ರಾಜಸ್ಥಾನ ಮುಖ್ಯಮಂತ್ರಿ ರೇಸ್​​​ನಿಂದ ಹೊರಬಿದ್ದರೇ ಬಾಬಾ ಬಾಲಕನಾಥ್? ಮಾರ್ಮಿಕ ನುಡಿಗಳು ಇಲ್ಲಿವೆ

ಬಾಬಾ ಬಾಲಕನಾಥ್ ಅವರು ಅಲ್ವಾರ್‌ನ ತಿಜಾರಾ ಕ್ಷೇತ್ರದಿಂದ ಶಾಸಕರಾಗಿದ್ದಾರೆ. ಅವರು ಕಾಂಗ್ರೆಸ್‌ನ ಇಮ್ರಾನ್ ಖಾನ್ ಅವರನ್ನು ಸೋಲಿಸಿದ್ದಾರೆ. ಮುಖ್ಯಮಂತ್ರಿ ಆಕಾಂಕ್ಷಿಗಳಲ್ಲಿ ಅವರ ಹೆಸರು ಚರ್ಚೆಯಾಗುತ್ತಿದೆ. ಇವರನ್ನು ಮುಖ್ಯಮಂತ್ರಿ ಮಾಡುವಂತೆ ಸಾಮಾಜಿಕ ಜಾಲತಾಣಗಳಲ್ಲಿಯೂ ಆಗ್ರಹ ಕೇಳಿ ಬರುತ್ತಿದೆ. ಆದರೆ, ಶನಿವಾರ ಅವರು ಮಾಡಿರುವ ಮಾರ್ಮಿಕ ಟ್ವೀಟ್ ಕುತೂಹಲ ಮೂಡಿಸಿದೆ.

ರಾಜಸ್ಥಾನ ಮುಖ್ಯಮಂತ್ರಿ ರೇಸ್​​​ನಿಂದ ಹೊರಬಿದ್ದರೇ ಬಾಬಾ ಬಾಲಕನಾಥ್? ಮಾರ್ಮಿಕ ನುಡಿಗಳು ಇಲ್ಲಿವೆ
ಬಾಬಾ ಬಾಲಕನಾಥ್
Follow us
Ganapathi Sharma
|

Updated on: Dec 09, 2023 | 12:09 PM

ಜೈಪುರ, ಡಿಸೆಂಬರ್ 9: ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (BJP) ಭರ್ಜರಿ ಗೆಲುವಿನ ನಂತರ ಬಾಬಾ ಬಾಲಕನಾಥ್ (Mahant Balaknath) ಮುಖ್ಯಮಂತ್ರಿ ರೇಸ್‌ನಲ್ಲಿದ್ದಾರೆ ಎನ್ನಲಾಗಿತ್ತು. ಅವರು ಸಂಸತ್ತಿನ ಸದಸ್ಯತ್ವಕ್ಕೂ ರಾಜೀನಾಮೆ ನೀಡಿದ್ದಾರೆ. ಇದರ ಬೆನ್ನಲ್ಲೇ ಪಕ್ಷವು ಅವರಿಗೆ ರಾಜ್ಯದ ಆಡಳಿತದ ಚುಕ್ಕಾಣಿ ವಹಿಸಬಹುದು ಎಂಬ ಚರ್ಚೆ ಆರಂಭವಾಗಿತ್ತು. ಅವರನ್ನು ರಾಜಸ್ಥಾನದ ಮುಖ್ಯಮಂತ್ರಿಯನ್ನಾಗಿ ಮಾಡುವಂತೆ ಸಾಮಾಜಿಕ ಜಾಲತಾಣಗಳಲ್ಲಿಯೂ ಭಾರೀ ಆಗ್ರಹ ವ್ಯಕ್ತವಾಗಿದೆ. ಈ ಎಲ್ಲಾ ಚರ್ಚೆಗಳ ನಡುವೆ ಬಾಬಾ ಬಾಲಕನಾಥ್ ಶನಿವಾರ ಬೆಳಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಪೋಸ್ಟ್ ಮಾಡಿದ ಮಾರ್ಮಿಕ ಸಂದೇಶ ಕುತೂಹಲಕ್ಕೆ ಕಾರಣವಾಗಿದೆ. ರಾಜಸ್ಥಾನ ಸಿಎಂ ರೇಸ್​​ನಿಂದ ಅವರು ಹೊರಗುಳಿದರೇ ಎಂಬ ಅನುಮಾನ ಸೃಷ್ಟಿಸಿದೆ.

‘ಪಕ್ಷ ಮತ್ತು ಪ್ರಧಾನಿ ನರೇಂದ್ರ ಮೋದಿ ಜೀಯವರ ನೇತೃತ್ವದಲ್ಲಿ ಪ್ರಥಮ ಬಾರಿಗೆ ಸಂಸದ, ಶಾಸಕರಾಗುವ ಮೂಲಕ ರಾಷ್ಟ್ರಸೇವೆ ಮಾಡುವ ಅವಕಾಶವನ್ನು ಸಾರ್ವಜನಿಕರು ನನಗೆ ನೀಡಿದ್ದಾರೆ. ಚುನಾವಣೆ ಫಲಿತಾಂಶ ಬಂದ ನಂತರ ಮಾಧ್ಯಮಗಳು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ನಡೆಯುತ್ತಿರುವ ಚರ್ಚೆಗಳನ್ನು ನಿರ್ಲಕ್ಷಿಸಿ. ಪ್ರಧಾನಿಯವರ ಮಾರ್ಗದರ್ಶನದಲ್ಲಿ ನಾನು ಇನ್ನೂ ಅನುಭವ ಪಡೆಯಬೇಕಿದೆ’ ಎಂದು ಬಾಲಕನಾಥ್ ಎಕ್ಸ್​ ಸಂದೇಶದಲ್ಲಿ ಉಲ್ಲೇಖಿಸಿದ್ದಾರೆ.

ಇದರೊಂದಿಗೆ, ಉತ್ತರ ಪ್ರದೇಶದ ಮಾದರಿಯಲ್ಲಿ ರಾಜಸ್ಥಾನದಲ್ಲಿ ಬಾಲಕನಾಥ್​ಗೆ ಮುಖ್ಯಮಂತ್ರಿ ಸ್ಥಾನ ನೀಡಬಹುದು ಎಂಬುದು ಕೇವಲ ಊಹಾಪೋಹವಷ್ಟೆಯಾ ಎಂಬ ಅನುಮಾನ ಸೃಷ್ಟಿಯಾಗಿದೆ.

ಬಾಬಾ ಬಾಲಕನಾಥ್ ಅವರು ಆಲ್ವಾರ್ ಕ್ಷೇತ್ರದ ಸಂಸದರಾಗಿದ್ದವರು. ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು.

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಂತೆ ಬಾಬಾ ಬಾಲಕನಾಥ್ ಕೂಡ ನಾಥ ಪಂಥಕ್ಕೆ ಸೇರಿದವರು. ಬಾಬಾ ಬಾಲಕನಾಥ್ ಅವರು ಬಾಬಾ ಮಸ್ತನಾಥ್ ವಿಶ್ವವಿದ್ಯಾಲಯದ ಕುಲಪತಿಯೂ ಹೌದು. ಅವರು ಹಿಂದೂ ಧರ್ಮದ ನಾಥ ಪಂಥದ 8 ನೇ ಮಹಂತ್ ಕೂಡ.

ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್‌ಗಢದಲ್ಲಿ ಬಿಜೆಪಿ ಗೆಲುವಿನ ಕುರಿತು ಮಾತನಾಡಿರುವ ಬಾಬಾ ಬಾಲಕನಾಥ್, ಮಧ್ಯಪ್ರದೇಶ ಮತ್ತು ಗುಜರಾತ್‌ನಂತೆ ಬಿಜೆಪಿಯು ರಾಜಸ್ಥಾನದಲ್ಲಿ ದೀರ್ಘಕಾಲ ಆಡಳಿತದಲ್ಲುಳಿದು ರಾಜ್ಯದ ಜನರ ಸೇವೆ ಮಾಡಲಿದೆ. ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡಲು ನಾನು ಪ್ರಧಾನಿ ಜತೆ ಕೈಜೋಡಿಸಲಿದ್ದೇನೆ. ಯಾವಾಗಲೂ ಪಕ್ಷಕ್ಕಾಗಿ ಕೆಲಸ ಮಾಡುತ್ತೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ರಾಜಸ್ಥಾನದ ಸಿಎಂ ಸ್ಥಾನದ ರೇಸ್​ನ ಮುಂಚೂಣಿಯಲ್ಲಿ ಮಹಂತ್ ಬಾಲಕನಾಥ್; ಯುಪಿ ಯೋಗಿಗೂ ಇವರಿಗೂ ಏನು ಸಂಬಂಧ?

ವಸುಂಧರಾ ರಾಜೇ ಪೈಪೋಟಿ

ಮತ್ತೊಂದೆಡೆ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಗಳಲ್ಲಿ ಮಾಜಿ ಸಿಎಂ ವಸುಂಧರಾ ರಾಜೇ ಅವರ ಹೆಸರೂ ಮುಂಚೂಣಿಯಲ್ಲಿ ಕೇಳಿಬಂದಿದೆ. ಅವರು ಈಗಾಗಲೇ ಶಾಸಕರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನೂ ಭೇಟಿಯಾಗಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ