ರಾಜಸ್ಥಾನದ ಜಲಾವರ್ ಜಿಲ್ಲೆಯಲ್ಲಿ ಕಾರು ಮತ್ತು ಟ್ರಕ್ ನಡುವೆ ಡಿಕ್ಕಿ ಸಂಭವಿಸಿ ಕನಿಷ್ಠ ಒಂಬತ್ತು ಜನರು ಸಾವನ್ನಪ್ಪಿದ್ದಾರೆ ಮತ್ತು ಇನ್ನೊಬ್ಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತದ ಸಮಯದಲ್ಲಿ ಸಂತ್ರಸ್ತರು ಮಧ್ಯಪ್ರದೇಶದಲ್ಲಿ ಮದುವೆಗೆ ಹಿಂದಿರುಗುತ್ತಿದ್ದರು.
ರಾಷ್ಟ್ರೀಯ ಹೆದ್ದಾರಿ 52ರ ಅಕ್ಲೇರಾ ಬಳಿ ಶನಿವಾರ ತಡರಾತ್ರಿ ಈ ದುರ್ಘಟನೆ ನಡೆದಿದೆ. ಮೃತರೆಲ್ಲರೂ ಕಾರಿನಲ್ಲಿದ್ದರು.
ಜಲಾವರ್ ಜಿಲ್ಲೆಯ ಅಕ್ಲೇರಾ ಸಮೀಪದ ಪಂಚೋಲಾ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ. 3 ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ವೇಳೆ 6 ಯುವಕರು ಸಾವನ್ನಪ್ಪಿದ್ದಾರೆ. ವ್ಯಾನ್‌ನಲ್ಲಿದ್ದ ಜನರು ಮದುವೆ ಸಮಾರಂಭ ಮುಗಿಸಿ ಹಿಂತಿರುಗುತ್ತಿದ್ದರು.
ಅಪಘಾತದ ಸುದ್ದಿ ತಿಳಿದ ತಕ್ಷಣ ಮದುವೆಯ ಸಂತೋಷವೂ ಶೋಕಕ್ಕೆ ತಿರುಗಿತ್ತು. ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ತನಿಖೆ ಮುಂದುವರಿದಿದೆ. ಪ್ರಾಥಮಿಕ ಮಾಹಿತಿ ಪ್ರಕಾರ ಮೃತಪಟ್ಟ ಯುವಕರು ಬಗ್ರಿ ಸಮುದಾಯದವರು ಎನ್ನಲಾಗಿದೆ. ಅತಿವೇಗದ ಚಾಲನೆಯಿಂದಾಗಿ ಅಪಘಾತ ಸಂಭವಿಸಿದೆ. ಅತಿಯಾದ ವೇಗದಿಂದಾಗಿ ಟ್ರಕ್ ನಿಯಂತ್ರಣ ತಪ್ಪಿ ಎದುರಿನಿಂದ ಬರುತ್ತಿದ್ದ ವ್ಯಾನ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತದ ನಂತರ ಟ್ರಕ್ ಚಾಲಕ ಪರಾರಿಯಾಗಿದ್ದಾನೆ. ಲಾರಿ ಹರ್ಯಾಣ ಮೂಲದ್ದಾಗಿದೆ. ಮೃತರನ್ನು ಗುರುತಿಸುವ ಪ್ರಯತ್ನ ಮುಂದುವರೆದಿದೆ.
ಮತ್ತಷ್ಟು ಓದಿ: ಮಂಗಳೂರು: ಲಾರಿ ಬ್ರೇಕ್ ಫೇಲ್ ಆಗಿ ಸರಣಿ ಅಪಘಾತ; ಕಾರಿನಲ್ಲಿದ್ದವರು ಜಸ್ಟ್ ಮಿಸ್
ಅಪಘಾತದ ಹಿಂದಿನ ಕಾರಣಗಳು ಇನ್ನೂ ತಿಳಿದು ಬಂದಿಲ್ಲ. ಅಪಘಾತದ ಸುದ್ದಿ ತಿಳಿದ ನಂತರ ವಧು-ವರರ ಮನೆಯಲ್ಲಿ ಗದ್ದಲ ಉಂಟಾಯಿತು. ಮದುವೆಗೆ ಬಂದವರೆಲ್ಲರೂ ತಮ್ಮ ಕೆಲಸ ಬಿಟ್ಟು ಘಟನಾ ಸ್ಥಳದ ಕಡೆಗೆ ಓಡಿದರು. ಈ ಅವಘಡದಿಂದ ಮದುವೆಯ ಎರಡೂ ಮನೆಗಳಲ್ಲಿ ಶೋಕ ಮಡುಗಟ್ಟಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ