ರಾಜಸ್ಥಾನದಲ್ಲಿ ಗೆಹ್ಲೋಟ್​ ಆಪ್ತ ಗಣೇಶ್ ಘೋಗ್ರಾ ಕಾಂಗ್ರೆಸ್ ಶಾಸಕ ಸ್ಥಾನಕ್ಕೆ ರಾಜೀನಾಮೆ

ಕಾಂಗ್ರೆಸ್ ಶಾಸಕ ಗಣೇಶ್ ಘೋಗ್ರಾ ಅವರ ರಾಜೀನಾಮೆಯನ್ನು ಅಂಗೀಕರಿಸಲಾಗುತ್ತದೆಯೇ? ಇಲ್ಲವೇ? ಎಂಬುದನ್ನು ಕಾದು ನೋಡಬೇಕಾಗಿದೆ. ಮುಂದಿನ ವರ್ಷದ ವಿಧಾನಸಭಾ ಚುನಾವಣೆಗೆ ತಯಾರಿ ಆರಂಭಿಸಿರುವ ಕಾಂಗ್ರೆಸ್​ಗೆ ಈ ಬೆಳವಣಿಗೆ ಆಘಾತ ತಂದಿದೆ.

ರಾಜಸ್ಥಾನದಲ್ಲಿ ಗೆಹ್ಲೋಟ್​ ಆಪ್ತ ಗಣೇಶ್ ಘೋಗ್ರಾ ಕಾಂಗ್ರೆಸ್ ಶಾಸಕ ಸ್ಥಾನಕ್ಕೆ ರಾಜೀನಾಮೆ
ಗಣೇಶ್ ಘೋಗ್ರಾ
Follow us
| Updated By: ಸುಷ್ಮಾ ಚಕ್ರೆ

Updated on:May 19, 2022 | 12:55 PM

ಜೈಪುರ: ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ (Ashok Gehlot) ಅವರ ಬೆಂಬಲಿಗ ಎಂದು ಹೆಸರಾಗಿರುವ ರಾಜಸ್ಥಾನದ ಕಾಂಗ್ರೆಸ್ ಶಾಸಕರೊಬ್ಬರು (Congress MLA) ರಾಜೀನಾಮೆ ನೀಡಿದ್ದಾರೆ. ಡುಂಗರಪುರ ವಿಧಾನಸಭೆಯನ್ನು ಪ್ರತಿನಿಧಿಸುತ್ತಿರುವ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಗಣೇಶ್ ಘೋಗ್ರಾ ಅವರು ಆಡಳಿತ ಪಕ್ಷದ ಶಾಸಕರಾಗಿದ್ದರೂ ತಮ್ಮನ್ನು ಕಡೆಗಣಿಸಲಾಗುತ್ತಿದೆ ಎಂಬ ಕಾರಣಕ್ಕೆ ರಾಜೀನಾಮೆ ನೀಡಿದ್ದಾರೆ. ಗುಜರಾತ್​ನಲ್ಲಿ ಪಾಟೀದಾರ್ ಮೀಸಲಾತಿ ಹೋರಾಟದ ಮೂಲಕ ರಾಜಕೀಯವಾಗಿ ಗುರುತಿಸಿಕೊಂಡಿದ್ದ ಹಾರ್ದಿಕ್ ಪಟೇಲ್ (Hardik Patel) ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ರಾಜಸ್ಥಾನದಲ್ಲೂ ಕಾಂಗ್ರೆಸ್ ಶಾಸಕ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆದರೆ, ಅವರಿನ್ನೂ ಕಾಂಗ್ರೆಸ್ ಪಕ್ಷವನ್ನು ತೊರೆದಿಲ್ಲ.

‘ಜನರ ಸಮಸ್ಯೆಗಳ ಬಗ್ಗೆ ಹೇಳಿದರೆ ಆಡಳಿತದವರು ಕೇಳುತ್ತಿಲ್ಲ’ ಎಂದು ಗಣೇಶ್ ಘೋಗ್ರಾ ರಾಜೀನಾಮೆ ಪತ್ರದಲ್ಲಿ ಮುಖ್ಯಮಂತ್ರಿಗಳಿಗೆ ಬರೆದು ಸ್ಪೀಕರ್ ಹಾಗೂ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೂ ಕಳುಹಿಸಿದ್ದಾರೆ. ಸುರಪುರ ಗ್ರಾಮದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದಲ್ಲಿ ಭೂ ದಾಖಲೆಗಳ ವಿತರಣೆಗೆ ಸಂಬಂಧಿಸಿದಂತೆ ಡುಂಗರ್‌ಪುರದಲ್ಲಿ ಜಿಲ್ಲಾಡಳಿತದೊಂದಿಗೆ ವಾಗ್ವಾದ ನಡೆಸಿದ ಬೆನ್ನಲ್ಲೇ ಶಾಸಕ ಸ್ಥಾನಕ್ಕೆ ಗಣೇಶ್ ಘೋಗ್ರಾ ರಾಜೀನಾಮೆ ನೀಡಿದ್ದಾರೆ.

ಇದನ್ನೂ ಓದಿ: Breaking: ಕಾಂಗ್ರೆಸ್ ಪಕ್ಷಕ್ಕೆ ಹಾರ್ದಿಕ್ ಪಟೇಲ್ ರಾಜೀನಾಮೆ

ಇದನ್ನೂ ಓದಿ
Image
MCD Merger ಮೇ 22 ರಂದು ದೆಹಲಿಯ ಮೂರು ನಾಗರಿಕ ಸಂಸ್ಥೆಗಳ ವಿಲೀನ : ಅಧಿಸೂಚನೆ ಪ್ರಕಟಿಸಿದ ಕೇಂದ್ರ
Image
ಜ್ಞಾನವಾಪಿ ಮಸೀದಿಯಲ್ಲಿ ಸಿಕ್ಕಿದ್ದು ಶಿವಲಿಂಗ ಅಲ್ಲ,ಕಾರಂಜಿ; ತಾಜ್ ಮಹಲ್​​ನ ಕಾರಂಜಿಗಳನ್ನು ಮುಚ್ಚಿ: ಅಸಾದುದ್ದೀನ್ ಓವೈಸಿ
Image
ಜನರ ಗಮನ ಬೇರೆಡೆಗೆ ಸೆಳೆಯುವುದರಿಂದ ಸತ್ಯಗಳು ಬದಲಾಗುವುದಿಲ್ಲ, ಭಾರತವು ಶ್ರೀಲಂಕಾದಂತೆ ಕಾಣುತ್ತದೆ: ರಾಹುಲ್ ಗಾಂಧಿ
Image
Rain Updates: ಅಸ್ಸಾಂನಲ್ಲಿ ಭಾರೀ ಮಳೆಯಿಂದ 8 ಜನ ಸಾವು; ದಕ್ಷಿಣ ಭಾರತದಲ್ಲಿ ರೆಡ್ ಅಲರ್ಟ್​ ಘೋಷಣೆ

ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ಆದರೆ, ನಾನು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡುವ ಬಗ್ಗೆ ಯೋಚನೆ ಮಾಡಿಲ್ಲ. ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಉದಯಪುರದಲ್ಲಿ ಕಾಂಗ್ರೆಸ್ ಸಮಾವೇಶವನ್ನು ಯಶಸ್ವಿಯಾಗಿ ಆಯೋಜಿಸಿದ ಬೆನ್ನಲ್ಲೇ ಹಾಗೂ ಡುಂಗರ್‌ಪುರದಲ್ಲಿ ಬುಡಕಟ್ಟು ರ್ಯಾಲಿಯಲ್ಲಿ ರಾಹುಲ್ ಗಾಂಧಿ ಭಾಷಣ ಮಾಡಿದ ನಂತರವೇ ಈ ಘಟನೆ ನಡೆದಿದೆ. ರಾಹುಲ್ ಗಾಂಧಿ ಭಾಗವಹಿಸಿದ್ದ ಈ ರ್ಯಾಲಿಯಲ್ಲಿ ಗಣೇಶ್ ಘೋಗ್ರಾ ಪ್ರಮುಖ ಭಾಷಣಕಾರರಲ್ಲಿ ಒಬ್ಬರಾಗಿದ್ದರು.

ಕಾಂಗ್ರೆಸ್ ಶಾಸಕ ಗಣೇಶ್ ಘೋಗ್ರಾ ಅವರ ರಾಜೀನಾಮೆಯನ್ನು ಅಂಗೀಕರಿಸಲಾಗುತ್ತದೆಯೇ ಅಥವಾ ಇಲ್ಲವೇ ಎಂಬುದನ್ನು ಕಾದು ನೋಡಬೇಕಾಗಿದೆ. ಆದರೆ ಮುಂದಿನ ವರ್ಷದ ವಿಧಾನಸಭಾ ಚುನಾವಣೆಗೆ ತಯಾರಿ ಆರಂಭಿಸಿರುವ ಕಾಂಗ್ರೆಸ್ ಪಕ್ಷಕ್ಕೆ ಈ ಬೆಳವಣಿಗೆ ಆಘಾತ ತಂದಿದೆ. ಕಳೆದ 3 ದಶಕಗಳಲ್ಲಿ ಪ್ರತಿ ಚುನಾವಣೆಯಲ್ಲೂ ಅಧಿಕಾರದಲ್ಲಿರುವ ಪಕ್ಷವನ್ನು ಹೊರಗಿಟ್ಟಿರುವ ಕಾಂಗ್ರೆಸ್ ರಾಜಸ್ಥಾನದಲ್ಲಿ ಮತ್ತೊಂದು ಅವಧಿಗೆ ಅಧಿಕಾರಕ್ಕೆ ಬರಲು ಪ್ರಯತ್ನಿಸುತ್ತಿದೆ.

ಕಾಂಗ್ರೆಸ್ ಪಕ್ಷದ ಎಲ್ಲಾ ಹುದ್ದೆಗಳಿಗೂ ತಾವು ರಾಜೀನಾಮೆ ನೀಡುತ್ತಿರುವುದಾಗಿ ಹಾರ್ದಿಕ್ ಪಟೇಲ್ ಹೇಳಿದ್ದರು. ಗುಜರಾತ್​ನಲ್ಲಿ ವರ್ಷಾಂತ್ಯಕ್ಕೆ ವಿಧಾನಸಭಾ ಚುನಾವಣೆ ನಡೆಯಲಿದ್ದು, ಚುನಾವಣೆಗೂ ಮುನ್ನ ಹಾರ್ದಿಕ್ ಪಟೇಲ್ ಕಾಂಗ್ರೆಸ್ ತೊರೆದಿರುವುದು ಕಾಂಗ್ರೆಸ್​ಗೆ ಆಘಾತ ತಂದಿದೆ. ಸ್ಥಳೀಯ ಸಂಘಟನೆಯ ವಿಚಾರವಾಗಿ ರಾಜ್ಯ ಮಟ್ಟದ ಕಾಂಗ್ರೆಸ್​ನೊಂದಿಗೆ ಹಾರ್ದಿಕ್ ಪಟೇಲ್ ಅಸಮಾಧಾನ ಹೊಂದಿದ್ದರು ಎನ್ನಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:53 pm, Thu, 19 May 22

ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ