ರಾಜಸ್ಥಾನ: ವ್ಯಾನ್ ಹಾಗೂ ಬಸ್ ನಡುವೆ ಡಿಕ್ಕಿ, ಒಂದೇ ಕುಟುಂಬದ 7 ಮಂದಿಯ ದುರ್ಮರಣ
ರಾಜಸ್ಥಾನದ ದ್ವಿದಾನಾ-ಕುಚಾಮನ್ ಜಿಲ್ಲೆಯಲ್ಲಿ ಬಸ್ ಹಾಗೂ ವ್ಯಾನ್ ನಡುವೆ ಮುಖಾಮುಖಿ ಡಿಕ್ಕಿ ಉಂಟಾಗಿದ್ದು, ಒಂದೇ ಕುಟುಂಬದ 7 ಮಂದಿ ಮೃತಪಟ್ಟಿದ್ದಾರೆ. ಇಬ್ಬರು ಗಾಯಗೊಂಡಿರುವ ಕುರಿತು ಪೊಲೀಸರು ಮಾಹಿತಿ ನೀಡಿದ್ದಾರೆ.
ಜೈಪುರ, ಆಗಸ್ಟ್ 13: ರಾಜಸ್ಥಾನದ ದ್ವಿದಾನಾ-ಕುಚಾಮನ್ ಜಿಲ್ಲೆಯಲ್ಲಿ ಬಸ್ ಹಾಗೂ ವ್ಯಾನ್ ನಡುವೆ ಮುಖಾಮುಖಿ ಡಿಕ್ಕಿ ಉಂಟಾಗಿದ್ದು, ಒಂದೇ ಕುಟುಂಬದ 7 ಮಂದಿ ಮೃತಪಟ್ಟಿದ್ದಾರೆ. ಇಬ್ಬರು ಗಾಯಗೊಂಡಿರುವ ಕುರಿತು ಪೊಲೀಸರು ಮಾಹಿತಿ ನೀಡಿದ್ದಾರೆ.
ಖುಂಖುನಾ ಪೊಲೀಸ್ ಠಾಣಾ ವ್ಯಾಪ್ತಿಯ ಬಂಥಾಡಿ ಗ್ರಾಮದ ಬಳಿ ಈ ಘಟನೆ ನಡೆದಿದೆ ಎಂದು ಡಿಎಸ್ಪಿ ಧರಂಚಂದ್ ಬಿಷ್ಣೋಯ್ ಹೇಳಿದ್ದಾರೆ. ಗಾಯಗೊಂಡ ಇಬ್ಬರು ಪ್ರಯಾಣಿಕರನ್ನು ಬಂಗಾರ್ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿಂದ ಅವರನ್ನು ಜೈಪುರಕ್ಕೆ ಕಳುಹಿಸಲಾಗಿದೆ ಎಂದು ಅವರು ಹೇಳಿದರು.
ಮತ್ತಷ್ಟು ಓದಿ: ರಸ್ತೆ ದಾಟುವಾಗ ಬಿಎಂಟಿಸಿ ಬಸ್ ಡಿಕ್ಕಿ: ಪಾದಚಾರಿ ಸ್ಥಳದಲ್ಲೇ ದುರ್ಮರಣ
ಅಪಘಾತದ ಮೃತಪಟ್ಟವರು ವ್ಯಾನ್‌ನಲ್ಲಿ ಮದುವೆ ಸಮಾರಂಭದಲ್ಲಿ ಭಾಗವಹಿಸಲು ಸಿಕಾರ್‌ನಿಂದ ನಾಗೌರ್‌ಗೆ ಪ್ರಯಾಣಿಸುತ್ತಿದ್ದರು. ಅಪಘಾತದ ಹಿಂದಿನ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ