಅಥವಾ ಒತ್ತಡದ ಯಾವುದೇ ಚಿಹ್ನೆಗಳ ಬಗ್ಗೆ ವಾರ್ಡನ್‌ಗಳು, ಮೆಸ್ ಕೆಲಸಗಾರರು ಮತ್ತು ಟಿಫಿನ್ ಸೇವಾ ಪೂರೈಕೆದಾರರು ಸೇರಿದಂತೆ ಹಾಸ್ಟೆಲ್‌ಗಳಲ್ಲಿನ ಸಿಬ್ಬಂದಿಗೆ ಕಣ್ಣಿಡಲು ಸೂಚನೆ ನೀಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ