Rajasthan Accident: ರಾಜಸ್ಥಾನದಲ್ಲಿ ಭೀಕರ ಅಪಘಾತ, ಆಟೋ-ಬಸ್​ ನಡುವೆ ಡಿಕ್ಕಿ, 12 ಮಂದಿ ಸಾವು

ರಾಜಸ್ಥಾನದ ಧೋಲ್‌ಪುರದ ಬಾರಿಯಲ್ಲಿ ಆಟೋ-ರಿಕ್ಷಾ ಮತ್ತು ಬಸ್ ನಡುವೆ ಡಿಕ್ಕಿ ಸಂಭವಿಸಿ 12 ಮಂದಿ ಸಾವನ್ನಪ್ಪಿದ್ದಾರೆ. ಮೃತರಲ್ಲಿ ಹೆಚ್ಚಿನವರು ಮಕ್ಕಳು ಮತ್ತು ಮಹಿಳೆಯರು. ಅಪಘಾತಕ್ಕೆ ಒಳಗಾದವರೆಲ್ಲರೂ ಮದುವೆ ಸಮಾರಂಭದಿಂದ ಹಿಂದಿರುಗುತ್ತಿದ್ದರು, ಸದರ್ ಪೊಲೀಸ್ ಠಾಣೆ ವ್ಯಾಪ್ತಿಯ ಸುನಿಪುರ್ ಬಳಿ ಅಪಘಾತ ಸಂಭವಿಸಿದೆ.

Rajasthan  Accident: ರಾಜಸ್ಥಾನದಲ್ಲಿ ಭೀಕರ ಅಪಘಾತ, ಆಟೋ-ಬಸ್​ ನಡುವೆ ಡಿಕ್ಕಿ, 12 ಮಂದಿ ಸಾವು
ಅಪಘಾತImage Credit source: India TV
Follow us
ನಯನಾ ರಾಜೀವ್
|

Updated on: Oct 20, 2024 | 8:27 AM

ರಾಜಸ್ಥಾನದ ಧೋಲ್ಪುರದಲ್ಲಿ ಭಾರಿ ಅಪಘಾತ ಸಂಭವಿಸಿದೆ. ಕರೌಲಿ-ಧೋಲ್ಪುರ್ ಹೆದ್ದಾರಿ NH-11B ಯ ಸುನಿಪುರ್ ಗ್ರಾಮದ ಬಳಿ ನಿನ್ನೆ ರಾತ್ರಿ ಆಟೋ ರಿಕ್ಷಾ ಮತ್ತು ಬಸ್ ನಡುವೆ ಭೀಕರ ಅಪಘಾತ ಸಂಭವಿಸಿ 12 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ.

ಮೃತರಲ್ಲಿ ಐವರು ಮಕ್ಕಳು, ಮೂವರು ಬಾಲಕಿಯರು, ಇಬ್ಬರು ಮಹಿಳೆಯರು ಹಾಗೂ ಇಬ್ಬರು ಪುರುಷರು ಸೇರಿದ್ದಾರೆ. ಅಪಘಾತದ ಬಗ್ಗೆ ಮಾಹಿತಿ ಪಡೆದ ಸ್ಥಳೀಯ ಪೊಲೀಸರು ಸ್ಥಳಕ್ಕೆ ಧಾವಿಸಿ, ಮೃತದೇಹವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.

ಮಾಹಿತಿ ಪ್ರಕಾರ ಆಟೋ ಸವಾರ ಬರಿ ನಗರದ ಗುಮತ್ ಮೊಹಲ್ಲಾ ನಿವಾಸಿ. ಬರೌಲಿ ಗ್ರಾಮದಲ್ಲಿ ಭಾತ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಎಲ್ಲರೂ ಹಿಂತಿರುಗುತ್ತಿದ್ದರು. ಅಷ್ಟರಲ್ಲಿ ಈ ಅವಘಡ ಸಂಭವಿಸಿದೆ. ರಾತ್ರಿ 11 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ.

ಅಪಘಾತದ ನಂತರ ಗುಮತ್ ಪ್ರದೇಶದಲ್ಲಿ ಶೋಕ ಮಡುಗಟ್ಟಿದೆ. ಮೃತರ ಕುಟುಂಬಸ್ಥರು ಅಳಲು ತೋಡಿಕೊಂಡಿದ್ದಾರೆ. ಈ ಹೃದಯವಿದ್ರಾವಕ ಘಟನೆ ಇಡೀ ಪ್ರದೇಶವನ್ನು ಬೆಚ್ಚಿ ಬೀಳಿಸಿದೆ.

ಮತ್ತಷ್ಟು ಓದಿ: ರಾಷ್ಟ್ರೀಯ ಹೆದ್ದಾರಿಯಲ್ಲಿ 3 ಲಾರಿಗಳು, 1 ಸ್ಲೀಪರ್ ಕೋಚ್ ಬಸ್, ಕಾರು ನಡುವೆ ಸರಣಿ ಅಪಘಾತ; ಹಲವರಿಗೆ ಗಾಯ

ಆಡಳಿತ ಪ್ರತಿಕ್ರಿಯೆ ಅಪಘಾತದ ನಂತರ ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದು, ಅಪಘಾತದ ಕಾರಣವನ್ನು ಕಂಡುಹಿಡಿಯಲು ಪ್ರಯತ್ನಿಸಲಾಗುತ್ತಿದೆ. ಸದ್ಯ ಪ್ರಾಥಮಿಕ ತನಿಖೆಯಲ್ಲಿ ಅತಿವೇಗ ಮತ್ತು ಅಜಾಗರೂಕತೆಯೇ ಅಪಘಾತಕ್ಕೆ ಕಾರಣ ಎಂದು ಪರಿಗಣಿಸಲಾಗಿದೆ. ಬಸ್ ಚಾಲಕನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಹಾರ್ದಿಕ್ ಪಾಂಡ್ಯ ತೂಫಾನ್​ಗೆ ಎದುರಾಳಿ ತಂಡ ತತ್ತರ
ಹಾರ್ದಿಕ್ ಪಾಂಡ್ಯ ತೂಫಾನ್​ಗೆ ಎದುರಾಳಿ ತಂಡ ತತ್ತರ
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ