AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಲ್ಹಾದ್‌ ಜೋಶಿ ಕಾರ್ಯವೈಖರಿ ಹೊಗಳಿದ ಕಾಂಗ್ರೆಸ್ ನಾಯಕ ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್

ರಾಜಸ್ಥಾನ ಸಿಎಂ ಅಶೋಕ ಗೆಹ್ಲೋಟ್ ಅವರು ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರ ಕಾರ್ಯವೈಖರಿಗಳನ್ನು ಕೊಂಡಾಡಿದ್ದಾರೆ. ರಾಜಸ್ಥಾನ ರಾಜ್ಯದ ವಿದ್ಯುತ್ ಸಮಸ್ಯೆ ಬಗೆಹರಿಸುವಲ್ಲಿ ರಚನಾತ್ಮಕ ಹಾಗೂ ಧನಾತ್ಮಕ ಸ್ಪಂದನೆ ನೀಡಿದ್ದಾರೆ ಎಂದು ಹೇಳಿದ್ದಾರೆ.

ಪ್ರಲ್ಹಾದ್‌ ಜೋಶಿ ಕಾರ್ಯವೈಖರಿ ಹೊಗಳಿದ ಕಾಂಗ್ರೆಸ್ ನಾಯಕ ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್
ಪ್ರಲ್ಹಾದ್‌ ಜೋಶಿ ಕಾರ್ಯವೈಖರಿ ಹೊಗಳಿದ ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್
TV9 Web
| Updated By: Rakesh Nayak Manchi|

Updated on:Oct 14, 2022 | 9:20 AM

Share

ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಕಲ್ಲಿದ್ದಲು ಮತ್ತು ಗಣಿ ಇಲಾಖೆಯನ್ನ ನಡೆಸುತ್ತಿರುವ ಆಡಳಿತ ರೀತಿಯನ್ನು ಕಾಂಗ್ರೆಸ್ ಮುಖಂಡರೂ ಆಗಿರುವ ರಾಜಸ್ಥಾನ ಸಿಎಂ ಅಶೋಕ ಗೆಹ್ಲೋಟ್ ಅವರು ಹೊಗಳಿದ್ದಾರೆ. ಪ್ರಲ್ಹಾದ ಜೋಶಿಯವರು ರಾಜಸ್ಥಾನ ರಾಜ್ಯದ ವಿದ್ಯುತ್ ಸಮಸ್ಯೆ ಬಗೆಹರಿಸುವಲ್ಲಿ ರಚನಾತ್ಮಕ ಹಾಗೂ ಧನಾತ್ಮಕ ಸ್ಪಂದನೆ ನೀಡಿದ್ದಾರೆ ಎಂದು ಆಶೋಕ್ ಗೆಹ್ಲೋಟ್ ಹೇಳಿದ್ದಾರೆ. ಕೇಂದ್ರದ ಕೋಲ್ ಇಂಡಿಯಾ ಲಿಮಿಟೆಡ್ ಹಾಗೂ ರಾಜಸ್ಥಾನ ವಿದ್ಯುತ್ ಉತ್ಪಾದನಾ ನಿಗಮದೊಂದಿಗೆ 1190 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಕುರಿತ ಒಡಂಬಡಿಕೆಗೆ ಅಂಕಿತ ಹಾಕುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ರಾಜಸ್ಥಾನದಲ್ಲಿ ವಿದ್ಯುತ್ ಸಮಸ್ಯೆ ಇದ್ದಾಗ ಛತ್ತೀಸಗಡದಲ್ಲಿರುವ ಕಲ್ಲಿದ್ದಲಿನ ಪ್ರಾಧಿಕಾರಗಳೂ ಸಾಕಷ್ಟು ಸಹಕಾರ ನೀಡಿವೆ. ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಸರಕಾರ ಈ ನಿಟ್ಟಿನಲ್ಲಿ ನೆರವಾಗಿದೆ. ಕೇಂದ್ರ ಕಲ್ಲಿದ್ದಲು ಸಚಿವ ಪ್ರಹ್ಲಾದ ಜೋಶಿಯವರು ರಾಜಸ್ಥಾನದ ವಿದ್ಯುತ್ ಬರ ನೀಗಿಸುವಲ್ಲಿ ಸಕಾರಾತ್ಮಕವಾಗಿ ಸ್ಪಂದಿಸುತ್ತಾ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಪ್ರಲ್ಹಾದ ಜೋಶಿ, ರಾಜಸ್ಥಾನದ ಸೋಲಾರ್ ಪಾರ್ಕ್ ಯೋಜನೆಯಡಿ ಪರಿಸರ ಸ್ನೇಹಿ ವಿದ್ಯುತ್ ಉತ್ಪಾದನೆಗೆ ಒತ್ತು ನೀಡಲಾಗುವುದು. ಕೋಲ್ ಇಂಡಿಯಾ ಲಿ. ಸಂಕಲ್ಪಿತ ಗ್ಯಾಸಿಫಿಕೇಶನ್ ಮೂಲಕ ಪರಿಸರ ಸ್ನೇಹಿ ಪರಿಶುದ್ಧ ಸೋಲಾರ್ ವಿದ್ಯುತ್ ಉತ್ಪಾದನಾ ಪ್ರಕ್ರಿಯೆ ಜಾರಿಗೆ ತರಲಾಗಿದೆ. ನಮ್ಮ ದೇಶ ಮುಂದಿನ 50 ವರ್ಷಗಳಿಗೆ ಸಾಕಾಗುವಷ್ಟು ಕಲ್ಲಿದ್ದಲು ನಿಕ್ಷೇಪ ಹೊಂದಿದೆ. ಈ ಕಲ್ಲಿದ್ದಲನ್ನು ಪರಿಸರ ಸ್ನೇಹಿಯಾಗಿ ಬಳಸಲು ಉದ್ದೇಶಿಸಲಾಗಿದೆ ಎಂದರು.

ತಿಳುವಳಿಕೆ ಪತ್ರಕ್ಕೆ ರಾಜಸ್ಥಾನದ ವಿದ್ಯುತ್ ನಿಗಮದ ವ್ಯವಸ್ಥಾಪಕ ನಿರ್ದೇಶಕ ರಾಜೇಶ್ ಕುಮಾರ್ ಶರ್ಮಾ, ಕೋಲ್ ಇಂಡಿಯಾ ಲಿ. ಸಂಸ್ಥೆಯ ಅಧ್ಯಕ್ಷ ಪ್ರಮೋದ್ ಅಗರವಾಲ್ ಹಾಗೂ ಕೇಂದ್ರ ಕಲ್ಲಿದ್ದಲು ಹಾಗೂ ಗಣಿ ಸಚಿವ ಪ್ರಲ್ಹಾದ ಜೋಶಿ, ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರ ಸಮ್ಮುಖದಲ್ಲಿ ಅಂಕಿತ ಹಾಕಲಾಯಿತು.

ಮತ್ತಷ್ಟು ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:17 am, Fri, 14 October 22

ಭಾಷೆಯಿಂದ ನಾವು, ನಮ್ಮಿಂದ ಭಾಷೆ ಅಲ್ಲ: ಗೋಲ್ಡನ್ ಸ್ಟಾರ್ ಗಣೇಶ್
ಭಾಷೆಯಿಂದ ನಾವು, ನಮ್ಮಿಂದ ಭಾಷೆ ಅಲ್ಲ: ಗೋಲ್ಡನ್ ಸ್ಟಾರ್ ಗಣೇಶ್
ಎಲ್ಲರ ಅಪೇಕ್ಷೆಯಂತೆ ಬಿಜೆಪಿಯಲ್ಲಿ ಖಂಡಿತ ಬದಲಾವಣೆಗಳು ಆಗಲಿವೆ: ಈಶ್ವರಪ್ಪ
ಎಲ್ಲರ ಅಪೇಕ್ಷೆಯಂತೆ ಬಿಜೆಪಿಯಲ್ಲಿ ಖಂಡಿತ ಬದಲಾವಣೆಗಳು ಆಗಲಿವೆ: ಈಶ್ವರಪ್ಪ
ಸುರ್ಜೇವಾಲಾ ನನಗೆ ಬಾಯ್ಮುಚ್ಚಿಕೊಂಡಿರುವಂತೆ ಹೇಳಿದ್ದಾರೆ: ಮಧು ಬಂಗಾರಪ್ಪ
ಸುರ್ಜೇವಾಲಾ ನನಗೆ ಬಾಯ್ಮುಚ್ಚಿಕೊಂಡಿರುವಂತೆ ಹೇಳಿದ್ದಾರೆ: ಮಧು ಬಂಗಾರಪ್ಪ
ಯಾವಾಗಲೂ ಕುಮಾರ್ ಬಂಗಾರಪ್ಪ ಮನೆಯಲ್ಲಿ ಸಭೆ ನಡೆಸುತ್ತಿದ್ದ ರೆಬೆಲ್​ಗಳು
ಯಾವಾಗಲೂ ಕುಮಾರ್ ಬಂಗಾರಪ್ಪ ಮನೆಯಲ್ಲಿ ಸಭೆ ನಡೆಸುತ್ತಿದ್ದ ರೆಬೆಲ್​ಗಳು
ನೀರಿಗಿಳಿಯಬಾರದೆಂಬ ಸೂಚನೆಯಿದ್ದರೂ ಉಲ್ಲಂಘಿಸುತ್ತಿರುವ ಪ್ರವಾಸಿಗರು
ನೀರಿಗಿಳಿಯಬಾರದೆಂಬ ಸೂಚನೆಯಿದ್ದರೂ ಉಲ್ಲಂಘಿಸುತ್ತಿರುವ ಪ್ರವಾಸಿಗರು
ಸಿಎಂ, ಡಿಸಿಎಂ ಆದಿಯಾಗಿ ಎಲ್ಲರೂ ಫೋನ್ ರಿಸೀವ್ ಮಾಡುತ್ತಾರೆ: ಲಕ್ಷ್ಮಣ ಸವದಿ
ಸಿಎಂ, ಡಿಸಿಎಂ ಆದಿಯಾಗಿ ಎಲ್ಲರೂ ಫೋನ್ ರಿಸೀವ್ ಮಾಡುತ್ತಾರೆ: ಲಕ್ಷ್ಮಣ ಸವದಿ
ಕವಡೆ ಶಾಸ್ತ್ರವೇ ನಿಜವಾದರೆ ಕಾಂಗ್ರೆಸ್ ನಾಯಕರು ಆಗೇನು ಹೇಳುತ್ತಾರೆ? ಅಶೋಕ
ಕವಡೆ ಶಾಸ್ತ್ರವೇ ನಿಜವಾದರೆ ಕಾಂಗ್ರೆಸ್ ನಾಯಕರು ಆಗೇನು ಹೇಳುತ್ತಾರೆ? ಅಶೋಕ
ಗಣ್ಯರಿಗೆ ಖಾಸಗಿ ಆಸ್ಪತ್ರೆಗಳೇ ಯಾಕೆ? ಸರ್ಕಾರೀ ಆಸ್ಪತ್ರೆ ಯಾಕೆ ಬೇಡ?
ಗಣ್ಯರಿಗೆ ಖಾಸಗಿ ಆಸ್ಪತ್ರೆಗಳೇ ಯಾಕೆ? ಸರ್ಕಾರೀ ಆಸ್ಪತ್ರೆ ಯಾಕೆ ಬೇಡ?
ಹೋಶಿಯಾರ್​ಪುರದಲ್ಲಿ ಬಸ್ ಪಲ್ಟಿ, 8 ಮಂದಿ ಸಾವು, 25 ಜನರಿಗೆ ಗಾಯ
ಹೋಶಿಯಾರ್​ಪುರದಲ್ಲಿ ಬಸ್ ಪಲ್ಟಿ, 8 ಮಂದಿ ಸಾವು, 25 ಜನರಿಗೆ ಗಾಯ
ಪಕ್ಷ ಸಂಘಟನೆಗೊಂಡು 2028ರಲ್ಲಿ ಅಧಿಕಾರಕ್ಕೆ ಬರೋದು ನಿಶ್ಚಿತ: ಕುಮಟಳ್ಳಿ
ಪಕ್ಷ ಸಂಘಟನೆಗೊಂಡು 2028ರಲ್ಲಿ ಅಧಿಕಾರಕ್ಕೆ ಬರೋದು ನಿಶ್ಚಿತ: ಕುಮಟಳ್ಳಿ