Rajasthan Accident: ರಾಜಸ್ಥಾನದಲ್ಲಿ ಭೀಕರ ಅಪಘಾತ, ಆಟೋ-ಬಸ್​ ನಡುವೆ ಡಿಕ್ಕಿ, 12 ಮಂದಿ ಸಾವು

ರಾಜಸ್ಥಾನದ ಧೋಲ್‌ಪುರದ ಬಾರಿಯಲ್ಲಿ ಆಟೋ-ರಿಕ್ಷಾ ಮತ್ತು ಬಸ್ ನಡುವೆ ಡಿಕ್ಕಿ ಸಂಭವಿಸಿ 12 ಮಂದಿ ಸಾವನ್ನಪ್ಪಿದ್ದಾರೆ. ಮೃತರಲ್ಲಿ ಹೆಚ್ಚಿನವರು ಮಕ್ಕಳು ಮತ್ತು ಮಹಿಳೆಯರು. ಅಪಘಾತಕ್ಕೆ ಒಳಗಾದವರೆಲ್ಲರೂ ಮದುವೆ ಸಮಾರಂಭದಿಂದ ಹಿಂದಿರುಗುತ್ತಿದ್ದರು, ಸದರ್ ಪೊಲೀಸ್ ಠಾಣೆ ವ್ಯಾಪ್ತಿಯ ಸುನಿಪುರ್ ಬಳಿ ಅಪಘಾತ ಸಂಭವಿಸಿದೆ.

Rajasthan  Accident: ರಾಜಸ್ಥಾನದಲ್ಲಿ ಭೀಕರ ಅಪಘಾತ, ಆಟೋ-ಬಸ್​ ನಡುವೆ ಡಿಕ್ಕಿ, 12 ಮಂದಿ ಸಾವು
ಅಪಘಾತ
Image Credit source: India TV

Updated on: Oct 20, 2024 | 8:27 AM

ರಾಜಸ್ಥಾನದ ಧೋಲ್ಪುರದಲ್ಲಿ ಭಾರಿ ಅಪಘಾತ ಸಂಭವಿಸಿದೆ. ಕರೌಲಿ-ಧೋಲ್ಪುರ್ ಹೆದ್ದಾರಿ NH-11B ಯ ಸುನಿಪುರ್ ಗ್ರಾಮದ ಬಳಿ ನಿನ್ನೆ ರಾತ್ರಿ ಆಟೋ ರಿಕ್ಷಾ ಮತ್ತು ಬಸ್ ನಡುವೆ ಭೀಕರ ಅಪಘಾತ ಸಂಭವಿಸಿ 12 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ.

ಮೃತರಲ್ಲಿ ಐವರು ಮಕ್ಕಳು, ಮೂವರು ಬಾಲಕಿಯರು, ಇಬ್ಬರು ಮಹಿಳೆಯರು ಹಾಗೂ ಇಬ್ಬರು ಪುರುಷರು ಸೇರಿದ್ದಾರೆ. ಅಪಘಾತದ ಬಗ್ಗೆ ಮಾಹಿತಿ ಪಡೆದ ಸ್ಥಳೀಯ ಪೊಲೀಸರು ಸ್ಥಳಕ್ಕೆ ಧಾವಿಸಿ, ಮೃತದೇಹವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.

ಮಾಹಿತಿ ಪ್ರಕಾರ ಆಟೋ ಸವಾರ ಬರಿ ನಗರದ ಗುಮತ್ ಮೊಹಲ್ಲಾ ನಿವಾಸಿ. ಬರೌಲಿ ಗ್ರಾಮದಲ್ಲಿ ಭಾತ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಎಲ್ಲರೂ ಹಿಂತಿರುಗುತ್ತಿದ್ದರು. ಅಷ್ಟರಲ್ಲಿ ಈ ಅವಘಡ ಸಂಭವಿಸಿದೆ. ರಾತ್ರಿ 11 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ.

ಅಪಘಾತದ ನಂತರ ಗುಮತ್ ಪ್ರದೇಶದಲ್ಲಿ ಶೋಕ ಮಡುಗಟ್ಟಿದೆ. ಮೃತರ ಕುಟುಂಬಸ್ಥರು ಅಳಲು ತೋಡಿಕೊಂಡಿದ್ದಾರೆ. ಈ ಹೃದಯವಿದ್ರಾವಕ ಘಟನೆ ಇಡೀ ಪ್ರದೇಶವನ್ನು ಬೆಚ್ಚಿ ಬೀಳಿಸಿದೆ.

ಮತ್ತಷ್ಟು ಓದಿ: ರಾಷ್ಟ್ರೀಯ ಹೆದ್ದಾರಿಯಲ್ಲಿ 3 ಲಾರಿಗಳು, 1 ಸ್ಲೀಪರ್ ಕೋಚ್ ಬಸ್, ಕಾರು ನಡುವೆ ಸರಣಿ ಅಪಘಾತ; ಹಲವರಿಗೆ ಗಾಯ

ಆಡಳಿತ ಪ್ರತಿಕ್ರಿಯೆ
ಅಪಘಾತದ ನಂತರ ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದು, ಅಪಘಾತದ ಕಾರಣವನ್ನು ಕಂಡುಹಿಡಿಯಲು ಪ್ರಯತ್ನಿಸಲಾಗುತ್ತಿದೆ. ಸದ್ಯ ಪ್ರಾಥಮಿಕ ತನಿಖೆಯಲ್ಲಿ ಅತಿವೇಗ ಮತ್ತು ಅಜಾಗರೂಕತೆಯೇ ಅಪಘಾತಕ್ಕೆ ಕಾರಣ ಎಂದು ಪರಿಗಣಿಸಲಾಗಿದೆ. ಬಸ್ ಚಾಲಕನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us