ಕರ್ಣಿ ಸೇನಾ ಅಧ್ಯಕ್ಷ ಸುಖದೇವ್ ಹತ್ಯೆ, ರಾಜಸ್ಥಾನ ಬಂದ್​ಗೆ ಕರೆ

ರಜಪೂತ ಕರ್ಣಿ ಸೇನಾ ಅಧ್ಯಕ್ಷ ಸುಖದೇವ್ ಸಿಂಗ್ ಗೊಗಮೆಡಿ ಅವರನ್ನು ಹತ್ಯೆ ಮಾಡಲಾಗಿದ್ದು, ಈ ಹಿನ್ನೆಲೆಯಲ್ಲಿ ರಾಜಸ್ಥಾನ ಬಂದ್​ಗೆ ಕರೆ ನೀಡಲಾಗಿದೆ. ಇಬ್ಬರು ದುಷ್ಕರ್ಮಿಗಳು ಮನೆಗೆ ನುಗ್ಗಿ ಸುಖದೇವ್ ಮೇಲೆ ಗುಂಡಿನ ದಾಳಿ ನಡೆಸಿದ್ದರು. ಈ ಹತ್ಯೆಯ ಸಿಸಿಟಿವಿ ದೃಶ್ಯಾವಳಿ ಕೂಡ ಹೊರಬಿದ್ದಿದೆ.

ಕರ್ಣಿ ಸೇನಾ ಅಧ್ಯಕ್ಷ ಸುಖದೇವ್ ಹತ್ಯೆ, ರಾಜಸ್ಥಾನ ಬಂದ್​ಗೆ ಕರೆ
ಪ್ರತಿಭಟನೆ
Follow us
ನಯನಾ ರಾಜೀವ್
|

Updated on: Dec 06, 2023 | 8:03 AM

ರಜಪೂತ ಕರ್ಣಿ ಸೇನಾ ಅಧ್ಯಕ್ಷ ಸುಖದೇವ್ ಸಿಂಗ್ ಗೊಗಮೆಡಿ ಅವರನ್ನು ಹತ್ಯೆ ಮಾಡಲಾಗಿದ್ದು, ಈ ಹಿನ್ನೆಲೆಯಲ್ಲಿ ರಾಜಸ್ಥಾನ ಬಂದ್​ಗೆ ಕರೆ ನೀಡಲಾಗಿದೆ. ಇಬ್ಬರು ದುಷ್ಕರ್ಮಿಗಳು ಮನೆಗೆ ನುಗ್ಗಿ ಸುಖದೇವ್ ಮೇಲೆ ಗುಂಡಿನ ದಾಳಿ ನಡೆಸಿದ್ದರು. ಈ ಹತ್ಯೆಯ ಸಿಸಿಟಿವಿ ದೃಶ್ಯಾವಳಿ ಕೂಡ ಹೊರಬಿದ್ದಿದೆ.

ಈ ಹತ್ಯೆಯನ್ನು ಖಂಡಿಸಿ ವಿವಿಧೆಡೆ ಪ್ರತಿಭಟನೆ ನಡೆಸಿದ್ದಾರೆ. ಉದಯಪುರ ವಿಭಾಗ ಬಂದ್‌ಗೆ ಕರೆ ನೀಡಲಾಗಿದೆ. ಆರೋಪಿಗಳನ್ನು ಬಂಧಿಸಿ ಗಲ್ಲು ಶಿಕ್ಷೆ ವಿಧಿಸುವಂತೆ ಪ್ರತಿಭಟನಾಕಾರರು ಒತ್ತಾಯಿಸಿದರು. ರಾಜಸ್ಥಾನದ ಚುರು ಜಿಲ್ಲೆಯಲ್ಲಿ ಸರ್ಕಾರಿ ಬಸ್ ಮೇಲೆ ಕಲ್ಲು ತೂರಾಟ ನಡೆದಿದೆ.

ಇದರಿಂದ ಬಸ್‌ನ ಗಾಜು ಒಡೆದಿದೆ. ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಜನರ ನಡುವೆ ನೂಕುನುಗ್ಗಲು ಉಂಟಾಯಿತು. ಚುರು ಜಿಲ್ಲೆಯ ತಾರಾನಗರದ ಚಲ್ಕೊಯ್ ಗ್ರಾಮದ ಬಳಿ, ಜನರ ಗುಂಪೊಂದು ರಸ್ತೆಯ ಮಧ್ಯದಲ್ಲಿ ಟೈರ್‌ಗಳಿಗೆ ಬೆಂಕಿ ಹಚ್ಚಿ ರಸ್ತೆ ತಡೆ ನಡೆಸಿದರು. ಸುಖದೇವ್ ಸಿಂಗ್ ಹತ್ಯೆ ಖಂಡಿಸಿ ಜೈಪುರ ಬಂದ್‌ಗೆ ಕರೆ ನೀಡಲಾಗಿತ್ತು. ಇಡೀ ಸಮಾಜ ಬೆಂಬಲಿಸಿದೆ. ಶ್ರೀಧರ ಬಾಲಾಜಿ ಟ್ರೇಡ್ ಅಸೋಸಿಯೇಶನ್ ಅಧ್ಯಕ್ಷ ಡಾ.ರವಿ ಜಿಂದಾಲ್ ಬಂದ್‌ಗೆ ಬೆಂಬಲ ನೀಡಿದ್ದಾರೆ.

ಮತ್ತಷ್ಟು ಓದಿ: ಜೈಪುರದಲ್ಲಿ ಹಾಡಹಗಲೇ ಗುಂಡಿಕ್ಕಿ ಕರ್ಣಿ ಸೇನಾ ಅಧ್ಯಕ್ಷ ಸುಖದೇವ್​ ಸಿಂಗ್​ ಹತ್ಯೆ

ಸುಖದೇವ್ ಸಿಂಗ್ ಗೊಗಮೆಡಿ ಹತ್ಯೆಯ ನಂತರ ಪೊಲೀಸ್ ತಂಡ ಆರೋಪಿಗಳ ಹುಡುಕಾಟದಲ್ಲಿ ನಿರತವಾಗಿದೆ ಎಂದು ಡಿಜಿಪಿ ಉಮೇಶ್ ಮಿಶ್ರಾ ಹೇಳಿದ್ದಾರೆ.

ಸುಖದೇವ್ ಹತ್ಯೆಯ ನಂತರ ರಾಜಸ್ಥಾನದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಎಲ್ಲೆಡೆಯಿಂದ ಪ್ರತಿಭಟನೆಯ ಸುದ್ದಿಗಳು ಬರುತ್ತಿವೆ. ಚುರುವಿನಲ್ಲಿ ಸರ್ಕಾರಿ ಬಸ್ ಮೇಲೆ ಕಲ್ಲು ತೂರಾಟ ನಡೆದಿದೆ. ಅಲ್ಲದೆ ಕಲ್ಲುಗಳನ್ನು ಇಟ್ಟು ರಸ್ತೆ ಬಂದ್ ಮಾಡಲಾಗಿತ್ತು. ರಾಜ್‌ಸಮಂದ್‌ನ ಕುಂಭಲ್‌ಗಢದಲ್ಲಿ ಮಾರುಕಟ್ಟೆಗಳನ್ನು ಮುಚ್ಚಲಾಗಿದೆ.

ಡಿಸೆಂಬರ್ 3 ರಂದು ಚುನಾವಣಾ ಫಲಿತಾಂಶಗಳು ಹೊರಬಂದಾಗ ಮತ್ತು ಪ್ರಸ್ತುತ ಕಾಂಗ್ರೆಸ್ ಬಿಜೆಪಿಗೆ ವಿರುದ್ಧ ಸೋತಿತ್ತು, ಕರ್ಣಿ ಸೇನೆಯನ್ನು ನಿರ್ಲಕ್ಷಿಸಿದ್ದರಿಂದ ಕಾಂಗ್ರೆಸ್ ಸೋತಿದೆ ಎಂದು ಗೊಗಮೆಡಿ ಎಕ್ಸ್‌ನಲ್ಲಿ ಬರೆದಿದ್ದರು. ರೋಹಿತ್ ಗೋಡಾರಾ ಗ್ಯಾಂಗ್ ಗೊಗಮಡಿಯನ್ನು ಹತ್ಯೆ ಮಾಡಿದ್ದು ನಾವೇ ಎಂದು ಒಪ್ಪಿಕೊಂಡಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?