ರಾಜಸ್ಥಾನ: 52 ಮಕ್ಕಳಿದ್ದ ಶಾಲಾ ಬಸ್​ ಟ್ರಕ್​ಗೆ ಡಿಕ್ಕಿ, ಇಬ್ಬರು ವಿದ್ಯಾರ್ಥಿನಿಯರು ಸಾವು

|

Updated on: Jan 11, 2024 | 11:39 AM

52 ಮಕ್ಕಳಿದ್ದ ಶಾಲಾ ಬಸ್​ ಕಲ್ಲಿದ್ದಲು ತುಂಬಿದ್ದ ಟ್ರಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿನಿಯರು ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಪಾಲಿ ಜಿಲ್ಲೆಯಲ್ಲಿ ನಡೆದಿದೆ. ಘಟನೆಯಲ್ಲಿ 15 ಮಂದಿ ಗಂಭೀರ ಗಾಯಗೊಂಡಿದ್ದಾರೆ. ಮೃತ ವಿದ್ಯಾರ್ಥಿಗಳ ಗುರುತು ಇನ್ನೂ ಪತ್ತೆಯಾಗಿಲ್ಲ. ಸುಮೇರ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ 52 ಶಾಲಾ ವಿದ್ಯಾರ್ಥಿಗಳನ್ನು ಹೊತ್ತ ಬಸ್ ಶಿಕಾರ್‌ಪುರ ಕಡೆಗೆ ತೆರಳುತ್ತಿದ್ದಾಗ ಈ ಭೀಕರ ಅಪಘಾತ ಸಂಭವಿಸಿದೆ.

ರಾಜಸ್ಥಾನ: 52 ಮಕ್ಕಳಿದ್ದ ಶಾಲಾ ಬಸ್​ ಟ್ರಕ್​ಗೆ ಡಿಕ್ಕಿ, ಇಬ್ಬರು ವಿದ್ಯಾರ್ಥಿನಿಯರು ಸಾವು
ಅಪಘಾತ
Image Credit source: Patrika.com
Follow us on

ಜೈಪುರ, ಜನವರಿ 11: 52 ಮಕ್ಕಳಿದ್ದ ಶಾಲಾ ಬಸ್​ ಕಲ್ಲಿದ್ದಲು ತುಂಬಿದ್ದ ಟ್ರಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿನಿಯರು ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಪಾಲಿ ಜಿಲ್ಲೆಯಲ್ಲಿ ನಡೆದಿದೆ. ಘಟನೆಯಲ್ಲಿ 15 ಮಂದಿ ಗಂಭೀರ ಗಾಯಗೊಂಡಿದ್ದಾರೆ. ಮೃತ ವಿದ್ಯಾರ್ಥಿಗಳ ಗುರುತು ಇನ್ನೂ ಪತ್ತೆಯಾಗಿಲ್ಲ. ಸುಮೇರ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ 52 ಶಾಲಾ ವಿದ್ಯಾರ್ಥಿಗಳನ್ನು ಹೊತ್ತ ಬಸ್ ಶಿಕಾರ್‌ಪುರ ಕಡೆಗೆ ತೆರಳುತ್ತಿದ್ದಾಗ ಈ ಭೀಕರ ಅಪಘಾತ ಸಂಭವಿಸಿದೆ.

ಅಪಘಾತದಲ್ಲಿ ಗಾಯಗೊಂಡಿರುವ ಕನಿಷ್ಠ 11 ಶಾಲಾ ಮಕ್ಕಳು, ಮೂವರು ಶಿಕ್ಷಕರು ಮತ್ತು ಬಸ್ ಚಾಲಕನನ್ನು ಚಿಕಿತ್ಸೆಗಾಗಿ ಶಿಯೋಗಂಜ್ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ.

ಈ ಭೀಕರ ಅಪಘಾತದ ಬಗ್ಗೆ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ ತಕ್ಷಣ, ಪೊಲೀಸ್ ಅಧಿಕಾರಿಗಳು ಮತ್ತು ಜಿಲ್ಲೆಯ ಉನ್ನತ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದರು. ಖಾಸಗಿ ಬಸ್‌ನ ಮುಂಭಾಗವು ಸಂಪೂರ್ಣವಾಗಿ ಹಾನಿಗೊಳಗಾಗಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಸುದೀರ್ಘ ಟ್ರಾಫಿಕ್ ಜಾಮ್ ಕೂಡ ಕಂಡುಬಂದಿತ್ತು.

ಮತ್ತಷ್ಟು ಓದಿ: ಆಂಧ್ರಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ, ಓರ್ವ ಸಾವು, ಎಂಎಲ್​ಸಿ ಪರ್ವತರೆಡ್ಡಿಗೆ ಗಂಭೀರ ಗಾಯ

ಅಪಘಾತಕ್ಕೆ ಕಾರಣ
ದಟ್ಟವಾದ ಮಂಜಿನಿಂದಾಗಿ ಗೋಚರತೆ ಕಡಿಮೆಯಾದ ಕಾರಣ, ರಸ್ತೆಯ ಬದಿಯಲ್ಲಿ ನಿಂತಿದ್ದ ಕಲ್ಲಿದ್ದಲು ತುಂಬಿದ ಟ್ರಕ್‌ಗೆ ಬಸ್ ಡಿಕ್ಕಿ ಹೊಡೆದಿದೆ ಎಂದು ಹಲವಾರು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

ಟ್ರಕ್ ಚಾಲಕನ ವಿರುದ್ಧ ನಿರ್ಲಕ್ಷ್ಯಕ್ಕಾಗಿ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಬಸ್ ಚಾಲಕನ ಹೇಳಿಕೆ ಇನ್ನಷ್ಟೇ ದಾಖಲಾಗಬೇಕಿದೆ.

ಸೆಪ್ಟೆಂಬರ್ 2023 ರಲ್ಲಿ, ಬಾರ್ಮರ್ ಜಿಲ್ಲೆಯಲ್ಲಿ ಸ್ವಾಮಿ ವಿವೇಕಾನಂದ ಸರ್ಕಾರಿ ಮಾದರಿ ಶಾಲೆಯ ವಿದ್ಯಾರ್ಥಿ ಮತ್ತು ಪ್ರಾಂಶುಪಾಲರು ಪ್ರಯಾಣಿಸುತ್ತಿದ್ದ ಬಸ್ ನಿಲ್ಲಿಸಿದ್ದ ಡಂಪರ್‌ಗೆ ಡಿಕ್ಕಿ ಹೊಡೆದು ಸಾವನ್ನಪ್ಪಿದರು. ಅಪಘಾತದ ವೇಳೆ 24 ವಿದ್ಯಾರ್ಥಿಗಳು ಮತ್ತು ನಾಲ್ವರು ಸಿಬ್ಬಂದಿ ಬಸ್‌ನಲ್ಲಿದ್ದರು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ