ಪಂಜಾಬ್ ಕಾಂಗ್ರೆಸ್ ಬಿಕ್ಕಟ್ಟು ಬಗ್ಗೆ ಟ್ವೀಟ್ ಮಾಡಿದ್ದ ರಾಜಸ್ಥಾನದ ಸಿಎಂ ಅಶೋಕ್ ಗೆಹ್ಲೋಟ್ ಸಹಾಯಕ ರಾಜೀನಾಮೆ

TV9 Digital Desk

| Edited By: Rashmi Kallakatta

Updated on: Sep 19, 2021 | 2:21 PM

Lokesh Sharma: ಬಲಿಷ್ಠ ವ್ಯಕ್ತಿಯನ್ನು ಅಸಹಾಯಕರನ್ನಾಗಿಸುವುದು ಮತ್ತು ಸಾಧಾರಣ ವ್ಯಕ್ತಿಯನ್ನು ಉನ್ನತ ಸ್ಥಾನಕ್ಕೆ ಏರಿಸಲಾಗಿದೆ ಎಂದು ಶರ್ಮಾ ಟ್ವೀಟ್ ಮಾಡಿದ್ದರು. ಈ ಟ್ವೀಟ್ ಗೆ ಕ್ಷಮೆಯಾಚಿಸಿ ರಾಜಸ್ಥಾನ ಮುಖ್ಯಮಂತ್ರಿಗೆ ವಿಶೇಷ ಕರ್ತವ್ಯದಲ್ಲಿರುವ ಅಧಿಕಾರಿ ಶನಿವಾರ ರಾತ್ರಿ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ.

ಪಂಜಾಬ್ ಕಾಂಗ್ರೆಸ್ ಬಿಕ್ಕಟ್ಟು ಬಗ್ಗೆ ಟ್ವೀಟ್ ಮಾಡಿದ್ದ ರಾಜಸ್ಥಾನದ ಸಿಎಂ ಅಶೋಕ್ ಗೆಹ್ಲೋಟ್ ಸಹಾಯಕ ರಾಜೀನಾಮೆ
ಲೋಕೇಶ್ ಶರ್ಮಾ
Follow us

ಜೈಪುರ್: ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರ ಒಎಸ್‌ಡಿ (Officer on Special Duty) ಲೋಕೇಶ್ ಶರ್ಮಾ ಅವರು ಶನಿವಾರ ರಾತ್ರಿ ರಾಜೀನಾಮೆ ಸಲ್ಲಿಸಿದ್ದಾರೆ. ಪಂಜಾಬ್‌ನಲ್ಲಿ ನಾಯಕತ್ವದ ಬದಲಾವಣೆಗೆ ಕಾಂಗ್ರೆಸ್ ವಿರುದ್ಧ ಪರೋಕ್ಷ ಟೀಕೆ ಮಾಡಿದ ಟ್ವೀಟ್ ಮಾಡಿದ ಕೆಲವೇ ಗಂಟೆಗಳಲ್ಲಿ ಶರ್ಮಾ ರಾಜೀನಾಮೆ ನೀಡಿದ್ದಾರೆ. ಬಲಿಷ್ಠ ವ್ಯಕ್ತಿಯನ್ನು ಅಸಹಾಯಕರನ್ನಾಗಿಸುವುದು ಮತ್ತು ಸಾಧಾರಣ ವ್ಯಕ್ತಿಯನ್ನು ಉನ್ನತ ಸ್ಥಾನಕ್ಕೆ ಏರಿಸಲಾಗಿದೆ ಎಂದು ಶರ್ಮಾ ಟ್ವೀಟ್ ಮಾಡಿದ್ದರು. ಈ ಟ್ವೀಟ್ ಗೆ ಕ್ಷಮೆಯಾಚಿಸಿ ರಾಜಸ್ಥಾನ ಮುಖ್ಯಮಂತ್ರಿಗೆ ವಿಶೇಷ ಕರ್ತವ್ಯದಲ್ಲಿರುವ ಅಧಿಕಾರಿ ಶನಿವಾರ ರಾತ್ರಿ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ.

ಶರ್ಮಾ ಅವರು ಒಂದು ದಶಕದಿಂದಲೂ ಗೆಹ್ಲೋಟ್‌ನೊಂದಿಗೆ ಸಂಬಂಧ ಹೊಂದಿದ್ದಾರೆ ಮತ್ತು ಅವರು ತಮ್ಮ ಸಾಮಾಜಿಕ ಮಾಧ್ಯಮದ ಹೊಣೆ ಹೊತ್ತಿದ್ದಾರೆ. ಗೆಹ್ಲೋಟ್ ಡಿಸೆಂಬರ್ 2018 ರಲ್ಲಿ ಅಧಿಕಾರಕ್ಕೆ ಬಂದ ನಂತರ ಅವರನ್ನು ಓಎಸ್‌ಡಿ ಮಾಡಲಾಯಿತು.

“ಮಜಬೂತ್ ಕೋ ಮಜಬೂರ್, ಮಾಮೂಲಿ ಕೋ ಮಗರೂರ್ ಕಿಯಾ ಜಾಯೆ … ಬಾದ್ ಹಿ ಖೇತ್ ಕೋ ಖಾಯ್, ಉಸ್ ಫಸಲ್ ಕೋ ಕೌನ್ ಬಚಾಯೆ! (ಅವರು ಪ್ರಬಲರನ್ನು ದುರ್ಬಲರನ್ನಾಗಿಸುತ್ತಾರೆ, ಅವರು ಜನರನ್ನು ಬಲವಂತವಾಗಿ ಒತ್ತಾಯಿಸುತ್ತಾರೆ, ಅಂತಿಮವಾಗಿ ಬೇಲಿಯು ಹೊಲವನ್ನು ತಿನ್ನುತ್ತದೆ, ಅಂತಹ ಬೆಳೆಯನ್ನು ಯಾರು ಉಳಿಸಬಹುದು) ಎಂದು ಶರ್ಮಾ ಟ್ವೀಟ್ ಮಾಡಿದ್ದರು.

ರಾಜೀನಾಮೆ ಪತ್ರದಲ್ಲಿ ಶರ್ಮಾ ಅವರು 2010 ರಿಂದ ಟ್ವಿಟರ್‌ನಲ್ಲಿ ಸಕ್ರಿಯರಾಗಿದ್ದಾರೆ ಮತ್ತು ಪಕ್ಷದ ವ್ಯಾಪ್ತಿಯನ್ನು ಮೀರಿ ಟ್ವೀಟ್ ಮಾಡಿಲ್ಲ ಎಂದು ಹೇಳಿದ್ದಾರೆ. ಶರ್ಮಾ ಅವರು ಶ ಗೆಹ್ಲೋಟ್ ಅವರಿಂದ ಒಎಸ್‌ಡಿ ಜವಾಬ್ದಾರಿಯನ್ನು ನೀಡಿದ ನಂತರ ಯಾವುದೇ ರಾಜಕೀಯ ಟ್ವೀಟ್ ಅನ್ನು ಪೋಸ್ಟ್ ಮಾಡಿಲ್ಲ ಎಂದು ಹೇಳಿದರು.

ಅದೇ ವೇಳೆ ತನ್ನ ಟ್ವೀಟ್ ಪಕ್ಷದ ಹೈಕಮಾಂಡ್ ಮತ್ತು ರಾಜ್ಯ ಸರ್ಕಾರವನ್ನು ನೋಯಿಸಿದರೆ ಕ್ಷಮೆಯಾಚಿಸುತ್ತೇವೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: Punjab Politics ಸಿಖ್ ನಾಯಕರೇ ಪಂಜಾಬ್ ಸಿಎಂ ಆಗಬೇಕು; ಮುಖ್ಯಮಂತ್ರಿ ಪ್ರಸ್ತಾಪ ತಿರಸ್ಕರಿಸಿದ ಅಂಬಿಕಾ ಸೋನಿ

ಇದನ್ನೂ ಓದಿ:  Punjab Politics: ಇಂದು ಪಂಜಾಬ್​ನಲ್ಲಿ ಮಹತ್ವದ ಕಾಂಗ್ರೆಸ್ ಸಭೆ; ಸಂಜೆಯೊಳಗೆ ನೂತನ ಸಿಎಂ ಘೋಷಣೆ ಸಾಧ್ಯತೆ

(Rajasthan Chief Minister Ashok Gehlot’s OSD Lokesh Sharma resigns after indirect criticism of the Punjab Congress)

ತಾಜಾ ಸುದ್ದಿ

Related Stories

Click on your DTH Provider to Add TV9 Kannada