ನಾವು ಗೆಲ್ಲಬೇಕೆಂದರೆ ಹೀಗೆ ಮಾಡಲೇಬೇಕು: ರಾಜಸ್ಥಾನ ವಿಧಾನಸಭೆ ಚುನಾವಣೆಗೆ ಅಶೋಕ್ ಗೆಹ್ಲೋಟ್ ಸಲಹೆ
ಮುಂಬರಲಿರುವ ರಾಜಸ್ಥಾನ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಸಿಎಂ ಅಶೋಕ್ ಗೆಹ್ಲೋಟ್(Ashok Gehlot) ಕೆಲವು ಸಲಹೆಗಳನ್ನು ನೀಡಿದ್ದಾರೆ. ನಾವು ಚುನಾವಣೆಯಲ್ಲಿ ಗೆಲ್ಲಬೇಕೆಂದರೆ ಗೆಲ್ಲಬಲ್ಲ ಅಭ್ಯರ್ಥಿಗಳಿಗೆ ಮಾತ್ರ ಟಿಕೆಟ್ ನೀಡಬೇಕು.
ಮುಂಬರಲಿರುವ ರಾಜಸ್ಥಾನ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಸಿಎಂ ಅಶೋಕ್ ಗೆಹ್ಲೋಟ್(Ashok Gehlot) ಕೆಲವು ಸಲಹೆಗಳನ್ನು ನೀಡಿದ್ದಾರೆ. ನಾವು ಚುನಾವಣೆಯಲ್ಲಿ ಗೆಲ್ಲಬೇಕೆಂದರೆ ಗೆಲ್ಲಬಲ್ಲ ಅಭ್ಯರ್ಥಿಗಳಿಗೆ ಮಾತ್ರ ಟಿಕೆಟ್ ನೀಡಬೇಕು. ಚುನಾವಣೆಗೆ ಎರಡು ತಿಂಗಳ ಮೊದಲು ಟಿಕೆಟ್ ನಿರ್ಧರಿಸಬೇಕು ಎಂದು ಸಲಹೆ ನೀಡಿದರು. ಜತೆಗೆ ರಾಜಕೀಯದಲ್ಲಿ ಯಶಸ್ಸು ಸಾಧಿಸಲು ಪ್ರಮುಖವಾಗಿ ತಾಳ್ಮೆ ಇರಬೇಕು ಎಂದರು.
ಅಶೋಕ್ ಗೆಹ್ಲೋಟ್ ಅವರು ರಾಜಸ್ಥಾನ ಯುವ ಕಾಂಗ್ರೆಸ್‌ನ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಈ ಕುರಿತು ಮಾತನಾಡಿದರು. ಮುಂಬರುವ ವಿಧಾನಸಭಾ ಚುನಾವಣೆಗೆ ಸಿದ್ಧತೆ ನಡೆಸುವಂತೆ ಯುವ ಕಾಂಗ್ರೆಸ್‌ನ ಪದಾಧಿಕಾರಿಗಳು ಹಾಗೂ ಮುಖಂಡರಿಗೆ ಕರೆ ನೀಡಿದ ಅವರು, ಪಕ್ಷವು ಗೆಲ್ಲಬೇಕಾದರೆ ಪಕ್ಷ ತೆಗೆದುಕೊಂಡಿರುವ ನಿರ್ಧಾರದ ಬಗ್ಗೆ ಯಾರೂ ಕೂಡ ಬೇಸರ ಮಾಡಿಕೊಳ್ಳಬಾರದು, ತಾಳ್ಮೆ ಇಟ್ಟುಕೊಂಡು ಯಾರು ಮುಂದುವರೆಯುತ್ತಾರೋ ಅವರು ಉನ್ನತ ಮಟ್ಟಕ್ಕೆ ಹೋಗುತ್ತಾರೆ ಎಂದರು. ಈ ವರ್ಷಾಂತ್ಯದಲ್ಲಿ ರಾಜಸ್ಥಾನದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ.
ಅಶೋಕ್ ಗೆಹ್ಲೋಟ್ ಮತ್ತು ಸಚಿನ್ ಪೈಲಟ್ ಜಗಳದ ನಡುವೆಯೇ ರಾಜಸ್ಥಾನ ಕಾಂಗ್ರೆಸ್ನಲ್ಲಿ ಶೀಘ್ರದಲ್ಲೇ ಮೇಜರ್ ಸರ್ಜರಿ?
ಗೆಲ್ಲಬಹುದಾದ ಅಭ್ಯರ್ಥಿಗಳಿಗೆ ಮಾತ್ರ ಟಿಕೆಟ್ ನೀಡಬೇಕೆಂದು ಪ್ರತಿಪಾದಿಸಿದ ಅಶೋಕ್ ಗೆಹ್ಲೋಟ್, ಪಕ್ಷವು ಚುನಾವಣೆಗೆ ಎರಡು ತಿಂಗಳ ಮೊದಲು ಅಭ್ಯರ್ಥಿಗಳನ್ನು ನಿರ್ಧರಿಸಬೇಕು ಇದರಿಂದ ಅವರು ತಮ್ಮ ಕ್ಷೇತ್ರಗಳಲ್ಲಿ ಹೆಚ್ಚು ಶ್ರಮಿಸಬಹುದು ಎಂದು ಹೇಳಿದರು.
ಚುನಾವಣೆಯ ಸಮಯದಲ್ಲಿ ಅಭ್ಯರ್ಥಿ ಘೋಷಣೆಯಾದರೆ ಬೀದಿ ಬೀದಿಗಳಲ್ಲಿ ಅಲೆದಾಡಿ ಸುಸ್ತಾಗುತ್ತಾರೆ, ಮೊದಲೇ ಅಭ್ಯರ್ಥಿಗಳನ್ನು ಘೋಷಿಸಿದರೆ, ಅವರ ಕ್ಷೇತ್ರದ ಎಲ್ಲಾ ಭಾಗಗಳಿಗೂ ತೆರಳಿ ಜನರ ಜತೆ ಮಾತನಾಡಲು ಸಾಧ್ಯವಾಗುತ್ತದೆ ಎಂದು ಸಲಹೆ ನೀಡಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ