AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಸ್ಥಾನ: ರಣಥಂಬೋರ್​ ರಾಷ್ಟ್ರೀಯ ಉದ್ಯಾನದಲ್ಲಿ 25 ಹುಲಿಗಳು ನಾಪತ್ತೆ

ರಾಜಸ್ಥಾನದ ರಣಥಂಬೋರ್ ರಾಷ್ಟ್ರೀಯ ಉದ್ಯಾನದಲ್ಲಿ 75 ಹುಲಿಗಳ ಪೈಕಿ 25 ಹುಲಿಗಳು ನಾಪತ್ತೆಯಾಗಿವೆ. ಈ ಘಟನೆಯಿಂದಾಗಿ ವನ್ಯಜೀವಿ ಇಲಾಖೆ ತ್ರಿಸದಸ್ಯ ಸಮಿತಿಯನ್ನು ರಚಿಸಿದೆ. ಸಮಿತಿಯು ಮೇಲ್ವಿಚಾರಣಾ ದಾಖಲೆಗಳನ್ನು ಪರಿಶೀಲಿಸಿ ಲೋಪಗಳನ್ನು ಗುರುತಿಸಿ ಕ್ರಮಕ್ಕೆ ಶಿಫಾರಸು ಮಾಡಲಿದೆ. ಹುಲಿಗಳ ಸಂಖ್ಯೆ ಹೆಚ್ಚಳ ಮತ್ತು ಸ್ಥಳಾವಕಾಶದ ಕೊರತೆಯಿಂದ ಸಂಘರ್ಷ ಉಂಟಾಗಿರಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಜಸ್ಥಾನ: ರಣಥಂಬೋರ್​ ರಾಷ್ಟ್ರೀಯ ಉದ್ಯಾನದಲ್ಲಿ 25 ಹುಲಿಗಳು ನಾಪತ್ತೆ
ಹುಲಿImage Credit source: GEF
ನಯನಾ ರಾಜೀವ್
|

Updated on: Nov 07, 2024 | 9:18 AM

Share

ರಾಜಸ್ಥಾನದಲ್ಲಿರುವ ರಣಥಂಬೋರ್​ ರಾಷ್ಟ್ರೀಯ ಉದ್ಯಾನದಲ್ಲಿರುವ 75 ಹುಲಿಗಳ ಪೈಕಿ 25 ಹುಲಿಗಳು ನಾಪತ್ತೆಯಾಗಿವೆ ಎನ್ನುವ ಮಾಹಿತಿ ಲಭ್ಯವಾಗಿದೆ. ವರ್ಷದಿಂದೀಚೆಗೆ ಈ ಘಟನೆ ನಡೆದಿದೆ, ರಾಜಸ್ಥಾನದ ಮುಖ್ಯ ವನ್ಯಜೀವಿ ವಾರ್ಡನ್ ಪವನ್ ಕುಮಾರ್ ಉಪಾಧ್ಯಾಯ ಅವರು ಉದ್ಯಾನದ ಅಧಿಕಾರಿಗಳಿಗೆ ತಿಳಿಸಿದ್ದಾರೆ. ಈ ಹಿಂದೆ 2019 ಜನವರಿ ಹಾಗೂ 2022 ಜನವರಿ ನಡುವೆ ರಣಥಂಬೋರ್ ರಾಷ್ಟ್ರೀಯ ಉದ್ಯಾನವನದಿಂದ 13 ಹುಲಿಗಳು ನಾಪತ್ತೆಯಾಗಿರುವುದು ವರದಿಯಾಗಿತ್ತು ಎಂದು ಅವರು ತಿಳಿಸಿದ್ದಾರೆ.

ನಾಪತ್ತೆಯಾಗಿರುವ ಹುಲಿಗಳ ಕುರಿತು ತನಿಖೆ ನಡೆಸಲು ವನ್ಯಜೀವಿ ಇಲಾಖೆ ಸೋಮವಾರ ತ್ರಿಸದಸ್ಯ ಸಮಿತಿಯನ್ನು ರಚಿಸಿದೆ. ಈ ಸಮಿತಿಯು ಮೇಲ್ವಿಚಾರಣಾ ದಾಖಲೆಗಳನ್ನು ಪರಿಶೀಲಿಸುತ್ತದೆ ಮತ್ತು ಉದ್ಯಾನದ ಅಧಿಕಾರಿಗಳ ಕಡೆಯಿಂದ ಯಾವುದೇ ಲೋಪ ಕಂಡುಬಂದಲ್ಲಿ ಕ್ರಮಕ್ಕೆ ಶಿಫಾರಸು ಮಾಡುತ್ತದೆ.

ಪ್ರಸ್ತುತ ಮೇ 17 ಮತ್ತು ಸೆಪ್ಟೆಂಬರ್ 30 ರ ನಡುವೆ ನಾಪತ್ತೆಯಾದ 14 ಹುಲಿಗಳ ಮೇಲೆ ಕೇಂದ್ರೀಕೃತವಾಗಿದೆ ಮತ್ತು ಇನ್ನೂ ಯಾವುದೇ ಕುರುಹು ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಮಿತಿಯು ತನ್ನ ವರದಿಯನ್ನು ಎರಡು ತಿಂಗಳೊಳಗೆ ಸಲ್ಲಿಸಲಿದೆ. ನಾವು ಮೇಲ್ವಿಚಾರಣೆಯಲ್ಲಿ ಕೆಲವು ಲೋಪದೋಷಗಳನ್ನು ಗುರುತಿಸಿದ್ದೇವೆ ಎಂದಿದ್ದಾರೆ. ಟ್ರ್ಯಾಪ್ ಕ್ಯಾಮೆರಾಗಳಲ್ಲಿ ಹುಲಿಗಳು ಕಂಡುಬಂದಿಲ್ಲ ಮತ್ತು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಲಾಗಿದೆ.

ಮತ್ತಷ್ಟು ಓದಿ: ಬಾಂಧವಗಢ ಹುಲಿ ಸಂರಕ್ಷಿತಾರಣ್ಯದಲ್ಲಿ 10 ಕಾಡಾನೆಗಳ ಅನುಮಾನಾಸ್ಪದ ಸಾವು

ಒಂದು ವರ್ಷದಲ್ಲಿ ಈ ರೀತಿ ಅತ್ಯಧಿಕ ಸಂಖ್ಯೆಯ ಹುಲಿಗಳು ನಾಪತ್ತೆ ಅಧಿಕೃತವಾಗಿ ವರದಿಯಾಗುತ್ತಿರುವುದು ಇದೇ ಮೊದಲು. ಈ ವರ್ಷ ಮೇ 17 ಹಾಗೂ ಸೆಪ್ಟಂಬರ್ 30ರ ನಡುವೆ ಕಣ್ಮರೆಯಾಗಿರುವ 14 ಹುಲಿಗಳನ್ನು ಪತ್ತೆ ಹಚ್ಚಲು ಈ ಸಮಿತಿ ಗಮನ ಕೇಂದ್ರೀಕರಿಸಲಿದೆ. ನವೆಂಬರ್ 4ರಂದು ಹೊರಡಿಸಲಾದ ಅಧಿಕೃತ ಆದೇಶದಲ್ಲಿ ಹುಲಿಗಳು ನಾಪತ್ತೆಯಾದ ವರದಿಗಳು ರಣಥಂಬೋರ್ ಮೇಲ್ವಿಚಾರಣೆ ಮೌಲ್ಯಮಾಪನಗಳಲ್ಲಿ ಮತ್ತೆ ಮತ್ತೆ ಕಂಡು ಬಂದಿವೆ.

ಉದ್ಯಾನವನದ ಕ್ಷೇತ್ರ ನಿರ್ದೇಶಕರಿಗೆ ಹಲವು ನೋಟಿಸುಗಳನ್ನು ರವಾನಿಸಿದ ಹೊರತಾಗಿಯೂ ಯಾವುದೇ ಗಣನೀಯ ಸುಧಾರಣೆ ಕಂಡು ಬಂದಿಲ್ಲ. ಇದೆಲ್ಲವನ್ನೂ ಗಮನಿಸಿ ರಣಥಂಬೋರ್‌ನಲ್ಲಿ ನಾಪತ್ತೆಯಾಗಿರುವ ಹುಲಿಗಳ ತನಿಖೆಗೆ ವಿಚಾರಣಾ ಸಮಿತಿಯನ್ನು ರೂಪಿಸಲಾಗಿದೆ ಎಂದು ಆದೇಶ ಹೇಳಿದೆ.

ಉದ್ಯಾನದಲ್ಲಿ ಹುಲಿಗಳ ಸಂಖ್ಯೆ ಹೆಚ್ಚಿರುವುದರಿಂದ ಸಂಘರ್ಷ ಉಂಟಾಗಿದೆ ಎಂದು ಉದ್ಯಾನವನದ ಅಧಿಕಾರಿಗಳು ಹೇಳುತ್ತಾರೆ. ಅದರಲ್ಲಿ ಹುಲಿ ಮರಿಗಳೂ ಕೂಡ ಸೇರಿವೆ. ಉದ್ಯಾನದ 900 ಚದರ ಕಿಲೋಮೀಟರ್ ಪ್ರದೇಶವು ಈ ಹುಲಿಗಳಿಗೆ ಸ್ಥಳಾವಕಾಶ ನೀಡುವಲ್ಲಿ ತೊಂದರೆಗಳನ್ನು ಎದುರಿಸುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ