ಅಪರಿಚಿತರೊಂದಿಗೆ ನಾನು ಮಾತನಾಡಲ್ಲ ಎಂದಿದ್ದಕ್ಕೆ ಬಾಲಕಿ ಮೇಲೆ ಆ್ಯಸಿಡ್ ಎರಚಿದ ಫೋಟೊಗ್ರಾಫರ್

ರಾಜಸ್ಥಾನದಲ್ಲಿ 14 ವರ್ಷದ ಬಾಲಕಿ ಮೇಲೆ ಆ್ಯಸಿಡ್ ದಾಳಿ ನಡೆದಿದೆ. ಅಪರಿಚಿತರೊಂದಿಗೆ ಮಾತನಾಡಲು ನಿರಾಕರಿಸಿದ್ದಕ್ಕೆ ಕೋಪಗೊಂಡ ಫೋಟೋಗ್ರಾಫರ್ ಓಂಪ್ರಕಾಶ್ ಬಾಲಕಿ ಮೇಲೆ ಆ್ಯಸಿಡ್ ಎಸೆದಿದ್ದಾನೆ. ಈ ಘಟನೆ ಜೈಪುರದಲ್ಲಿ ನಡೆದಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಸಾರ್ವಜನಿಕರಲ್ಲಿ ಕಾನೂನಿನ ಭಯ ಮೂಡಿಸಲು ಪೊಲೀಸರು ಆತನನ್ನು ಮಾರುಕಟ್ಟೆಯಲ್ಲಿ ಮೆರವಣಿಗೆ ಮಾಡಿದರು. ಆ್ಯಸಿಡ್ ದಾಳಿ ತಡೆಗಟ್ಟಲು ಕಠಿಣ ಕ್ರಮಗಳ ಅಗತ್ಯವಿದೆ.

ಅಪರಿಚಿತರೊಂದಿಗೆ ನಾನು ಮಾತನಾಡಲ್ಲ ಎಂದಿದ್ದಕ್ಕೆ ಬಾಲಕಿ ಮೇಲೆ ಆ್ಯಸಿಡ್ ಎರಚಿದ ಫೋಟೊಗ್ರಾಫರ್
ಓಂಪ್ರಕಾಶ್

Updated on: Jan 20, 2026 | 11:51 AM

ಜೈಪುರ, ಜನವರಿ 20: ಅಪರಿಚಿತರೊಂದಿಗೆ ನಾನು ಮಾತನಾಡುವುದಿಲ್ಲ ಎಂದಿದ್ದಕ್ಕೆ ಕೋಪಗೊಂಡ ಫೋಟೊಗ್ರಾಫರ್ 14 ವರ್ಷದ ಬಾಲಕಿ ಮೇಲೆ ಆ್ಯಸಿಡ್(Acid) ಎರಡಚಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ. 9 ನೇ ತರಗತಿಯ ವಿದ್ಯಾರ್ಥಿನಿ ಶಾಲೆಗೆ ಹೋಗುತ್ತಿದ್ದಾಗ ಘಟನೆ ಸಂಭವಿಸಿದೆ ಎಂದು ವರದಿಯಾಗಿದೆ. ಮೂರು ದಿನಗಳ ಹುಡುಕಾಟದ ನಂತರ ಆ ವ್ಯಕ್ತಿಯನ್ನು ಬಂಧಿಸಲಾಗಿದೆ.

ಪೊಲೀಸ್ ತನಿಖೆಯ ಸಮಯದಲ್ಲಿ, ಆರೋಪಿ, ಚಂದ್ರರಾಮ್ ಮೇಘವಾಲ್ ಅವರ ಪುತ್ರ 19 ವರ್ಷದ ಓಂಪ್ರಕಾಶ್ ಅಲಿಯಾಸ್ ಜಾನಿ, ತಾನು ಫೋಟೊಗ್ರಾಫರ್ ಆಗಿ ಹೋಗಿದ್ದ ಮದುವೆಯಲ್ಲಿ ಆಕೆಯನ್ನು ನೋಡಿದ್ದಾಗಿ ಹೇಳಿದ್ದಾನೆ. ಸ್ವಲ್ಪ ದಿನಗಳ ನಂತರ ಓಂಪ್ರಕಾಶ್ ಹುಡುಗಿಯನ್ನು ಸಂಪರ್ಕಿಸಲು ಪ್ರಯತ್ನಿಸಿದಾಗ, ಆಕೆ ಕೋಪಗೊಂಡು ಗದರಿದ್ದಾಳೆ, ಅದು ಅವನಿಗೆ ನೋವುಂಟು ಮಾಡಿತ್ತು, ನಂತರ ಅವನು ಸೇಡು ತೀರಿಸಿಕೊಳ್ಳಲು ನಿರ್ಧರಿಸಿದ್ದ.

ಶ್ರೀ ಗಂಗಾನಗರ ಜಿಲ್ಲೆಯ ಸುಭಾಷ್ ಪಾರ್ಕ್ ಪ್ರದೇಶದಲ್ಲಿ ತನ್ನ ಶಾಲೆಯ ಕಡೆಗೆ ನಡೆದುಕೊಂಡು ಹೋಗುತ್ತಿದ್ದ ಬಾಲಕಿಯನ್ನು ಓಂಪ್ರಕಾಶ್ ಕಾರು ಚಲಾಯಿಸಿಕೊಂಡು ಹೋಗಿ ಆಕೆಯ ಮೇಲೆ ಆ್ಯಸಿಡ್ ಬಾಟಲಿ ಎಸೆದಿದ್ದಾನೆ. ಬಾಲಕಿಯ ಬಟ್ಟೆ ಮತ್ತು ಬೆರಳಿಗೆ ಸುಟ್ಟ ಗಾಯಗಳಾಗಿದ್ದರೂ, ದೊಡ್ಡ ದುರಂತವೊಂದು ತಪ್ಪಿದೆ.

ಆರೋಪಿಯು ಆ್ಯಸಿಡ್ ದಾಳಿಗೆ ಯೋಜನೆ ರೂಪಿಸಿದ್ದಲ್ಲದೆ, ಪೊಲೀಸರಿಂದ ತಪ್ಪಿಸಿಕೊಳ್ಳಲು ಸಹ ಸಿದ್ಧತೆ ನಡೆಸಿದ್ದ. ಮುಖವನ್ನು ಬಟ್ಟೆ ಮತ್ತು ಹೆಲ್ಮೆಟ್‌ನಿಂದ ಮುಚ್ಚಿಕೊಂಡು, ಬೈಕ್‌ನ ನಂಬರ್ ಪ್ಲೇಟ್ ಅನ್ನು ಮತ್ತೊಂದು ಬಟ್ಟೆಯಿಂದ ಸುತ್ತಿಕೊಂಡಿದ್ದ.

ಮತ್ತಷ್ಟು ಓದಿ: ನಿಮ್ಮ ಕಣ್ಣೆದುರೇ ಆ್ಯಸಿಡ್ ದಾಳಿ ನಡೆದರೆ, ತಕ್ಷಣಕ್ಕೆ ನೀವು ಮಾಡಬೇಕಾಗಿರುವುದು ಏನು? ಇಲ್ಲಿದೆ ಮಾಹಿತಿ

ಈ ಘಟನೆ ಕ್ಯಾಮೆರಾದಲ್ಲಿ ಸೆರೆಯಾಗಿದೆ, ಆದರೆ ಆರೋಪಿ ಮುಖ ಮತ್ತು ವಾಹನದ ನಂಬರ್ ಪ್ಲೇಟ್ ಅನ್ನು ಮುಚ್ಚಿಕೊಂಡಿದ್ದರಿಂದ, ಆ ವ್ಯಕ್ತಿಯನ್ನು ಗುರುತಿಸುವುದು ಪೊಲೀಸರಿಗೆ ಕಷ್ಟಕರವಾಗಿತ್ತು. ಪೊಲೀಸರು ಆ ಪ್ರದೇಶದ ಸಿಸಿಟಿವಿ ದೃಶ್ಯಾವಳಿಗಳನ್ನು ಸ್ಕ್ಯಾನ್ ಮಾಡಿ ಕೊನೆಗೂ ಆತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಯ ಬಗ್ಗೆ ಮಾಹಿತಿ ನೀಡಿದವರಿಗೆ 25,000 ರೂ. ಬಹುಮಾನ ನೀಡುವುದಾಗಿ ಪೊಲೀಸ್ ವರಿಷ್ಠಾಧಿಕಾರಿ ಡಾ. ಅಮೃತಾ ದುಹಾನ್ ಘೋಷಿಸಿದ್ದರು.

ಸೋಮವಾರ ಬಂಧನದ ನಂತರ, ಸಾರ್ವಜನಿಕರಲ್ಲಿ ಕಾನೂನಿನ ಭಯವನ್ನು ಹುಟ್ಟುಹಾಕಲು ಮತ್ತು ಇದೇ ರೀತಿಯ ಘಟನೆಗಳನ್ನು ತಡೆಯಲು ಪೊಲೀಸರು ಆರೋಪಿಗಳನ್ನು ಮಾರುಕಟ್ಟೆಯಲ್ಲಿ ಮೆರವಣಿಗೆ ಮಾಡಿದರು. ಈ ವಿಷಯದ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ