Sign In

By signing in or creating an account, you agree with Associated Broadcasting Company's Terms & Conditions and Privacy Policy.

4 ವರ್ಷಗಳಿಂದ ವಿದ್ಯಾರ್ಥಿಗಳ ಮೇಲೆ ಮೌಲ್ವಿಯಿಂದ ಲೈಂಗಿಕ ದೌರ್ಜನ್ಯ, ಮಕ್ಕಳೆಲ್ಲಾ ಸೇರಿ ಕೊಂದೇ ಬಿಟ್ರು

ರಾಜಸ್ಥಾನದ ಮಸೀದಿಯ ಮೌಲ್ವಿ ಹತ್ಯೆಗೆ ಸಂಬಂಧಿಸಿದಂತೆ ಪ್ರಮುಖ ವಿಚಾರಗಳು ಹೊರಬಿದ್ದಿವೆ. ಮೌಲ್ವಿಯನ್ನು ಕೊಂದಿದ್ದು ಮಕ್ಕಳೇ ಎಂಬುದು ತಿಳಿದುಬಂದಿದೆ.

4 ವರ್ಷಗಳಿಂದ ವಿದ್ಯಾರ್ಥಿಗಳ ಮೇಲೆ ಮೌಲ್ವಿಯಿಂದ ಲೈಂಗಿಕ ದೌರ್ಜನ್ಯ, ಮಕ್ಕಳೆಲ್ಲಾ ಸೇರಿ ಕೊಂದೇ ಬಿಟ್ರು
ಬಂಧನ
Follow us
ನಯನಾ ರಾಜೀವ್
|

Updated on: May 13, 2024 | 9:35 AM

ರಾಜಸ್ಥಾನದ ಅಜ್ಮೀರದ ಮೊಹಮ್ಮದಿ ಮದೀನಾ ಮಸೀದಿ ಮೌಲ್ವಿ ಮೊಹಮ್ಮದ್​ ತಾಹಿರ್​ನನ್ನು ವಿದ್ಯಾರ್ಥಿಗಳು ಹತ್ಯೆ(Murder) ಮಾಡಿರುವ ಘಟನೆ ನಡೆದಿದೆ. ಮೌಲ್ವಿ ಕಳೆದ 4 ವರ್ಷಗಳಿಂದ ತಮ್ಮ ಮೇಲೆ ನಿರಂತರ ಅತ್ಯಾಚಾರವೆಸಗುತ್ತಿದ್ದರು ಹೀಗಾಗಿ ನಾವೇ ಅವರನ್ನು ಕೊಲೆ ಮಾಡಿದ್ದೇವೆ ಎಂದು ವಿದ್ಯಾರ್ಥಿಗಳು ಒಪ್ಪಿಕೊಂಡಿದ್ದಾರೆ. ರಾಜಸ್ಥಾನದ ಅಜ್ಮೀರ್‌ನಲ್ಲಿ ಮೌಲಾನಾ ಹತ್ಯೆ ಆರೋಪದ ಮೇಲೆ ಆರು ಅಪ್ರಾಪ್ತ ಬಾಲಕರನ್ನು ಬಂಧಿಸಲಾಗಿದೆ.

ಮೌಲಾನಾ ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದರು ಎಂದು ಹೇಳಲಾಗುತ್ತಿದೆ. ಮೌಲಾನಾ ಮೊಬೈಲ್‌ನಲ್ಲಿ ಅಶ್ಲೀಲ ವಿಡಿಯೋಗಳನ್ನು ತೋರಿಸಿ ಅತ್ಯಾಚಾರವೆಸಗುತ್ತಿದ್ದರಯ, ಇದರಿಂದ ಬೇಸರಗೊಂಡ ಮಕ್ಕಳು ಈ ದೊಡ್ಡ ಹೆಜ್ಜೆ ಇಟ್ಟಿದ್ದಾರೆ. ಇಂಡಿಯನ್ ಎಕ್ಸ್‌ಪ್ರೆಸ್‌ನ ಸುದ್ದಿ ಪ್ರಕಾರ, ಈ ಘಟನೆ ಏಪ್ರಿಲ್ 26 ರ ರಾತ್ರಿ ನಡೆದಿದೆ. ಮೂವತ್ತು ವರ್ಷದ ಮೌಲಾನಾ ಮೊಹಮ್ಮದ್ ತಾಹಿರ್ ಎಂಬಾತನನ್ನು ಹೊಡೆದು ಕೊಂದಿದ್ದಾರೆ.

ಮೌಲಾನಾ ಮೊಬೈಲ್ ನಲ್ಲಿ ಮಕ್ಕಳಿಗೆ ಅಶ್ಲೀಲ ಚಿತ್ರಗಳನ್ನು ತೋರಿಸಿ ಬಳಿಕ ಅತ್ಯಾಚಾರ ಎಸಗುತ್ತಿದ್ದರು. ಕಳೆದ ನಾಲ್ಕು ವರ್ಷಗಳಿಂದ ಇದನ್ನೇ ಮಾಡುತ್ತಿದ್ದರು. ಇದರಿಂದ ಮನನೊಂದ ಮಕ್ಕಳು ರಾಯತಾದಲ್ಲಿ ನಿದ್ರೆ ಮಾತ್ರೆ ಬೆರೆಸಿ ಮೌಲಾನಾಗೆ ನೀಡಿದ್ದಾರೆ.

ಮತ್ತಷ್ಟು ಓದಿ: ಅನೈತಿಕ ಸಂಬಂಧ: ಮನಬಂದಂತೆ ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ

ಮಲಗಿದ್ದ ಆತನ ತಲೆಗೆ ದೊಣ್ಣೆಯಿಂದ ಹೊಡೆದಿದ್ದಾರೆ, ಬಳಿಕ ಹಗ್ಗದಿಂದ ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ. ಅಜ್ಮೀರ್‌ನ ಕಾಂಚನ್ ನಗರದಲ್ಲಿರುವ ಮೊಹಮ್ಮದಿ ಮದೀನಾ ಮಸೀದಿಗೆ ಸೇರಿದವರು. ಮೌಲಾನಾ ತಮ್ಮನ್ನು ಲೈಂಗಿಕವಾಗಿ ಬಳಸಿಕೊಳ್ಳುತ್ತಿದ್ದರು ಎಂದು ಮಕ್ಕಳು ಹೇಳಿದ್ದು, ಕೊಲೆ ಮಾಡಿದ್ದನ್ನು ಒಪ್ಪಿಕೊಂಡರು. ಇದೀಗ ಈ ಸಂಬಂಧ 6 ಅಪ್ರಾಪ್ತ ಬಾಲಕರನ್ನು ಬಂಧಿಸಲಾಗಿದೆ.

ಲೈಂಗಿಕ ದೌರ್ಜನ್ಯದ ಬಗ್ಗೆ ಯಾರಿಗಾದರೂ ಹೇಳಲು ಪ್ರಯತ್ನಿಸಿದರೆ, ಮೌಲ್ವಿ ತಮ್ಮನ್ನು ಕೊಲ್ಲುವುದಾಗಿ ಬೆದರಿಕೆ ಹಾಕುತ್ತಿದ್ದರು ಎಂದು ಮಕ್ಕಳು ಹೇಳಿದ್ದಾರೆ. ಮೌಲಾನಾ ಜೊತೆ 15 ಮಕ್ಕಳು ವಾಸಿಸುತ್ತಿದ್ದರು. ಅದರಲ್ಲಿ 10 ಮಕ್ಕಳು ಈದ್‌ ದಿನ ತಮ್ಮ ಮನೆಗೆ ಹೋಗಿದ್ದರು. ಮತ್ತು ಕೇವಲ ಐದು ಮಕ್ಕಳು ಮಾತ್ರ ಅಲ್ಲಿಯೇ ಇದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ
ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ
ಚೆನ್ನೈನಲ್ಲೂ ಕೊಹ್ಲಿ ಫ್ಯಾನ್ಸ್​ದೇ ಹವಾ; ವಿಡಿಯೋ ನೋಡಿ
ಚೆನ್ನೈನಲ್ಲೂ ಕೊಹ್ಲಿ ಫ್ಯಾನ್ಸ್​ದೇ ಹವಾ; ವಿಡಿಯೋ ನೋಡಿ
ಜಾಮೀನು ಸಿಕ್ಕರೂ ಪರಪ್ಪನ ಅಗ್ರಹಾರದ ಕಡೆಗೆ ವಿನಯ್, ರಜತ್
ಜಾಮೀನು ಸಿಕ್ಕರೂ ಪರಪ್ಪನ ಅಗ್ರಹಾರದ ಕಡೆಗೆ ವಿನಯ್, ರಜತ್
ಕೊಲೆಗೆ ಸುಪಾರಿ ಮತ್ತು ಹನಿ ಟ್ರ್ಯಾಪ್-ಎರಡೂ ಭಿನ್ನ ಪ್ರಕರಣಗಳು: ರಾಜೇಂದ್ರ
ಕೊಲೆಗೆ ಸುಪಾರಿ ಮತ್ತು ಹನಿ ಟ್ರ್ಯಾಪ್-ಎರಡೂ ಭಿನ್ನ ಪ್ರಕರಣಗಳು: ರಾಜೇಂದ್ರ
ಯತ್ನಾಳ್ ಸಾಹೇಬರು ಇಲ್ಲಾಂದ್ರೆ ನಾವೂ ಪಕ್ಷದಲ್ಲಿಲ್ಲ: ಪದಾಧಿಕಾರಿಗಳು
ಯತ್ನಾಳ್ ಸಾಹೇಬರು ಇಲ್ಲಾಂದ್ರೆ ನಾವೂ ಪಕ್ಷದಲ್ಲಿಲ್ಲ: ಪದಾಧಿಕಾರಿಗಳು
Instant Karma: ನಾಯಿಗೆ ಒದೆಯಲು ಹೋಗಿ ಹೇಗ್ ಬಿದ್ದಾ ನೋಡಿ
Instant Karma: ನಾಯಿಗೆ ಒದೆಯಲು ಹೋಗಿ ಹೇಗ್ ಬಿದ್ದಾ ನೋಡಿ
ಮ್ಯಾನ್ಮಾರ್‌ನಲ್ಲಿ ಭೀಕರ ಭೂಕಂಪ: ಭಾರತದ ಈಶಾನ್ಯ ರಾಜ್ಯಗಳಿಗಿಲ್ಲ ಆತಂಕ
ಮ್ಯಾನ್ಮಾರ್‌ನಲ್ಲಿ ಭೀಕರ ಭೂಕಂಪ: ಭಾರತದ ಈಶಾನ್ಯ ರಾಜ್ಯಗಳಿಗಿಲ್ಲ ಆತಂಕ