Ashok Gehlot: ಸಚಿನ್ ಪೈಲಟ್​ನಂತಹ ದೇಶದ್ರೋಹಿ ಸಿಎಂ ಆಗಲು ಅಸಾಧ್ಯ; ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಟೀಕೆ

ಕಾಂಗ್ರೆಸ್ ಹೈಕಮಾಂಡ್ ಸಚಿನ್ ಪೈಲಟ್ ಅನ್ನು ಮುಖ್ಯಮಂತ್ರಿ ಮಾಡಲು ಸಾಧ್ಯವಿಲ್ಲ. ಆತನೊಬ್ಬ ದೇಶದ್ರೋಹಿ. ಆತನ ಜೊತೆ 10 ಶಾಸಕರು ಕೂಡ ಇಲ್ಲ ಎಂದು ಅಶೋಕ್ ಗೆಹ್ಲೋಟ್ ಟೀಕಿಸಿದ್ದಾರೆ.

Ashok Gehlot: ಸಚಿನ್ ಪೈಲಟ್​ನಂತಹ ದೇಶದ್ರೋಹಿ ಸಿಎಂ ಆಗಲು ಅಸಾಧ್ಯ; ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಟೀಕೆ
ಅಶೋಕ್ ಗೆಹ್ಲೋಟ್
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Nov 24, 2022 | 4:15 PM

ಜೈಪುರ: ದೇಶದ್ರೋಹಿ ಎಂದಿಗೂ ಮುಖ್ಯಮಂತ್ರಿಯಾಗಲು (Rajasthan CM) ಸಾಧ್ಯವಿಲ್ಲ. ಪಕ್ಷದ ಅಧ್ಯಕ್ಷರೊಬ್ಬರು ತಮ್ಮದೇ ಸರ್ಕಾರವನ್ನು ಉರುಳಿಸಲು ಪ್ರಯತ್ನಿಸಿದ್ದು ಭಾರತದಲ್ಲಿ ಇದೇ ಮೊದಲನೆಯದು. ಆತ ಪಕ್ಷದ್ರೋಹಿ ಎಂದು ಸಚಿನ್ ಪೈಲಟ್ (Sachin Pilot) ವಿರುದ್ಧ ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ (Ashok Gehlot) ಹರಿಹಾಯ್ದಿದ್ದಾರೆ.

ಎನ್‌ಡಿಟಿವಿಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಹಲವು ವಿಚಾರಗಳನ್ನು ಪ್ರಸ್ತಾಪಿಸಿರುವ ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಕಾಂಗ್ರೆಸ್ ಹೈಕಮಾಂಡ್ ಸಚಿನ್ ಪೈಲಟ್ ಅನ್ನು ಮುಖ್ಯಮಂತ್ರಿ ಮಾಡಲು ಸಾಧ್ಯವಿಲ್ಲ. ಆತನೊಬ್ಬ ದೇಶದ್ರೋಹಿ. ಆತನ ಜೊತೆ 10 ಶಾಸಕರು ಕೂಡ ಇಲ್ಲ. ಸಚಿನ್ ಪೈಲಟ್ ತನ್ನದೇ ಪಕ್ಷಕ್ಕೆ ವಂಚನೆ ಮಾಡಿರುವ ದೇಶದ್ರೋಹಿ ಎಂದು ಟೀಕಿಸಿದ್ದಾರೆ.

ಇದನ್ನೂ ಓದಿ: ರಾಜಸ್ಥಾನದ ಸಿಎಂ ಅಶೋಕ್ ಗೆಹ್ಲೋಟ್​ರನ್ನು ಶ್ಲಾಘಿಸಿದ ಪ್ರಧಾನಿ ಮೋದಿ

ದೆಹಲಿಯಲ್ಲಿ 19 ಶಾಸಕರೊಂದಿಗೆ ಪಂಚತಾರಾ ರೆಸಾರ್ಟ್​ ಸೇರಿದ್ದ ಸಚಿನ್ ಪೈಲಟ್​​ ಅವರನ್ನು ಒಂದೋ ರಾಜಸ್ಥಾನದ ಸಿಎಂ ಮಾಡಬೇಕು, ಅಥವಾ ಅವರು ಪಕ್ಷ ಬಿಟ್ಟು ಹೋಗಲು ಅನುಮತಿ ನೀಡಬೇಕೆಂಬ ಎರಡೇ ಆಯ್ಕೆ ಕಾಂಗ್ರೆಸ್ ಮುಂದಿತ್ತು. ಆದರೆ, 45 ವರ್ಷದ, 2 ವರ್ಷ ಉಪಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದ ಸಚಿನ್ ಪೈಲಟ್ ಅವರ ವಿರುದ್ಧ ಅವರಿಗಿಂತ 26 ವರ್ಷ ಹಿರಿಯರಾದ, 100ಕ್ಕೂ ಹೆಚ್ಚು ಶಾಸಕರನ್ನು ಹೊಂದಿರುವ ಅಶೋಕ್ ಗೆಹ್ಲೋಟ್ ಅವರು  ಪಂಚತಾರಾ ರೆಸಾರ್ಟ್‌ನಲ್ಲಿ ತಮ್ಮದೇ ಆದ ಶಕ್ತಿ ಪ್ರದರ್ಶನವನ್ನು ನಡೆಸಿದ್ದರು.

ಸರ್ಕಾರವನ್ನು ಪತನಗೊಳಿಸುವ ಸಚಿನ್ ಪೈಲಟ್ ಅವರ ಪ್ರಯತ್ನ ವಿಫಲವಾದ ನಂತರ ಅವರು ಅದರ ಪರಿಣಾಮಗಳನ್ನು ಸ್ವೀಕರಿಸಬೇಕಾಯಿತು. ಕಾಂಗ್ರೆಸ್‌ನೊಂದಿಗೆ ಹೊಂದಾಣಿಕೆ ಮಾಡಿಕೊಂಡ ಅವರು ಕೊನೆಗೆ ರಾಜಸ್ಥಾನದ ಕಾಂಗ್ರೆಸ್‌ನ ಅಧ್ಯಕ್ಷ ಸ್ಥಾನದಿಂದಲೂ ಕೆಳಗಿಳಿಯಬೇಕಾಯಿತು. ಈ ಕುರಿತು ವಿಶೇಷ ಸಂದರ್ಶನದಲ್ಲಿ ಅಶೋಕ್ ಗೆಹ್ಲೋಟ್ ಮಾತನಾಡಿದ್ದಾರೆ.

ಇದನ್ನೂ ಓದಿ: ರಾಜಸ್ಥಾನದಲ್ಲಿ ಬಗೆಹರಿಯದ ನಾಯಕತ್ವ ಬಿಕ್ಕಟ್ಟು: ಕಾಂಗ್ರೆಸ್​ಗೆ​ ದುಸ್ವಪ್ನವಾಗಿ ಕಾಡುತ್ತಿರುವ ಪಂಜಾಬ್ ವೈಫಲ್ಯದ ನೆನಪು

ಆಗಿನ ರಾಜಕೀಯ ಬಿಕ್ಕಟ್ಟಿನ ಸಮಯದಲ್ಲಿ ಸಚಿನ್ ಪೈಲಟ್ ದೆಹಲಿಯಲ್ಲಿ ಇಬ್ಬರು ಹಿರಿಯ ಕೇಂದ್ರ ಸಚಿವರನ್ನು ಭೇಟಿಯಾಗಿದ್ದರು. ಅಮಿತ್ ಶಾ ಮತ್ತು ಧರ್ಮೇಂದ್ರ ಪ್ರಧಾನ್ ಸಚಿನ್ ಪೈಲಟ್ ಅವರೊಂದಿಗೆ ದೆಹಲಿಯಲ್ಲಿ ಸಭೆ ನಡೆಸಿದ್ದರು. ಅವರೇ ಫಂಡಿಂಗ್ ಕೂಡ ಮಾಡಿದ್ದರು ಎಂದು ಅಶೋಕ್ ಗೆಹ್ಲೋಟ್ ಆರೋಪಿಸಿದ್ದಾರೆ.

ಆದರೆ, ಅಶೋಕ್ ಗೆಹ್ಲೋಟ್ ಅವರ ಹೇಳಿಕೆ ಆಧಾರರಹಿತ ಎಂದು ಬಿಜೆಪಿ ನಿರಾಕರಿಸಿದೆ. ಕಾಂಗ್ರೆಸ್ ರಾಜಸ್ಥಾನದಲ್ಲಿ ತನ್ನ ಸ್ಥಾನವನ್ನು ಕಳೆದುಕೊಳ್ಳುತ್ತಿದೆ. ಅದಕ್ಕಾಗಿಯೇ ಗೆಹ್ಲೋಟ್ ಹತಾಶೆಗೊಂಡಿದ್ದಾರೆ. ಗೆಹ್ಲೋಟ್ ತನ್ನ ವೈಫಲ್ಯಕ್ಕೆ ಬಿಜೆಪಿಯನ್ನು ದೂಷಿಸುತ್ತಿದ್ದಾರೆ ಎಂದು ಬಿಜೆಪಿಯ ರಾಜಸ್ಥಾನ ಮುಖ್ಯಸ್ಥ ಸತೀಶ್ ಪುನಿಯಾ ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:13 pm, Thu, 24 November 22

‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು