ರಾಜಸ್ಥಾನ: ಕಾಂಗ್ರೆಸ್​ನ ಮಾಜಿ ಶಾಸಕ ವಿವೇಕ್ ಆತ್ಮಹತ್ಯೆ, ತಂದೆಯ ಸ್ಥಿತಿಯೂ ಚಿಂತಾಜನಕ

ರಾಜಸ್ಥಾನದ ಭಿಲ್ವಾರ ಜಿಲ್ಲೆಯ ಮಂಡಲಗಢ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್​ನ ಮಾಜಿ​ ಶಾಸಕ ವಿವೇಕ್ ಧಾಕಡ್(Vivek Dhakad) ಇಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ಇನ್ನೂ ತಿಳಿದುಬಂದಿಲ್ಲ. ಸುಭಾಷ್​ನಗರದಲ್ಲಿರುವ ತಮ್ಮ ಮನೆಯಲ್ಲಿ ವಿವೇಕ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಹಾಗೆಯೇ ಅವರ ತಂದೆ ಕೂಡ ವಿಷ ಸೇವಿಸಿದ್ದು, ಪರಿಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗಿದೆ. ಘಟನೆ ಕುರಿತು ಮಾಹಿತಿ ಪಡೆದ ಕೂಡಲೇ ಸುಭಾಷ್​ನಗರ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

ರಾಜಸ್ಥಾನ: ಕಾಂಗ್ರೆಸ್​ನ ಮಾಜಿ ಶಾಸಕ ವಿವೇಕ್ ಆತ್ಮಹತ್ಯೆ, ತಂದೆಯ ಸ್ಥಿತಿಯೂ ಚಿಂತಾಜನಕ
ವಿವೇಕ್ ಧಾಕಡ್Image Credit source: News24
Follow us
ನಯನಾ ರಾಜೀವ್
|

Updated on: Apr 04, 2024 | 11:33 AM

ರಾಜಸ್ಥಾನದ ಭಿಲ್ವಾರ ಜಿಲ್ಲೆಯ ಮಂಡಲಗಢ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್​ನ ಮಾಜಿ​ ಶಾಸಕ ವಿವೇಕ್ ಧಾಕಡ್(Vivek Dhakad) ಇಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ಇನ್ನೂ ತಿಳಿದುಬಂದಿಲ್ಲ. ಸುಭಾಷ್​ನಗರದಲ್ಲಿರುವ ತಮ್ಮ ಮನೆಯಲ್ಲಿ ವಿವೇಕ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಹಾಗೆಯೇ ಅವರ ತಂದೆ ಕೂಡ ವಿಷ ಸೇವಿಸಿದ್ದು, ಪರಿಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗಿದೆ. ಘಟನೆ ಕುರಿತು ಮಾಹಿತಿ ಪಡೆದ ಕೂಡಲೇ ಸುಭಾಷ್​ನಗರ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

ತಮ್ಮ ಮನೆಯ ಕೋಣೆಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಕೈ ನರವನ್ನು ಕತ್ತರಿಸಿಕೊಂಡಿದ್ದರು, ಕುಟುಂಬಸ್ಥರು ಕೂಡಲೇ ಅವರನ್ನು ಮಹಾತ್ಮ ಗಾಂಧಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ವೇಳೆ ಮೃತಪಟ್ಟಿದ್ದಾರೆ. ಕೌಟುಂಬಿಕ ಕಲಹವೇ ಇದಕ್ಕೆ ಕಾರಣ ಎನ್ನಲಾಗಿದೆ, ಮೃತದೇಹವನ್ನು ಶಾವಾಗಾರದಲ್ಲಿ ಇರಿಸಲಾಗಿದೆ.

2013ರಲ್ಲಿ ನಡೆದ ವಿಧಾನಸಭಾ ಉಪ ಚುನಾವಣೆಯಲ್ಲಿ ವಿವೇಕ್​ ಕಾಂಗ್ರೆಸ್​ನಿಂದ ಸ್ಪರ್ಧಿಸಿದ್ದರು. ಬಿಜೆಪಿಯಿಂದ ಶಕ್ತಿ ಸಿಂಗ್ ಹಡಾ ಕಣದಲ್ಲಿದ್ದರು ಆಗ ವಿವೇಕ್​ ಧಾಕಡ್ ಗೆದ್ದಿದ್ದರು.

ಮತ್ತಷ್ಟು ಓದಿ:ಪತ್ನಿ ಅಕ್ರಮ ಸಂಬಂಧ ಶಂಕೆ; ಇಬ್ಬರು ಮಕ್ಕಳೊಂದಿಗೆ ನೇಣು ಬಿಗಿದುಕೊಂಡು ಪತಿ ಆತ್ಮಹತ್ಯೆ

ವಿವೇಕ್ ಧಾಕಡ್ ಅವರು ಮಂಡಲಗಢ ವಿಧಾನಸಭಾ ಕ್ಷೇತ್ರದಿಂದ ನಾಲ್ಕು ಬಾರಿ ಚುನಾವಣೆಗೆ ಸ್ಪರ್ಧಿಸಿದ್ದರು, ಆದರೆ ಅವರು ಉಪ ಚುನಾವಣೆಯಲ್ಲಿ ಗೆದ್ದಿದ್ದರು. ವಸುಂಧರಾ ರಾಜೆ ಅವರು ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ 2018ರ ಉಪ ಚುನಾವಣೆಯಲ್ಲಿ ಅವರು ಗೆದ್ದಿದ್ದರು. ಕೀರ್ತಿ ಬೈಸಾ ನಿಧನದಿಂದಾಗಿ ಚುನಾವಣೆ ನಡೆದಿತ್ತು. ಧಾಕಡ್ 9 ತಿಂಗಳ ಕಾಲ ಶಾಸಕರಾಗಿದ್ದರು. ಮೂರು ಚುನಾವಣೆಯಲ್ಲಿ ಸೋತಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ